ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೈನ್‌ಮನ್ ನೇಮಕ, ಅಕ್ರಮ ತಡೆಗೆ ಸಿಸಿಬಿಗೆ ಮೊರೆ

By Srinath
|
Google Oneindia Kannada News

electricity-linesmen-recruit-drive-shobha-karandlaje
ಬೆಂಗಳೂರು, ಜ.1: ಸಿಬ್ಬಂದಿ ಕೊರತೆ ಹಿನ್ನೆಲೆಯಲ್ಲಿ ಎರಡು ಸಾವಿರ ಲೈನ್‌ಮನ್‌ಗಳನ್ನು ನೇಮಕ ಮಾಡಿಕೊಳ್ಳುತ್ತಿದ್ದು, ಅರ್ಹತೆ ಮತ್ತು ರೋಸ್ಟರ್ ಆಧಾರದ ಮೇಲೆ ನೇಮಕ ನಡೆಯಲಿದೆ. ಯಾವುದೇ ರೀತಿಯ ಸಂದರ್ಶನ ಇರುವುದಿಲ್ಲ ಎಂದು ಇಂಧನ ಸಚಿವೆ ಶೋಭಾ ಕರಂದ್ಲಾಜೆ ಶನಿವಾರ ಇಲ್ಲಿ ತಿಳಿಸಿದರು.

ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, 1.82 ಲಕ್ಷ ಅರ್ಜಿಗಳು ಬಂದಿವೆ. ಜನವರಿ 11 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಐಟಿಐನಲ್ಲಿ ಗಳಿಸಿರುವ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವುದು. ಅಭ್ಯರ್ಥಿಗಳು ಮಧ್ಯವರ್ತಿಗಳ ಮೋಸಕ್ಕೆ ಒಳಗಾಗಬಾರದು ಎಂದು ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಿದರು.

ಸರ್ಕಾರ ಮತ್ತು ಇಲಾಖೆಗೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಕೆಲವರು ಹಣ ಕೊಟ್ಟರೆ ಕೆಲಸ ಆಗುತ್ತದೆ ಎಂಬ ವದಂತಿಗಳನ್ನು ಹಬ್ಬಿಸುತ್ತಿದ್ದಾರೆ. ಅಭ್ಯರ್ಥಿಗಳು ಇಂತಹ ಮಾತುಗಳನ್ನು ನಂಬಬಾರದು. ಕೇವಲ ಅರ್ಹತೆ ಮತ್ತು ಮೀಸಲಾತಿಗೆ ಅನುಗುಣವಾಗಿ ನೇಮಕಾತಿ ನಡೆಯಲಿದೆ. ದೈಹಿಕ ಪರೀಕ್ಷೆ ಇದ್ದರೂ, ಅದರ ಅಂಕಗಳನ್ನು ಆಯ್ಕೆಗೆ ಪರಿಗಣಿಸುವುದಿಲ್ಲ ಎಂದು ತಿಳಿಸಿದರು.

ಈ ರೀತಿ ವದಂತಿ ಹಬ್ಬಿಸುತ್ತಿರುವವರ ವಿರುದ್ಧ ಕ್ರಮಕೈಗೊಳ್ಳುವಂತೆ ನಗರ ಅಪರಾಧ ವಿಭಾಗದ ಪೊಲೀಸರಿಗೆ (ಸಿಸಿಬಿ) ದೂರು ನೀಡಲಾಗುವುದು. ಕೆಲಸ ಕೊಡಿಸುತ್ತೇವೆ ಎಂದು ಯಾರಾದರೂ ಮುಂದೆ ಬಂದರೆ ಅಂತವರ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡುವಂತೆ ಅಭ್ಯರ್ಥಿಗಳಿಗೂ ಮನವಿ ಮಾಡಿದರು.

ಎರಡು ಹಳ್ಳಿಗಳಿಗೆ ಒಬ್ಬ ಲೈನ್‌ಮನ್ ಇದ್ದು, ಸಿಬ್ಬಂದಿ ಕೊರತೆಯಿಂದ ತೊಂದರೆಯಾಗಿದೆ. ಹೀಗಾಗಿ ಸದ್ಯಕ್ಕೆ ಎರಡು ಸಾವಿರ ಲೈನ್‌ಮನ್‌ಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಮುಂದಿನ ವರ್ಷ ಇನ್ನೂ ಎರಡು ಸಾವಿರ ಹುದ್ದೆಗಳನ್ನು ತುಂಬಲಾಗುವುದು ಎಂದರು.

English summary
Minister for Energy Shobha Karandlaje has told that nearly 2,000 linemen would be appointed by the Karnataka Power Transmission Corporation Limited and other state power utilities.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X