ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಧಿಕೃತ: ಜಗದೀಶ್ ಶೆಟ್ಟರ್ ನೂತನ ಮುಖ್ಯಮಂತ್ರಿ

By Srinath
|
Google Oneindia Kannada News

jagadish-shettar-next-cm-bjp-core-committee-new-delhi
ನವದೆಹಲಿ, ಜುಲೈ 7: ಪಕ್ಷದ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಅವರನ್ನು ಕರ್ನಾಟಕದ ನೂತನ ಮುಖ್ಯಮಂತ್ರಿಯನ್ನಾಗಿ ನೇಮಕ ಮಾಡಲು ಬಿಜೆಪಿ ನಿರ್ಧರಿಸಿದೆ. ಇದರೊಂದಿಗೆ ತಾರಕಕ್ಕೆ ಏರಿದ್ದ ರಾಜ್ಯ ಬಿಜೆಪಿಯಲ್ಲಿನ ಭಿನ್ನಮತಕ್ಕೆ ಬ್ರೇಕ್ ಹಾಕುವಲ್ಲಿ ಬಿಜೆಪಿ ಹೈಕಮಾಂಡ್ ಯಶಸ್ವಿಯಾಗಿದೆ ಎನ್ನಬಹುದು.

ಹಾಲಿ ಮುಖ್ಯಮಂತ್ರಿ ಸದಾನಂದ ಗೌಡರನ್ನು ಕೆಳಗಿಳಿಸಿ ಜಗದೀಶ್ ಶೆಟ್ಟರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲು ಬಿಜೆಪಿ ಸಮನ್ವಯ ಸಮಿತಿ ಅನುಮೋದನೆ ನೀಡಿದೆ ಎಂದು ಪಕ್ಷದ ರಾಷ್ಟ್ರೀಯ ವಕ್ತಾರ ರವಿಶಂಕರ್ ಪ್ರಸಾದ್ ಅವರು ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದ್ದಾರೆ.

ಇದಕ್ಕೂ ಮುನ್ನ ನಿತಿನ್ ಗಡ್ಕರಿ ಅವರ ನಿವಾಸದಲ್ಲಿ ಸೇರಿದ್ದ ಸಮನ್ವಯ ಸಮಿತಿ ಸಭೆಯಲ್ಲಿ ಸುಷ್ಮಾ ಸ್ವರಾಜ್, ಅರುಣ್ ಜೇಟ್ಲಿ ಸೇರಿದಂತೆ ಅನೇಕ ಹಿರಿಯ ನಾಯಕರು ಪಾಲ್ಗೊಂಡಿದ್ದರು. ಸೋಮವಾರದ ನಂತರ ರಾಜ್ಯ ಬಿಜೆಪಿ ಶಾಸಕಾಂಗ ಸಭೆ ಸೇರಿ ನೂತನ ನಾಯಕನ ಆಯ್ಕೆ ಮಾಡಲಿದೆ.

ಆದರೆ ಉಪ ಮುಖ್ಯಮಂತ್ರಿ ನೇಮಕ ಮಾಡುವ ಬಗ್ಗೆಯಾಗಲಿ ಅಥವಾ ಸದಾನಂದ ಗೌಡರಿಗೆ ಮುಂದೆ ಯಾವ ಸ್ಥಾನ ನೀಡಬೇಕು ಎಂಬುದರ ಬಗ್ಗೆಯಾಗಲಿ ಸಭೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ.

ಈ ಮಧ್ಯೆ, ಹಾಲಿ ಮುಖ್ಯಮಂತ್ರಿ ಸದಾನಂದ ಗೌಡರು ದೆಹಲಿ ವಿಮಾನ ಹತ್ತಿದ್ದು ಇಂದು ಸಂಜೆ 6 ಗಂಟೆಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ಮತ್ತು ಅಡ್ವಾಣಿ ಅವರನ್ನು ಭೇಟಿಯಾಗಲಿದ್ದಾರೆ. ಬಳಿಕ ತಮ್ಮ ರಾಜೀನಾಮೆ ಪ್ರಕಟಿಸಲಿದ್ದಾರೆ ಎಂದು ಅವರು ತಿಳಿಸಿದರು.

English summary
Karnataka BJP crisis: Jagadish Shettar next CM declares BJP core committee.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X