ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಡಳಿತದಲ್ಲಿ ಕನ್ನಡ ಬಳಸಲು ಸಿದ್ಧ : ಸಿದ್ದರಾಮಯ್ಯ

|
Google Oneindia Kannada News

ಬೆಂಗಳೂರು, ಜ.7 : ಕರ್ನಾಟಕ, ಕನ್ನಡ, ಕನ್ನಡಿಗರ ಸಂಬಂಧಿಸಿದ ಯಾವುದೇ ವಿಚಾರದಲ್ಲಿ ಸರ್ಕಾರ ನಿರ್ಲಕ್ಷ್ಯ ಮಾಡುವುದಿಲ್ಲ, ಸರ್ಕಾರದ ಆಡಳಿತವನ್ನು ಸಂಪೂರ್ಣವಾಗಿ ಕನ್ನಡದಲ್ಲಿ ಮಾಡಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕನ್ನಡ ನಾಡು-ನುಡಿಯ ರಕ್ಷಣೆಗೂ ಅಗತ್ಯ ಅನುದಾನ ನೀಡುವುದಾಗಿ ಅವರು ಭರವಸೆ ನೀಡಿದ್ದಾರೆ.

ಮಂಗಳವಾರ ಮಡಿಕೇರಿಯಲ್ಲಿ 80ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭಾರತೀಸುತ ವೇದಿಕೆಯಲ್ಲಿ ಚಾಲನೆ ನೀಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಆಡಳಿತದ ಎಲ್ಲ ಹಂತಗಳನ್ನೂ ಕನ್ನಡಮಯವಾಗಿರಬೇಕು ಎಂಬ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ಇದನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಲು ಸಿದ್ಧವಿರುವುದಾಗಿ ಅವರು ಹೇಳಿದರು. [ಸಮ್ಮೇಳನಾಧ್ಯಕ್ಷರ ನಾ ಡಿಸೋಜ ಭಾಷಣ]

Siddaramaiah

ಸರ್ಕಾರ ಕನ್ನಡ ಸಾಹಿತ್ಯ, ಸಂಸ್ಕೃತಿಗೆ ಹೆಚ್ಚಿನ ಆದ್ಯತೆ ನೀಡಿದೆ. ಭಾಷೆಯ ಅಭಿವೃದ್ಧಿಗಾಗಿ ಬಜೆಟ್ ನಲ್ಲಿ 250 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ನಾಡು-ನುಡಿಯ ಅಭಿವೃದ್ಧಿಗಾಗಿ ಅಗತ್ಯ ಅನುದಾನಗಳನ್ನು ನೀಡಲು ಸರ್ಕಾರ ಸದಾ ಸಿದ್ಧವಾಗಿದೆ ಎಂದು ಸಿದ್ದರಾಮಯ್ಯ ಘೋಷಿಸಿದರು. ಜಿಲ್ಲೆಗಳ ಸಾಹಿತ್ಯ ಸಮ್ಮೆಳನಗಳಿಗೆ 3 ಲಕ್ಷ ರೂ ಅನುದಾನವನ್ನು ಸರ್ಕಾರ ನೀಡುತ್ತಿದೆ. ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೂ ಅಗತ್ಯ ಅನುದಾನ ನೀಡಲಾಗುತ್ತಿದೆ. ಈ ವ್ಯವಸ್ಥೆಯನ್ನು ಮುಂದುವರೆಸಲಾಗುವುದು ಎಂದು ಹೇಳಿದರು.

ಕನ್ನಡ ಶಾಸ್ತ್ರೀಯ ಭಾಷೆಯ ಅಭಿವೃದ್ಧಿಗೆ ಮೀಸಲಾಗಿರುವ ಹಣ ಸದುಪಯೋಗವಾಗಬೇಕು. ಈ ವಿಚಾರದಲ್ಲಿ ಕರ್ತವ್ಯ ಲೋಪ ಎಸಗಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಎಚ್ಚರಿಕೆ ನೀಡಿದರು. ಸಮಾಜ ಸುಧಾರಣೆಯ ಕಾರ್ಯಗಳಿಗೆ ಸಾಹಿತಿಗಳು ಸಹ ಸಲಹೆಗಳನ್ನು ನೀಡಬೇಕು. ಸಾಹಿತ್ಯ ಸಮ್ಮೇಳನದಲ್ಲಿ ಈ ಬಗ್ಗೆ ಚರ್ಚೆಯಾಗಬೇಕು ಎಂದು ಸಿಎಂ ಅಭಿಪ್ರಾಯಪಟ್ಟರು.

English summary
CM Siddaramaiah announced that We are ready to use Kannada in administration. On Thursday, Jan 7 he inaugurated 80th Akhila Bharata Kannada Sahitya Sammelana at Madikeri.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X