ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪುತ್ತೂರಾಯರೂ ಸೇರಿ 10 ಮಂದಿಗೆ ನುಡಿಸಿರಿ ಗೌರವ

By Shami
|
Google Oneindia Kannada News

KP Putturaya
ಮೂಡಬಿದರೆ, ಅ.21: ಡಾ.ಜಿ.ಎಸ್.ಅಮೂರ, ಡಾ.ಎಂ.ವೀರಪ್ಪ ಮೊಯಿಲಿ ಸೇರಿದಂತೆ ಹತ್ತುಮಂದಿ ಗಣ್ಯರು 7ನೇ ವರ್ಷದ ಆಳ್ವಾಸ್ ನುಡಿಸಿರಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಸ್ವಾಗತ ಸಮಿತಿ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದ್ದಾರೆ. ಈ ಬಾರಿ ಲೇಖಕಿ ವೈದೇಹಿ ಅವರು ಅಧ್ಯಕ್ಷತೆ ವಹಿಸಿದ್ದು, ಪ್ರಪ್ರಥಮ ಬಾರಿಗೆ ಮಹಿಳೆಯೊಬ್ಬರು ಆಳ್ವಾಸ್ ನುಡಿಸಿರಿಯ ಅಧ್ಯಕ್ಷತೆ ಗೌರವ ಪಡೆದ್ದಂತಾಗಿದೆ.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸುತ್ತಿರುವ ಕನ್ನಡ ನಾಡುನುಡಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿ 2010 ಅಕ್ಟೋಬರ್ ತಿಂಗಳ 29, 30 ಮತ್ತು 31ರಂದು ಮೂಡುಬಿದಿರೆಯ ವಿದ್ಯಾಗಿರಿಯಲ್ಲಿ ನಡೆಯಲಿದ್ದು ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ

ಡಾ.ಜಿ.ಎಸ್ ಅಮೂರ (ಸಾಹಿತ್ಯ), ಡಾ.ಎಂ.ವೀರಪ್ಪ ಮೊಯಿಲಿ (ಸಮಾಜಸೇವೆ), ಡಾ.ಎಂ.ಎಂ.ಕಲಬುರ್ಗಿ(ಸಂಶೋಧನೆ), ಸಂತೋಷ ಕುಮಾರ್ ಗುಲ್ವಾಡಿ (ಮಾಧ್ಯಮ), ಡಾ.ಶಿವಮೊಗ್ಗ ಸುಬ್ಬಣ್ಣ (ಸುಗಮ ಸಂಗೀತ), ಡಾ.ಬಲಿಪ ನಾರಾಯಣ ಭಾಗವತರು (ಯಕ್ಷಗಾನ), ಡಾ.ಎಂ.ಲೀಲಾವತಿ (ಚಲನಚಿತ್ರ), ಪ್ರೊ.ಬಿ.ಜಯಪ್ರಕಾಶ ಗೌಡ (ಸಂಘಟನೆ), ಡಾ.ಬ್ರ.ಕು.ಬಸವರಾಜ ರಾಜಋಷಿ(ಅಧ್ಯಾತ್ಮ), ಡಾ.ಕೆ.ಪಿ.ಪುತ್ತೂರಾಯ(ಸಾಹಿತ್ಯ)ಇವರುಗಳು ಈ ಬಾರಿಯ ನುಡಿಸಿರಿ ಪ್ರಶಸ್ತಿ ಪುರಸ್ಕೃತರು. ಪ್ರಶಸ್ತಿಯು 10ಸಾವಿರ ನಗದು, ಮಾನಪತ್ರ, ಸ್ಮರಣಿಕೆ, ಶಾಲು, ಫಲಪುಷ್ಪ ಗೌರವಗಳನ್ನೊಳಗೊಂಡಿದೆ.

ಟ್ವಿಟ್ಟರಲ್ಲಿ ನಮ್ಮನ್ನು ಹಿಂಬಾಲಿಸಿ | ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7 | ಕನ್ನಡ ಸುದ್ದಿಗಳ SMS

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X