ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೋಮಣ್ಣಗೆ ಮತ್ತೆ ಲೋಕಾಯುಕ್ತ ತನಿಖೆ ಭೀತಿ

By Mahesh
|
Google Oneindia Kannada News

V Somanna fears Lokayukta probe
ಬೆಂಗಳೂರು, ಏ.5: ವಸತಿ ಸಚಿವ ವಿ ಸೋಮಣ್ಣ ಅವರು ಕೆಜೆಪಿಗೆ ಹೋಗುತ್ತಿಲ್ಲ ಎಂಬುದು ಸ್ಪಷ್ಟವಾದಂತೆ ಮತ್ತೊಮ್ಮೆ ಕೋರ್ಟ್ ಮೆಟ್ಟಿಲೇರುವುದು ಖಾತ್ರಿಯಾಗಿದೆ. ಅಕ್ರಮ ಆಸ್ತಿ ಗಳಿಕೆ, ಭೂ ಹಗರಣದಲ್ಲಿ ಸೋಮಣ್ಣ ಅವರ ಹೆಸರು ಕೇಳಿ ಬಂದಿದೆ.

ವಸತಿ ಸಚಿವ ವಿ ಸೋಮಣ್ಣ ವಿರುದ್ಧ ಮೂಡಲಪಾಳ್ಯದ ರಾಮಕೃಷ್ಣ ಎಂಬುವರು ಲೋಕಾಯುಕ್ತ ಕೋರ್ಟಿನಲ್ಲಿ ಶುಕ್ರವಾರ(ಏ.5) ಖಾಸಗಿ ದೂರು ಸಲ್ಲಿಸಿದ್ದಾರೆ. ದೊಡ್ಡಬಳ್ಳಾಪುರ ಬಳಿ 40 ಎಕರೆ ಅಕ್ರಮ ಭೂಮಿ ಹೊಂದಿರುವ ಆರೋಪ ಸೋಮಣ್ಣ ಅವರ ಮೇಲಿದೆ. ಲಿಂಗದಹಳ್ಳಿ ಚೇತನ್ ಎಂಬುವರು ಈ ಮುಂಚೆ ದೂರು ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಕರ್ನಾಟಕ ಚುನಾವಣಾ ಕಾವಲು (ಕೆಇಡಬ್ಲ್ಯೂ) ಸಂಸ್ಥೆ 2004 ರಿಂದ 2008 ರ ತನಕದ ಅದಾಯ ಘೋಷಣೆ ಮಾಡಿರುವ ಶಾಸಕರ ಮಾಹಿತಿ ವಿಶ್ಲೇಷಣೆ ಮಾಡಿ ವಿವರ ಬಹಿರಂಗ ಮಾಡಿದೆ. ಇದರಲ್ಲಿ ಕರ್ನಾಟಕದ ಕೋಟಿ ಗಳಿಕೆ ಮಾಡಿರುವ ಶಾಸಕ, ಸಚಿವರ ವಿವರಗಳಿದೆ. ವಿ. ಸೋಮಣ್ಣ ಅವರ ಹೆಸರು ಕೂಡಾ ಈ ಪಟ್ಟಿಯಲ್ಲಿ ಕಾಣಿಸಿದೆ. ಚರಾಸ್ತಿ 9.16 ಕೋಟಿ ಹಾಗೂ ಸ್ಥಿರಾಸ್ತಿ 1.83 ಕೋಟಿ ರು ಘೋಷಿತ ಆಸ್ತಿಯಾಗಿದೆ.

ಇತರೆ ಪ್ರಕರಣಗಳು: ಜ್ಞಾನಭಾರತಿ ಬಡಾವಣೆ ನಿರ್ಮಾಣಕ್ಕಾಗಿ ಬೆಂಗಳೂರು ದಕ್ಷಿಣ ತಾಲ್ಲೂಕಿನ ಕೆಂಗೇರಿ ಹೋಬಳಿಯ ನಾಗದೇವನಹಳ್ಳಿ ಬಳಿ ಸ್ವಾಧೀನ ಪಡಿಸಿಕೊಂಡಿದ್ದ ಜಮೀನನ್ನು ಕಾನೂನು ಬಾಹಿರವಾಗಿ ಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟಿರುವ ಆರೋಪ ಇದಾಗಿದೆ. ಇದಕ್ಕೆ ಸಂಬಂಧಿಸಿದಂತೆ ವಕೀಲ ಎಚ್.ಯೋಗೇಂದ್ರ ಅವರು ಲೋಕಾಯುಕ್ತ ವಿಶೇಷ ಕೋರ್ಟ್‌ನಲ್ಲಿ ಖಾಸಗಿ ದೂರು ದಾಖಲು ಮಾಡಿದ್ದರು.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಲೋಕಾಯುಕ್ತ ಕೋರ್ಟಿಗೆ ಬಿ ರಿಪೋರ್ಟ್ ಸಲ್ಲಿಸಿದ್ದರು. ಆದರೆ, ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟನ್ನು ತಿರಸ್ಕರಿಸಿದ್ದ ಲೋಕಾಯುಕ್ತ ನ್ಯಾಯಾಧೀಶರು ಎಲ್ಲ ಆರೋಪಿಗಳ ವಿರುದ್ಧ ಸಮನ್ಸ್ ಜಾರಿ ಮಾಡಿದ್ದರು. ನಾಗದೇವನಹಳ್ಳಿಯಲ್ಲಿ ಬಿಡಿಎ ವಶಪಡಿಸಿಕೊಂಡಿದ್ದ 22 ಗುಂಟೆ ಜಮೀನಿನ ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟಿರುವುದು ಕಾನೂನುಬಾಹಿರವಾಗಿದೆ ಎಂದು ಸಾಫ್ಟ್‌ವೇರ್ ಇಂಜಿನಿಯರ್ ರವಿಕೃಷ್ಣಾ ರೆಡ್ಡಿ ಅವರು ದೂರು ದಾಖಲಿಸಿದ್ದರು.

ಮೇಲ್ಕಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಸ್ ಯಡಿಯೂರಪ್ಪ ಹಾಗೂ ವಿ ಸೋಮಣ್ಣ ಅವರಿಗೆ ಜಾಮೀನು ಮಂಜೂರಾಗಿತ್ತು. ಈ ಇಬ್ಬರಲ್ಲದೆ ಸೋಮಣ್ಣ ಅವರ ಪತ್ನಿ ಶೈಲಜಾ, ಲಿಂಗರಾಜು ಹಾಗೂ ಸೋಮಣ್ಣ ಅವರ ಪುತ್ರರ ಮೇಲೂ ಆರೋಪ ಕೇಳಿ ಬಂದಿತ್ತು.

English summary
Lokayukta Private complaint filed against Minister V Somanna.Moodalpalya Ramakrishna alleged that Somanna illegally acquired 40 acres of land in Doddaballapur
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X