ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮತದಾರರ ಪಟ್ಟಿ ಬಗ್ಗೆ ಗೊಂದಲವೇ? ಕರೆ ಮಾಡಿ

|
Google Oneindia Kannada News

ಬೆಂಗಳೂರು, ಮಾ.10 : ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು ಮಾ.16ರವರೆಗೆ ಕಾಲಾವಕಾಶವಿದೆ. ಮತದಾರರ ಪಟ್ಟಿಗೆ ಸಂಬಂಧಪಟ್ಟಂತೆ ಮಾಹಿತಿ ನೀಡಲು ಬಿಬಿಎಂಪಿ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುವ ಸಹಾಯವಾಣಿಯನ್ನು ತೆರೆದಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಸಹಾಯವಾಣಿಗೆ ಸೋಮವಾರ ಚಾಲನೆ ದೊರೆಯಲಿದೆ. ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ, ರದ್ಧತಿ ಮತ್ತು ತಿದ್ದುಪಡಿಗೆ ಮುಂತಾದ ವಿಷಯಗಳಿಗೆ ಸಂಬಂಧಿಸಿದಂತೆ ಸಹಾಯವಾಣಿಗೆ ಕರೆ ಮಾಡಿ ಸಾರ್ವಜನಿಕರು ಮಾಹಿತಿ ಪಡೆಯಬಹುದಾಗಿದೆ.

bbmp

0802297 5500/080 2297 5583 ಸಹಾಯವಾಣಿಗೆ ಕರೆ ಮಾಡಿ ಸಾರ್ವಜನಿಕರು ಮತದಾರರ ಪಟ್ಟಿಗೆ ನೋಂದಣಿಗೆ ಸಂಬಂಧಿಸಿದಂತೆ ಮಾಹಿತಿ ಪಡೆಯಬಹುದು. ಮತದಾರರ ಪಟ್ಟಿಗೆ ಹೆಸರು ನೋಂದಣಿ, ರದ್ಧತಿ ಮತ್ತು ತಿದ್ದುಪಡಿಗೆ ಮಾ. 16ರವರೆಗೆ ಅವಕಾಶವಿದೆ.[ಮತದಾರರ ಪಟ್ಟಿಯಲ್ಲಿ ಹೆಸರು ಹುಡುಕುವುದು ಸುಲಭ]

78,762 ಅರ್ಜಿ ಸಲ್ಲಿಕೆ : ಮತದಾರರ ಪಟ್ಟಿಗೆ ಸೇರಿಸಲು ಬಿಬಿಎಂಪಿ ನಗರ ವ್ಯಾಪ್ತಿಯ ಲೋಕಸಭಾ ಕ್ಷೇತ್ರಗಳಲ್ಲಿ ಹಮ್ಮಿಕೊಂಡಿರುವ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿಗೆ ಸುಮಾರು 78,762 ಅರ್ಜಿಗಳು ಸಲ್ಲಿಕೆಯಾಗಿವೆ. [ಮತದಾರರ ಪಟ್ಟಿಗೆ ಹೆಸರು ಸೇರಿಸುವುದು ಹೇಗೆ?]

ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ 13,456, ಬೆಂಗಳೂರು ಉತ್ತರದಲ್ಲಿ 18,828, ಬೆಂಗಳೂರು ದಕ್ಷಿಣದಲ್ಲಿ 16,434 ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ 30,044 ಅರ್ಜಿಗಳು ಸಲ್ಲಿಕೆಯಾಗಿವೆ. ಕೇಂದ್ರ ಚುನಾವಣಾ ಆಯೋಗದ ಆದೇಶದಂತೆ ಬಿಬಿಎಂಪಿ ಈ ಅಭಿಯಾನವನ್ನು ಆರಂಭಿಸಿದೆ. [ಲೋಕಸಭೆ ಚುನಾವಣಾ ವೇಳಾಪಟ್ಟಿ]

ಮತದಾರರ ಪಟ್ಟಿಗೆ ಹೆಸರು ಸೇರಿಸಲು http://voterreg.kar.nic.in/. ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ. ನಿಮ್ಮ ಹತ್ತಿರದ ಬೆಂಗಳೂರು ಒನ್ ಕೇಂದ್ರ, ಬಿಬಿಎಂಪಿ ವಾರ್ಡ್ ಕಚೇರಿಗೆ ಭೇಟಿ ನೀಡುವ ಮೂಲಕವೂ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ.

English summary
Bruhat Bangalore Mahanagara Palike(BBMP) begins call center for voters enrollment. People can call for 0802297 5500/080 2297 5583 no for details about voter enrollment at BBMP limits.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X