•  

60 ಲಕ್ಷ ನಿಧಿ ಸಂಗ್ರಹಿಸಿದ ಕನ್ನಡ ಚಿತ್ರೋದ್ಯಮ

ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗಾಗಿ ಕನ್ನಡ ಚಿತ್ರೋದ್ಯಮ ಸಂಗ್ರಹಿಸಿದ ಒಟ್ಟು ರು.60 ಲಕ್ಷಗಳನ್ನು ಮುಖ್ಯಮಂತ್ರಿಗಳ ನೆರೆ ಪರಿಹಾರ ನಿಧಿಗೆ ನವೆಂಬರ್ 1ರಂದು ವಿಧನಾಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ನೀಡಲಾಯಿತು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವರನಟ ಡಾ.ರಾಜ್ ಕುಮಾರ್ ಅವರ ಅಂಚೆಚೀಟಿಯನ್ನು ಬಿಡುಗಡೆ ಮಾಡಿದರು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಡಾ.ಜಯಮಾಲಾ, ರಾಕ್ ಲೈನ್ ವೆಂಕಟೇಶ್, ಅಶೋಕ್, ಥಾಮಸ್ ಡಿ ಸೋಜ ಮತ್ತು ಸಾ.ರಾ.ಗೋವಿಂದು ಚೆಕ್ ಅನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಮರ್ಪಿಸಿದರು. ವೇದಿಕೆಯಲ್ಲಿ ಹಿರಿಯ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಉಪಸ್ಥಿತರಿದ್ದರು.

ನೆರೆ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ ಕನ್ನಡ ಚಿತ್ರೋದ್ಯಮ ಹಣ ಸಂಗ್ರಹದಲ್ಲಿ ತೊಡಗಿಕೊಂಡಿದೆ. ನೆರೆ ಸಂತ್ರಸ್ತರ ಬದುಕನ್ನು ಮತ್ತೆ ಕಟ್ಟಿಕೊಡುವ ಪ್ರಯತ್ನವನ್ನ್ನು ಮಾಡುತ್ತಿದ್ದೇವೆ ಎಂದು ಜಯಮಾಲಾ ತಿಳಿಸಿದರು. ಇದೇ ಸಂದರ್ಭದಲ್ಲಿ ನೆರೆ ಸಂತ್ರಸ್ತರ ನಿಧಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ರು.50 ಕೋಟಿ ಸಲ್ಲಿಸಿತು.

ನೆರೆಸಂತ್ರಸ್ತರಿಗೆ ನೆರವಿನ ಹಸ್ತ ನೀಡಿದ ಕೆಎಫ್ ಸಿಸಿ ಹಾಗೂ ಬಿಡಿಎಗೆ ಮುಖ್ಯಮಂತ್ರಿ ಯಡಿಯೂರಪ್ಪ ಕೃತಜ್ಞತೆಗಳನ್ನು ತಿಳಿಸಿದರು. ನೆರೆ ಸಂತ್ರಸ್ತರ ವಿಚಾರದಲ್ಲಿ ಯಾವುದೇ ರಾಜಕೀಯ ಬೇಡ. ಎಲ್ಲರೂ ಒಟ್ಟಿಗೆ ಕೈಜೋಡಿಸಿ ಉತ್ತರ ಕರ್ನಾಟಕದ ನೆರೆ ಸಂತ್ರಸ್ತರ ಬದುಕನ್ನು ಕಟ್ಟಿಕೊಡೋಣ ಎಂದರು.

(ದಟ್ಸ್ ಕನ್ನಡ ಚಿತ್ರವಾರ್ತೆ)
ನವೆಂಬರ್ 2, 2009 ರ ಇತರೆ ಸುದ್ದಿ/ಲೇಖನಗಳನ್ನು ಓದಿ
 
1st Test , Lord's Cricket Ground, St John's Wood
England decided to field
IPL, Himachal Pradesh Cricket Association Stadium, Dharmasala
Match starts at 04:00 pm IST  
IPL, Feroz Shah Kotla, Delhi
Match starts at 08:00 pm IST  

ಪ್ರಕೃತಿಯ ವಿಕೋಪ, ಸರಕಾರದ ಮೇಲೆ ಜನರ ಕೋಪ

ಬೆಂಗಳೂರು, ಅ. 3 : ಮಳೆಯ ದಾಂಗುಡಿ ರಾಜ್ಯದಲ್ಲಿ ತನ್ನ ಅಟ್ಟಹಾಸ ಮೆರೆದಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ವಿಪ್ಪತ್ತು ಘೋಷಿಸಬೇಕೆಂದು ಕೇಂದ್ರಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ. ಮತ್ತು 10 ಸಾವಿರ ಕೋಟಿ ರು. ಪರಿಹಾರ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದ್ದಾರೆ. ಇಂಥ ವಿಪ್ಪತ್ತಿನ ಸಮಯದಲ್ಲಿ ವಿರೋಧ ಪಕ್ಷಗಳು ಸರಕಾರವನ್ನು ಟೀಕಿಸುವುದನ್ನು ಬಿಟ್ಟು.....
User Comments
ಕನ್ನಡಿಗ 03 Nov 2009 03:35 pm
ಆ ಮಾರಿಮುತ್ತು ಎಷ್ಟು ಕೊಟ್ಟಿದ್ದಾಳೆ
ಜಯಂತಿ 03 Nov 2009 03:01 pm
ಬಿ. ಸರೋಜಾ ದೇವಿ ಎಷ್ಟು ಕೊಟ್ಟಿದಾರೆ
[ ಅಭಿಪ್ರಾಯ ಬರೆಯಿರಿ ]
Oneindia  Oneindia Login
Follow Oneindia Kannada on Twitter
Oneindia Kannada Facebook fan page
Write Comments on this Article