ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಕ್ರಮ ಆಸ್ತಿ ಪ್ರಕರಣ, 'ಜಯಾ'ಗೆ ಅಪಜಯ

|
Google Oneindia Kannada News

ಬೆಂಗಳೂರು, ಸೆ.27 : ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ವಿರುದ್ಧದ ಅಕ್ರಮ ಆಸ್ತಿ ಪ್ರಕರಣದ ತೀರ್ಪು ಪ್ರಕಟಗೊಂಡಿದೆ. ಜಯಲಲಿತಾ ವಿರುದ್ಧದ ಆರೋಪ ಸಾಬೀತಾಗಿದೆ ಎಂದು ಕೋರ್ಟ್ ತೀರ್ಪು ನೀಡಿದೆ. ಈ ಬಗ್ಗೆ ಪರಪ್ಪನ ಅಗ್ರಹಾರದ ಸಿಬಿಐ ವಿಶೇಷ ನ್ಯಾಯಾಲಯ ಶನಿವಾರ ತೀರ್ಪು ನೀಡಿದ್ದು, 4 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ.

ಜಯಲಲಿತಾ ಅವರು 1991 ರಿಂದ 1996ರ ಅವಧಿಯಲ್ಲಿ ತಮಿಳುನಾಡು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 66.65 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂಬ ಆರೋಪವಿದಾಗಿತ್ತು. 18 ವರ್ಷಗಳ ಸುಧೀರ್ಘ ವಿಚಾರಣೆ ನಂತರ ಸಿಬಿಐ ವಿಶೇಷ ನ್ಯಾಯಾಲಯ ಜಯಲಿತಾ ಅವರು ಅಪರಾಧಿ ಎಂದು ತೀರ್ಪು ನೀಡಿದೆ. [ಜಯಾ ಆರೋಪ ಸಾಬೀತು ಮುಂದೇನು?]

Jayalalithaa

ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಮೈಕಲ್ ಜಾನ್ ಕುನ್ಹ ಅವರ ಪೀಠ ತೀರ್ಪು ನೀಡಿದ್ದು, ಪ್ರಕರಣದಲ್ಲಿನ ಆರೋಪಿಗಳಾದ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಸೇರಿದಂತೆ ನಾಲ್ವರು ಅಪರಾಧಿ ಎಂದು ತೀರ್ಪು ನೀಡಿದ್ದಾರೆ. ಜಯಲಲಿತಾ ಸೇರಿದಂತೆ ನಾಲ್ವರು ಆರೋಪಿಗಳಿಗೂ 4 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. [ಜಯಾ ಕೇಸ್ ಕ್ಷಣ-ಕ್ಷಣದ ಮಾಹಿತಿ ಇಲ್ಲಿದೆ]

ಇದರಿಂದಾಗಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 13 (1) ಇ ಅಡಿ ಜಯಲಲಿತಾ ಅವರ ವಿರುದ್ಧದ ಅಕ್ರಮ ಆಸ್ತಿಗಳಿಗೆ ಆರೋಪ ಸಾಬೀತಾದಂತಾಗಿದೆ. ಕೋರ್ಟ್‌ ಜೈಲು ಶಿಕ್ಷೆಯ ಜೊತೆಗೆ 100 ಕೋಟಿ ರೂ. ದಂಡವನ್ನು ವಿಧಿಸಿ ಆದೇಶ ಹೊರಡಿಸಿದೆ. ಜಯಾ ಮತ್ತು ಸಿಬಿಐ ವಕೀಲರು ಜೈಲು ಶಿಕ್ಷೆಯ ಬಗ್ಗೆ ವಾದ ಮಂಡನೆ ಮಾಡಿದ ನಂತರ ತೀರ್ಪನ್ನು ಪ್ರಕಟಿಸಲಾಗಿದೆ.

ಅಕ್ರಮ ಆಸ್ತಿಗಳಿಕೆ ಪ್ರಕರಣದ ಕುರಿತು ನ್ಯಾಯಮೂರ್ತಿಗಳು 1300 ಪುಟಗಳ ತೀರ್ಪು ನೀಡಿದ್ದಾರೆ. ಈ ಪ್ರಕರಣದಲ್ಲಿ ಜಯಲಲಿತಾ ಮೊದಲನೇ ಅಪರಾಧಿಯಾಗಿದ್ದರೆ, ಶಶಿಕಲಾ 2ನೇ ಅಪರಾಧಿಯಾಗಿದ್ದು, ಸುಧಾಕರನ್ ಮತ್ತು ಇಲವರಸಿ ಮೂರು ಮತ್ತು ನಾಲ್ಕನೆಯ ಅಪರಾಧಿಗಳಾಗಿದ್ದಾರೆ.

English summary
A special court in parappana agrahara Bangalore Karnataka, which conducted the trial into a Rs 66.65 crore disproportionate assets case against Tamil Nadu Chief Minister J Jayalalithaa announced its verdict.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X