ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಕೃತಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ಕಾಯಂ

By Mrutyunjaya Kalmat
|
Google Oneindia Kannada News

Umesh Reddy
ನವದೆಹಲಿ, ಫೆ. 2 : ವಿಕೃತಕಾಮಿ ಹಾಗೂ ಸರಣಿ ಹಂತಕ ಉಮೇಶ ರೆಡ್ಡಿಗೆ ನೀಡಲಾಗಿದ್ದ ಗಲ್ಲು ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ (ಫೆ. 1) ಎತ್ತಿ ಹಿಡಿದಿದೆ. ಸುಮಾರು 12 ವರ್ಷಗಳ ಬಳಿಕ ಸುಪ್ರೀಂಕೋರ್ಟ್‌ನಿಂದ ಮಂಗಳವಾರ ಮಹತ್ವದ ಆದೇಶ ಹೊರಬಿದ್ದಿದೆ.

1998ರಲ್ಲಿ ಉಮೇಶ್ ರೆಡ್ಡಿ ಜಯಶ್ರೀ ಎಂಬ ಮಹಿಳೆಯ ಕೈಯನ್ನು ಕಟ್ಟಿ ಅತ್ಯಾಚಾರ ಎಸಗಿದ್ದ, ಆ ಬಳಿಕ ಆಕೆಯನ್ನು ಕೊಂದು ಹಾಕಿ ಮನೆಯಲ್ಲಿದ್ದ ಆಭರಣಗಳನ್ನು ದೋಚಿಕೊಂಡು ಪರಾರಿಯಾಗಿದ್ದ. ಇನ್ನೊಂದು ಮನೆಯಲ್ಲೂ ಇದೇ ರೀತಿಯ ಅಪರಾಧ ಎಸಗಲು ಯತ್ನಿಸಿದಾಗ ಆತನನ್ನು ಬಂಧಿಸಲಾಗಿತ್ತು. ಎಂಟು ವರ್ಷಗಳ ದೀರ್ಘ ವಿಚಾರಣೆಯ ಬಳಿಕ ಸೆಷನ್ಸ್ ಕೋರ್ಟ್ 2006ರ ಅಕ್ಟೋಬರ್ 26ರಂದು ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ವಿಧಿಸಿತ್ತು. ಕರ್ನಾಟಕ ಹೈಕೋರ್ಟ್ ಈ ತೀರ್ಪನ್ನು ಎತ್ತಿ ಹಿಡಿದಿತ್ತು.

ರಾಜ್ಯ ಹೈಕೋರ್ಟ್‌ ನೀಡಿದ್ದ ಗಲ್ಲುಶಿಕ್ಷೆಯನ್ನು ಸುಪ್ರೀಂಕೋರ್ಟ್‌ನ ನ್ಯಾ. ಪಾಠಕ್‌ ಹಾಗೂ ನ್ಯಾ.ಅಲ್ತಮಸ್ ಕಬೀರ್ ಅವರಿದ್ದ ನ್ಯಾಯಪೀಠ ಎತ್ತಿ ಹಿಡಿದಿದೆ. ಅತ್ಯಾಚಾರ, ಕೊಲೆ, ಚಿನ್ನಾಭರಣ ಕಳವು ಸೇರಿದಂತೆ ರಾಜ್ಯ ಹಾಗೂ ನೆರೆ ರಾಜ್ಯಗಳಲ್ಲಿ ಉಮೇಶ್‌ ರೆಡ್ಡಿ ವಿರುದ್ಧ 23 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು.

English summary
The Supreme Court on Tuesday upheld the death sentence of former police constable Umesh Reddy, alias B A Umesh, and known as Jack the Ripper, who was convicted of the gruesome rape and murder of a widow in Bangalore 12 years ago.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X