ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿದ್ಯಾರ್ಥಿಗಳ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

|
Google Oneindia Kannada News

ಬೆಂಗಳೂರು, ಸೆ. 20: ಕೋಲ್ಕತ್ತಾ ಜಾಧವಪುರ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಹಲ್ಲೆ ನಡೆಸಿರುವುದನ್ನು ಖಂಡಿಸಿ ಬೆಂಗಳೂರಿನ ಟೌನ್ ಹಾಲ್‌ ಎದುರು ಸೆ. 21, ಭಾನುವಾರ ಬೆಳಗ್ಗೆ ವಿದ್ಯಾರ್ಥಿಗಳು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ವಿವಿಯ ಆಡಳಿತ ಮಂಡಳಿ ಮತ್ತು ವೈಸ್‌ ಛಾನ್ಸೆಲರ್ ವಿರುದ್ಧ ಶಾಂತ ರೀತಿಯಿಂದ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ನಡೆಸಲಾಗಿದೆ. ಆಡಳಿತ ಪಕ್ಷ ತೃಣಮೂಲ ಕಾಂಗ್ರೆಸ್ ಮತ್ತು ಕೆಲ ಗೂಂಡಾಗಳ ಸಹಕಾರದಲ್ಲಿ ಪೊಲೀಸರು ಈ ಕೃತ್ಯ ಎಸಗಿದ್ದಾರೆ.(ಸುರಕ್ಷತಾ ಕ್ರಮ ಅನುಸರಿಸದಿದ್ದರೆ ಕ್ರಿಮಿನಲ್‌ ಮೊಕದ್ದಮೆ)

protest

ಕಾಲೇಜು ಆವರಣದಲ್ಲೇ ಲೈಂಗಿಕ ದೌರ್ಜನ್ಯ ಎಸಗಿದ ವೈಸ್‌ ಛಾನ್ಸೆಲರ್ ಅಭಿಜಿತ್‌ ಚಕ್ರವರ್ತಿ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಹಲ್ಲೆ ಮಾಡಿದ್ದರು ಇದನ್ನು ಖಂಡಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ವಿದ್ಯಾರ್ಥಿಗಳ ಮೇಲೆ ಇಂಥ ಕೃತ್ಯ ನಡೆದಿದ್ದರೂ ಕಾಲೇಜು ಆಡಳಿತ ಮಂಡಳಿ ಕಣ್ಣು ಮುಚ್ಚಿ ಕುಳಿತುಕೊಂಡಿದೆ. ಮೂವತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಲಾಠಿ ಏಟಿನಿಂದ ಗಂಭೀರ ಗಾಯಗಳಾಗಿವೆ. ಉದ್ದೇಶಪೂರ್ವಕವಾಗಿ ವಿದ್ಯಾರ್ಥಿನಿರಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗುತ್ತಿದೆ ಎಂದು ಕೋಲ್ಕತ್ತಾ ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ.(ಸಿಎಂಆರ್ ನಲ್ಲಿ ಹೊಸ ಸಂಶೋಧನಾ ತರಗತಿ ಆರಂಭ)

ವಿದ್ಯಾರ್ಥಿಗಳ ಪ್ರತಿಭಟನೆ ಬಿಸಿ ನಗರದಿಂದ ನಗರಕ್ಕೆ ವ್ಯಾಪಿಸುತ್ತಿದ್ದು ಅಭಿಜಿತ್‌ ಚಕ್ರವರ್ತಿ ರಾಜೀನಾಮೆಗೆ ಒತ್ತಡ ಹೆಚ್ಚಾಗುತ್ತಿದೆ.

English summary
A rally will be organised at Town Hall near KR Market here on Sunday morning to protest the brutal police attack on students in Jadavpur Univeristy in Kolkata in the wee hours of Wednesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X