ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೂರು ಸಾವಿರ ಕನ್ನಡ ಶಾಲೆಗಳಿಗೆ ಬೀಗ

By * ವಸಂತ ಶೆಟ್ಟಿ
|
Google Oneindia Kannada News

Karnataka Soon shut more than 3,000 schools
(ಮುಂದುವರೆದ ಭಾಗ)ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳು ಸೇರಿದಂತೆ ಸುಮಾರು ಮೂರು ಸಾವಿರ ಶಾಲೆಗಳನ್ನು ಮುಚ್ಚಲು ಸರ್ಕಾರ ನಿರ್ಧರಿಸಿದೆ. ಕಾರಣ? ಆ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ 5ಕ್ಕಿಂತ ಕಡಿಮೆ ಇದೆ ಅನ್ನುವುದು.

ಅಲ್ಲದೇ ಇತ್ತಿಚೆಗೆ ಪತ್ರಿಕೆಯೊಂದಕ್ಕೆ ಕೊಟ್ಟ ಸಂದರ್ಶನದಲ್ಲಿ ಅವರು ಹೇಳಿದ ಇನ್ನೂ ಕೆಲವು ಮಾತುಗಳೆಂದರೆ "ಕೇಂದ್ರ ಸರ್ಕಾರ 20 ಮಕ್ಕಳಿಗಿಂತ ಕಡಿಮೆ ಇರುವ ಶಾಲೆಗಳನ್ನು ಮುಚ್ಚಬೇಕೆಂದು ಆದೇಶಿಸಿದೆ", "ಕೇಂದ್ರದಿಂದಲೇ ಆದೇಶ ಬಂದಿರುವಾಗ ನಾನೇನು ಮಾಡಲು ಸಾಧ್ಯ?",

"ಇಂದು ಹಳ್ಳಿಗಳಲ್ಲಿ ಬಹಳಷ್ಟು ಮಕ್ಕಳು ಸರ್ಕಾರಿ ಶಾಲೆಗೆ ಬರುತ್ತಿಲ್ಲ. ಖಾಸಗಿ ಶಾಲೆಗಳ ಕಡೆ ಹೊರಳುತ್ತಿದ್ದಾರೆ. ಸ್ಪರ್ಧಾತ್ಮಕ ಶಿಕ್ಷಣ ವ್ಯವಸ್ಥೆ ಕಡೆಗೆ ಮಕ್ಕಳ ಮನಸ್ಸು ಒಲಿಯುತ್ತಿದೆ. ಇಂತಹ ಸಂದರ್ಭದಲ್ಲಿ ಈ ಎಲ್ಲ ಶಾಲೆಗಳಲ್ಲೂ ಮಕ್ಕಳಿಗೆ ಸರಿಯಾದ ಗುಣಮಟ್ಟದ ಶಿಕ್ಷಣ, ಸ್ಪರ್ಧಾತ್ಮಕ ಕೌಶಲ್ಯಗಳನ್ನು ಬೆಳೆಸಿಕೊಳ್ಳುವ ಶಿಕ್ಷಣ ಪೂರೈಸುವುದು ಸಾಧ್ಯವಾಗುತಿಲ್ಲ" ಅನ್ನುವಂತಹ ಜವಾಬ್ದಾರಿಯಿಂದ ನುಣುಚಿಕೊಳ್ಳುವ ಮಾತುಗಳು.

ನೀವೇ ಯೋಚನೆ ಮಾಡಿ, ಪ್ರತಿಯೊಬ್ಬ ಮಗುವಿಗೂ ಶಿಕ್ಷಣ ಅನ್ನುವುದು ಮೂಲಭೂತ ಹಕ್ಕು ಅನ್ನುವ ಕಾನೂನು ತರುತ್ತಿರುವ ಈ ದಿನಗಳಲ್ಲಿ ಇಲ್ಲಿ ಕಡಿಮೆ ಮಕ್ಕಳಿದ್ದಾರೆ, ಅದಕ್ಕೆ ನಷ್ಟ ಆಗುತ್ತೆ ಅದಕ್ಕೆ ಮುಚ್ಚಿ ಇನ್ನೊಂದು ಕಡೆ ಹಾಕ್ತೀವಿ ಅನ್ನಲು ಶಿಕ್ಷಣ ಅನ್ನುವುದು ಲಾಭ-ನಷ್ಟದ ವ್ಯಾಪಾರವೇ? (ಮುಂದೆ ಓದಿ)

English summary
The Department of Public Instruction will soon shut more than 3,000 schools in Karnataka. These schools have less than 10 students. Happy Kannada Rajyotsava.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X