Thought for the day
Your page will load in ...
Close Ad X
Advertisement
English ગુજરાતી हिन्दी മലയാളം தமிழ் తెలుగు
 
Share This Story

ಉಡುಪಿ-ಚಿಕ್ಕಮಗಳೂರು : ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿ ಪ್ರಕಟ

Posted by:
Published: Tuesday, February 21, 2012, 19:03 [IST]

 Udupi Chikmagalur By Poll Bjp Congress Candidates Aid0038

ಬೆಂಗಳೂರು, ಫೆ. 21 : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಮಾ.18ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಧಿಕೃತ ಅಭ್ಯರ್ಥಿಯನ್ನು ಮಂಗಳವಾರ ಪ್ರಕಟಿಸಿದ್ದು, ಕಾಂಗ್ರೆಸ್ ಕೂಡ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದು, ತನ್ನ ಅಧಿಕೃತ ಅಭ್ಯರ್ಥಿಯನ್ನು ಘೋಷಿಸಿದೆ.

ಸುನೀಲ್ ಕುಮಾರ್ ಕಾರ್ಕಳ ಅವರನ್ನು ಭಾರತೀಯ ಜನತಾ ಪಕ್ಷ ಕಣಕ್ಕೆ ಇಳಿಸಿದೆ. ಜಯಪ್ರಕಾಶ್ ಹೆಗ್ಡೆ ಅವರು ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಎಂದು ಎಐಸಿಸಿ ಘೋಷಿಸಿದೆ. ಕಾಂಗ್ರೆಸ್ ಪರ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಮಗಳು ಪ್ರಿಯಾಂಕಾ ಗಾಂಧಿ ವದ್ರಾ ಅವರು ಸ್ಪರ್ಧಿಸುತ್ತಾರೆ ಎಂಬ ಊಹಾಪೋಹಕ್ಕೆ ತೆರೆಬಿದ್ದಂತಾಗಿದೆ.

ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಇನ್ನೂ ಅಂತಿಮಗೊಳಿಸಿಲ್ಲ. ಜೆಡಿಎಸ್ ಅನ್ನು ಇತ್ತೀಚೆಗೆ ಸೇರಿದ ಕನ್ನಡ ಸಿನೆಮಾ ತಾರೆ ಪೂಜಾ ಗಾಂಧಿ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿದೆ. ಕಾಂಗ್ರೆಸ್ ಪರ ಪ್ರಿಯಾಂಕಾ ಹೆಸರು ಕೇಳಿಬಂದಿದ್ದರಿಂದ ಪೂಜಾ ಹೆಸರು ಚಾಲ್ತಿಗೆ ಬಂದಿತ್ತು. ಚುನಾವಣೆ ಮಾ.18, ಭಾನುವಾರ ನಡೆಯಲಿದ್ದು, ಫಲಿತಾಂಶ ಮಾ.21, ಬುಧವಾರ ಪ್ರಕಟವಾಗಲಿದೆ.

ಡಿವಿ ಸದಾನಂದ ಗೌಡ ಅವರು ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ್ದರಿಂದ ತೆರವಾಗಿದ್ದ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಚುನಾವಣೆ ಎಲ್ಲ ಪಕ್ಷಗಳಿಗೂ ಭಾರೀ ಪ್ರತಿಷ್ಠೆಯ ಕಣವಾಗಿ ಪರಿಣಮಿಸಿದೆ. ಬಿಜೆಪಿಯ ಭದ್ರಕೋಟೆಯಾಗಿರುವ ಈ ಕ್ಷೇತ್ರವನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳಲು ಕಾಂಗ್ರೆಸ್ ಭಾರೀ ಯತ್ನ ನಡೆಸಿದೆ. ಸಿಎಂ ಜೊತೆಗಿನ ಮುನಿಸಿನಿಂದಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಅಭ್ಯರ್ಥಿಯ ಆಯ್ಕೆ, ಚುನಾವಣಾ ಪ್ರಚಾರದ ಬಗ್ಗೆ ಜಾಸ್ತಿ ತಲೆಕೆಡಿಸಿಕೊಂಡಿಲ್ಲ.

English summary
BJP and Congress have declared candidates officially for Udupi-Chikmagalur Lok Sabha by election. BJP is fielding Sunil Kumar Karkala and Congress has decided to field Jayaprakash Hegde. It was rumoured that Congress would field Priyanka Gandhi Vadra. JDS has not yet finalized the candidature. Voting is on March 18 and result will be announced on March 21.
ಅಭಿಪ್ರಾಯ ಬರೆಯಿರಿ
Click here to type in Kannada
Subscribe Newsletter
Eliminator , Feroz Shah Kotla, Delhi
Match starts at 08:00 pm IST