ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಾನು ಲಿಂಗಾಯತನೆಂದ ನಿತ್ಯಾನಂದ ಸ್ವಾಮಿ

|
Google Oneindia Kannada News

swami Nithyananda
ರಾಮನಗರ, ಮಾ.7 :ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮಿ ಮತ್ತೊಂದು ಹೊಸ ನಾಟಕ ಪ್ರಾರಂಭಿಸಿದ್ದಾರೆ. ನಾನು ಸಹ ಲಿಂಗಾಯಿತ ಸಮುದಾಯಕ್ಕೆ ಸೇರಿದ್ದು, ರಾಜ್ಯದಲ್ಲಿ ನನಗೆ ಅಪಾರ ಸಂಖ್ಯೆಯ ಭಕ್ತರಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ತಮಿಳುನಾಡಿನಲ್ಲಿ ನಿತ್ಯಾನಂದ ಸ್ವಾಮಿಯ ಈ ಹೇಳಿಕೆ ವಿರುದ್ಧ ಈಗಾಗಲೇ ಪ್ರತಿಭಟನೆಗಳು ಆರಂಭವಾಗಿವೆ.

ಇತ್ತೀಚೆಗಷ್ಟೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಲಿಂಗಾಯತ ಸಮುದಾಯದ ಮಹಾಲಿಂಗೇಶ್ವರ ಮಠದ ಉತ್ತರಾಧಿಕಾರಿ ಹುದ್ದೆ ವಹಿಸಿಕೊಳ್ಳಲು ಹೋಗಿ ತೀವ್ರ ವಿರೋಧದದಿಂದಾಗಿ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದ ನಿತ್ಯಾನಂದ ಸ್ವಾಮಿ, ಸಂದರ್ಶನವೊಂದರಲ್ಲಿ ತಾನು ಲಿಂಗಾಯತ ಸಮುದಾಯಕ್ಕೆ ಸೇರಿದವನೆಂದು ಹೇಳಿಕೊಂಡಿದ್ದಾರೆ.

ಉತ್ತರಾಧಿಕಾರಿ ಹುದ್ದೆ ವಿವಾದದ ಕುರಿತು ಖಾಸಗಿ ಚಾನೆಲ್ ವೊಂದಕ್ಕೆ ಪ್ರತಿಕ್ರಿಯೆ ನೀಡುತ್ತಿದ್ದ ನಿತ್ಯಾನಂದ ಸ್ವಾಮಿ ತಾನು ಸಹ ಲಿಂಗಾಯತ ಜನಾಂಗಕ್ಕೆ ಸೇರಿದ್ದೇನೆ. ನನಗೆ ಕರ್ನಾಟಕದಲ್ಲಿ ಅಪಾರ ಸಂಖ್ಯೆಯ ಭಕ್ತರಿದ್ದಾರೆ, ಆದ್ದರಿಂದ ಲಿಂಗಾಯತ ಮಠದ ಉತ್ತರಾಧಿಕಾರಿ ಹುದ್ದೆ ವಹಿಸಿಕೊಳ್ಳಲು ಮುಂದಾಗಿದ್ದೆ ಎಂದು ಹೇಳಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ನಿತ್ಯಾನಂದ ಈ ಹೇಳಿಕೆಗೆ ತಮಿಳುನಾಡಿನಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ. ತಮಿಳುನಾಡು ಲಿಂಗಾಯತ ಸಮುದಾಯದವರು ನಿತ್ಯಾವಿರುದ್ದ ಪ್ರತಿಭಟನೆ ನಡೆಸುತ್ತಿದ್ದಾರೆ. ನಿತ್ಯಾನಂದನಿಗೂ ಲಿಂಗಾಯತ ಸಮುದಾಯಕ್ಕೂ ಸಂಬಂಧವಿಲ್ಲ ಎಂದು ಘೋಷಿಸಿದ್ದಾರೆ.

ಕನ್ನಡ ಪರ ಸಂಘಟನೆಗಳು ರಾಮನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಹಾಲಿಂಗೇಶ್ವರ ಮಠದ ಉತ್ತರಾಧಿಕಾರಿ ಹುದ್ದೆ ವಹಿಸಿಕೊಳ್ಳುವುದಾಗಿ ಹೇಳುತ್ತಿದ್ದ ನಿತ್ಯಾ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಮನಗರ ಠಾಣೆಯಲ್ಲಿ ಸಾರ್ವಜನಿಕ ಶಾಂತಿ ಭಂಗ ಮಾಡುತ್ತಿದ್ದಾರೆ ಎಂದು ಆರೋಪಿಸಿ ನಿತ್ಯಾ ವಿರುದ್ಧ ಸಂಘಟನೆಗಳು ದೂರು ನೀಡಿವೆ.

ನಿತ್ಯಾನ ತಾನು ಲಿಂಗಾಯತ ಹೇಳಿಕೆ ರಾಜ್ಯದ ಲಿಂಗಾಯತ ಸಮುದಾಯದ ಆಕ್ರೋಶಕ್ಕೆ ಕಾರಣವಾಗುವ ಸಂಭವವಿದೆ. ಮೊದಲೆ ವಿವಾದಗಳಿಂದ ಸುದ್ದಿಯಾಗಿರುವ ನಿತ್ಯಾನ ಹೊಸ ರಗಳೆ ಎಂತಹ ಪರಿಸ್ಥಿತಿ ನಿರ್ಮಿಸಲಿದೆ ಎಂದು ಕಾದು ನೋಡಬೇಕು.

English summary
controversial swami Nithyananda said he is belongs to lingayat community. On Thursday, March 7 in private Chanel interview Nithyananda says i am also belongs to lingayat community so i will decided to take Mahalingeshwara Mutt in-charge.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X