ಬೆಂಗಳೂರು, ಫೆ.4: ರಾಜ್ಯದಲ್ಲಿ ರಸ್ತೆಗಳು ಹದಗಟ್ಟಿರುವ ಬಗ್ಗೆ ವಿಧಾನಸಭೆಯಲ್ಲಿ ಆಕ್ರೋಶ ಸ್ಫೋಟಗೊಂಡಿತು. ಕಾಂಗ್ರೆಸ್ ಮತ್ತು ಜೆಡಿ ಎಸ್ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡು ಗುಂಡಿ ಬಿದ್ದಿರುವ ರಸ್ತೆಯನ್ನು ತಕ್ಷಣ ಸರಿಪಡಿಸಬೇಕೆಂದು ಒತ್ತಾಯಿಸಿದರು.
ಪ್ರಶ್ನೋತ್ತರ ಕಲಾಪದಲ್ಲಿ ವಿಷಯ ಪ್ರಸ್ತಾಪಿಸಿದ ಸದಸ್ಯರು ಮೈಸೂರು ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ರಸ್ತೆ ಹದಗಟ್ಟಿದೆ. ಈ ಬಗ್ಗೆ ಯವುದೇ ಕ್ರಮ ಕೈಗೊಂಡಿಲ್ಲ ಎಂದು ಕಾಂಗ್ರೆಸ್‌ನ ಪ್ರಕಾಶ್ ಹುಕ್ಕೇರಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.
ಮುಧೋಳ,ಮಹಾಲಿಂಗಪುರ ,ಚಿಕ್ಕೋಡಿ ,ನಿಪ್ಪಾಣಿಯ 108 ಕಿ.ಮಿ. ಉದ್ದದ ರಾಜ್ಯ ಹೆದ್ದಾರಿ ಸಂಪೂರ್ಣವಾಗಿ ಹಾಳಾಗಿದೆ. ವಾಹನ ಸಂಚಾರಕ್ಕೆ ಯೋಗ್ಯವಿಲ್ಲ. ಈ ವಿಚಾರದಲ್ಲಿ ಸಚಿವರು ಸುಳ್ಳು ಆಶ್ವಾಸನೆ ನೀಡುತ್ತಿದ್ದಾರೆ. ಯಾವುದೇ ಕಾಮಗಾರಿ ಆರಂಭವಾಗಿಲ್ಲ ಎಂದು ಆರೋಪಿಸಿದರು.
ಕಾಂಗ್ರೆಸ್ ,ಜೆಡಿ ಎಸ್ ಸದಸ್ಯರು ಶಾಸಕ ಹುಕ್ಕೇರಿ ಬೆಂಬಲಕ್ಕೆ ನಿಂತು ಸರ್ಕಾರದ ವಿರುದ್ಧ ಪ್ರಹಾರ ನಡೆಸಿದರು. ಈ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿದ ಲೋಕೋಪಯೋಗಿ ಸಚಿವ ಸಿ.ಎಂ.ಉದಾಸಿ ಪ್ರತಿಕ್ರಿಯೆ ನೀಡುವ ಸಂದರ್ಭದಲ್ಲಿ ಬಿಜೆಪಿ ಸದಸ್ಯ ಶಂಕರಲಿಂಗೇಗೌಡ ಮೈಸೂರಿನಲ್ಲೂ ಕೂಡ ರಸ್ತೆ ಹಾಳಾಗಿದೆ, ಈ ಬಗ್ಗೆ ಯಾರೂ ಕೂಡ ಗಮನ ಹರಿಸಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಬಳಿಕ ಲೋಕೋಪಯೋಗಿ ಸಚಿವರು ಮೈಸೂರಿನ ಬೋಗಾದಿ ರಸ್ತೆ ಯನ್ನು ಮೂರು ತಿಂಗಳಲ್ಲಿ ಪೂರ್ಣ ಮಡುವುದಾಗಿ ಭರವಸೆ ನೀಡಿದರು. ಶೇ.90ರಷ್ಟು ರಸ್ತೆಗಳ ಗುಂಡಿಗಳನ್ನು ಮುಚ್ಚಲಾಗಿದೆ ಎಂದು ಹೇಳಿದಾಗ ಪ್ರತಿಪಕ್ಷದ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಕಾವೇರಿದ ಚರ್ಚೆ ನಡೆಯಿತು. (ಒನ್‍ಇಂಡಿಯಾ ಕನ್ನಡ)