ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಪಿಎಸ್ ಸಿ ಹುದ್ದೆಗಳು: ಜೂನ್ 5 ಮತ್ತು 19ರಂದು ಪರೀಕ್ಷೆ

|
Google Oneindia Kannada News

ಕರ್ನಾಟಕ ಲೋಕಸೇವಾ ಆಯೋಗ
ಬೆಂಗಳೂರು, ಜೂ. 2: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಜೂನ್ 5ರಂದು ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ ಪರೀಕ್ಷೆಗಳನ್ನು ನಡೆಸಲು ಪೂರ್ವ ಸಿದ್ಧತೆಗಳನ್ನು ಮಾಡಲಾಗಿದೆ. ಈ ಪರೀಕ್ಷೆಯನ್ನು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ 25 ತಾಲ್ಲೂಕು ಕೇಂದ್ರಗಳೂ ಸೇರಿದಂತೆ ಒಟ್ಟು 1359 ಉಪ ಕೇಂದ್ರಗಳಲ್ಲಿ ನಡೆಸಲಾಗುತ್ತಿದೆ. ಸುಮಾರು 5,00,584 ಅಭ್ಯರ್ಥಿಗಳು ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ಪರೀಕ್ಷೆಗೆ ಅರ್ಹರಾಗಿರುತ್ತಾರೆ.

ಇದೇ ರೀತಿ ಪ್ರಥಮ ದರ್ಜೆ ಸಹಾಯಕರ ಪರೀಕ್ಷೆಯನ್ನು ಜೂನ್ 19ರಂದು ರಾಜ್ಯದ ಎಲ್ಲಾ ಕೇಂದ್ರಗಳಲ್ಲಿ ನಡೆಸಲಾಗುತ್ತಿದೆ. ಸುಮಾರು 2,60,951 ಅಭ್ಯರ್ಥಿಗಳು ಅರ್ಹತೆಯನ್ನು ಪಡೆದಿದ್ದು, ಪರೀಕ್ಷೆಯನ್ನು ಒಟ್ಟು 629 ಉಪ ಕೇಂದ್ರಗಳಲ್ಲಿ ನಡೆಸಲಾಗುವುದು. ಈ ಎರಡು ಪರೀಕ್ಷೆಗಳ ಪ್ರವೇಶ ಪತ್ರಗಳನ್ನು ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಿಕೊಡಲಾಗಿದೆ.

ಈ ಎರಡೂ ಪರೀಕ್ಷೆಗಳಲ್ಲಿ ದುರ್ನಡತೆ ಹಾಗೂ ಅವ್ಯವಹಾರಗಳು ನಡೆಯದಂತೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಪ್ರಥಮ ಬಾರಿಗೆ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ವಿಡಿಯೋ ಚಿತ್ರೀಕರಣ ಮಾಡಲು ನಿರ್ಧರಿಸಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನೂ ಸಹ ಸ್ಥಳೀಯವಾಗಿ ಕಲ್ಪಿಸಲಾಗಿದೆ. ಪರೀಕ್ಷೆಯ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಮೊಬೈಲ್ ಫೋನ್ ಮತ್ತು ಎಲೆಕ್ಟ್ರಾನಿಕ್ ಉಪಕರಣಗಳ ಬಳಕೆಯನ್ನು ನಿಷೇಧಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಆಯೋಗದ ವೆಬ್‌ಸೈಟ್‌ನಿಂದ http://kpsc.kar.nic.in ಕಡ್ಡಾಯವಾಗಿ ಡೌನ್‌ಲೋಡ್ ಮಾಡಿಕೊಳ್ಳತಕ್ಕದ್ದು. ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಳ್ಳದ ಅಭ್ಯರ್ಥಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಅನುಮತಿಸಲಾಗುವುದಿಲ್ಲ. ದ್ವಿತೀಯ/ಪ್ರಥಮ ದರ್ಜೆ ಸಹಾಯಕ ಪರೀಕ್ಷೆಗಳನ್ನು ಅತ್ಯಂತ ಕಟ್ಟುನಿಟ್ಟಾಗಿ ಪಾರದರ್ಶಕತೆಯಡಿ ನಡೆಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗದ ಪ್ರಕಟಣೆ ತಿಳಿಸಿದೆ.

English summary
Karnataka Public Service Commission is conducting written test for the posts of second division(June 5 ) and first division(June 19) assistants.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X