ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸೆಪ್ಟೆಂಬರ್ ವರೆಗೆ ಬಿಬಿಎಂಪಿ ಮೇಯರ್ ಸ್ಥಾನ ಅಭಾದಿತ

|
Google Oneindia Kannada News

ಬೆಂಗಳೂರು, ಏ. 23 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಮತ್ತು ಉಪ ಮೇಯರ್ ಅಧಿಕಾರಾವಧಿ ಬಗ್ಗೆ ಎದ್ದಿದ್ದ ಗೊಂದಲಗಳಿಗೆ ತೆರೆ ಬಿದ್ದಿದ್ದು, ಮೇಯರ್ ಕಟ್ಟೆ ಸತ್ಯನಾರಾಯಣ ಮತ್ತು ಉಪ ಮೇಯರ್ ಇಂದಿರಾ ಅವರು ಸೆ.4ರವರೆಗೆ ಅಧಿಕಾರದಲ್ಲಿ ಮುಂದುವರೆಯಲಿದ್ದಾರೆ.

ಮೇಯರ್ ಮತ್ತು ಉಪ ಮೇಯರ್ ಅವಧಿ ಏ.23 ರಂದು ಕೊನೆಗೊಳ್ಳುತ್ತಿತ್ತು. ನೂತನ ಮೇಯರ್ ಆಯ್ಕೆಗೆ ಚುನಾವಣೆ ನಡೆಸಲು ವೇಳಾಪಟ್ಟಿ ಪ್ರಕಟಿಸದಿರುವುದು ಗೊಂದಲಕ್ಕೆ ಕಾರಣವಾಗಿತ್ತು. ಸದ್ಯ ಬಿಬಿಎಂಪಿ ಆಯುಕ್ತ ಎಂ.ಡಿ.ಲಕ್ಷ್ಮೀನಾರಾಯಣ ಸೆ.4ರಂದು ಮೇಯರ್‌ ಹಾಗೂ ಉಪ ಮೇಯರ್‌ ಅವರನ್ನು ಆಯ್ಕೆ ಮಾಡಲಾಗಿದೆ. 2014ರ ಸೆ. 4ರವರೆಗೆ ಅವರು ಅಧಿಕಾರದಲ್ಲಿ ಇರಲಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.

Katte Satyanarayana

ಮೇಯರ್‌ ಹಾಗೂ ಉಪ ಮೇಯರ್‌ ಅಧಿಕಾರಾವಧಿ ಕುರಿತಂತೆ ಯಾವುದೇ ಗೊಂದಲವಿಲ್ಲ. ಆಯ್ಕೆಯಾದ ದಿನದಿಂದ ಒಂದು ವರ್ಷದವರೆಗೆ ಅವರು ಅಧಿಕಾರ ಹೊಂದಿರುತ್ತಾರೆ ಎಂಬುದು ಕರ್ನಾಟಕ ಪೌರಾಡಳಿತ ಕಾಯ್ದೆ -1976ರಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ ಎಂದು ಅವರು ವಿವರಿಸಿದರು. [ಬಿಬಿಎಂಪಿಗೆ ಹೊಸ ಮೇಯರ್ ಬರ್ತಾರಾ?]

ಬಿಬಿಎಂಪಿ ಚುನಾವಣೆ ನಡೆದ ನಂತರ ಮೊದಲ ಮೇಯರ್‌ ಆಗಿ ನಟರಾಜ್‌ ಅವರು 2010ರ ಏಪ್ರಿಲ್‌ 23ರಂದು ಅಧಿಕಾರ ಸ್ವೀಕರಿಸಿದ್ದರು. ಆದ್ದರಿಂದ ಪ್ರತಿವರ್ಷ ಏಪ್ರಿಲ್‌ ತಿಂಗಳ ಕೊನೆಯ ವಾರದಲ್ಲಿ ನೂತನ ಮೇಯರ್‌ ಆಯ್ಕೆ ಮಾಡುವುದು ವಾಡಿಕೆಯಾಗಿತ್ತು.

ಆದರೆ, ಕಟ್ಟೆ ಸತ್ಯನಾರಾಯಣ ಮತ್ತು ಇಂದಿರಾ ಅವರ ಆಯ್ಕೆ ವಿವಿಧ ಕಾರಣಗಳಿಂದಾಗಿ ವಿಳಂಬವಾಗಿತ್ತು. ಏಪ್ರಿಲ್ ನಲ್ಲಿ ಆಯ್ಕೆ ಆಗಬೇಕಿದ್ದ ಅವರು, 2013ರ ಸೆ. 4ರಂದು ಆಯ್ಕೆಯಾಗಿದ್ದರು. ಆದ್ದರಿಂದ ಇವರ ಅವಧಿ ಯಾವಾಗ ಮುಕ್ತಾಯವಾಗಲಿದೆ ಎಂಬ ಗೊಂದಲ ಉಂಟಾಗಿತ್ತು.

ಮೇಯರ್‌ ಕಟ್ಟೆ ಸತ್ಯನಾರಾಯಣ ಅವರು ಸಹ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ಕೆಎಂಸಿ ಕಾಯ್ದೆಯ ಪ್ರಕಾರ ಮೇಯರ್‌ ಸ್ಥಾನ ಅಲಂಕರಿಸಿದ ದಿನದಿಂದ ಒಂದು ವರ್ಷದ ಅವಧಿಗೆ ಮೇಯರ್‌ ಅಧಿಕಾರವಧಿ ಇರುತ್ತದೆ. ಈ ನಿಯಮದಂತೆ ಒಂದು ವರ್ಷ ಪೂರೈಸಲು ಅವಕಾಶ ನೀಡುವಂತೆ ಮನವಿ ಮಾಡಿದ್ದರು.

English summary
Katte Satyanarayana and Indira will continue as Bruhat Bengaluru Mahanagara Palike (BBMP) Mayor and Deputy Mayor till September 4. As per the calendar of events, the elections for BBMP Mayor and Deputy Mayor posts should be conducted every year April 23.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X