
ಗಾಂಧಿನಗರ, ಅ. 30 : ವಿದೇಶಿ ಪ್ರಯಾಣ ಮುಗಿಸಿ ಸ್ವದೇಶಕ್ಕೆ ವಾಪಾಸ್ಸಾಗಿರುವ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರಿಗೆ ಎಚ್1ಎನ್1 ಸೋಂಕಿರುವುದು ದೃಢಪಟ್ಟಿದೆ.
ರಷ್ಯಾ ಪ್ರವಾಸ ಕೈಗೊಂಡಿದ್ದ ಮೋದಿ ಬುಧವಾರ ಗಾಂಧಿನಗರಕ್ಕೆ ಆಗಮಿಸಿದ್ದರು. ಮುಖ್ಯಮಂತ್ರಿಗಳ ಆರೋಗ್ಯ ಸ್ಥಿರವಾಗಿದೆ, ಯಾರೂ ಭಯಪಡುವ ಅವಶ್ಯಕತೆಯಿಲ್ಲ, ಶೀಘ್ರ ಅವರು ಗುಣಮುಖರಾಗಲಿದ್ದಾರೆ ಎಂದು ವೈದ್ಯರ ತಂಡದ ಮುಖ್ಯಸ್ಥ ಅತುಲ್ ಪಟೇಲ್ ಹೇಳಿದ್ದಾರೆ. ಮುಖ್ಯಮಂತ್ರಿಗಳ ಸಾರ್ವಜನಿಕ ಸಭೆಗಳನ್ನು ರದ್ದುಗೊಳಿಸಲಾಗಿದೆ.
(ಏಜನ್ಸೀಸ್)
Read: In English
ಕಳೆದೆರಡು ದಿನಗಳಿಂದ ತೀವ್ರ ಜ್ವರ, ಕೆಮ್ಮು, ನೆಗಡಿ ಮತ್ತು ಆಯಾಸದಿಂದ ಬಳಲುತ್ತಿದ್ದ ಮೋದಿ ಅವರ ರಕ್ತ ತಪಾಸಣೆ ನಡೆಸಿದಾಗ ಎಚ್1ಎನ್1 ಸೋಂಕಿರುವುದು ಪತ್ತೆಯಾಗಿದೆ. ಮೋದಿ ಅವರಿಗೆ ಅವರ ನಿವಾಸದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ನಾಲ್ಕು ಮಂದಿ ತಜ್ಞ ವೈದ್ಯರು ಚಿಕಿತ್ಸೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ರಷ್ಯಾ ಪ್ರವಾಸ ಕೈಗೊಂಡಿದ್ದ ಮೋದಿ ಬುಧವಾರ ಗಾಂಧಿನಗರಕ್ಕೆ ಆಗಮಿಸಿದ್ದರು. ಮುಖ್ಯಮಂತ್ರಿಗಳ ಆರೋಗ್ಯ ಸ್ಥಿರವಾಗಿದೆ, ಯಾರೂ ಭಯಪಡುವ ಅವಶ್ಯಕತೆಯಿಲ್ಲ, ಶೀಘ್ರ ಅವರು ಗುಣಮುಖರಾಗಲಿದ್ದಾರೆ ಎಂದು ವೈದ್ಯರ ತಂಡದ ಮುಖ್ಯಸ್ಥ ಅತುಲ್ ಪಟೇಲ್ ಹೇಳಿದ್ದಾರೆ. ಮುಖ್ಯಮಂತ್ರಿಗಳ ಸಾರ್ವಜನಿಕ ಸಭೆಗಳನ್ನು ರದ್ದುಗೊಳಿಸಲಾಗಿದೆ.
(ಏಜನ್ಸೀಸ್)
















