ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಸಿಯೂಟ ಸೇವನೆː ಮತ್ತೆ 35 ಮಕ್ಕಳು ಅಸ್ವಸ್ಥ

|
Google Oneindia Kannada News

ಬೆಂಗಳೂರು, ಸೆ. 20: ಬಿಸಿಯೂಟ ಸೇವಿಸಿ ಅಸ್ವಸ್ಥರಾಗಿ ಚಿಕಿತ್ಸೆ ಪಡೆದು ಮನೆಗೆ ವಾಪಸಾಗಿದ್ದ 35 ಮಕ್ಕಳ ಆರೋಗ್ಯದಲ್ಲಿ ಮತ್ತೆ ಏರು ಪೇರು ಉಂಟಾಗಿದೆ. ಮಕ್ಕಳನ್ನು ಮತ್ತೆ ಅಂಬೇಡ್ಕರ್ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.

ಶನಿವಾರ ಬೆಳಗ್ಗೆ 5 ಮಕ್ಕಳು ಆಸ್ಪತ್ರಗೆ ದಾಖಲಾಗಿದ್ದರು. ಆದರೆ ಮಧ್ಯಾಹ್ನದ ವೇಳೆಗೆ ಒಟ್ಟು 35 ಮಕ್ಕಳಲ್ಲಿ ವಾಂತಿ, ತಲೆ ಸುತ್ತು ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

mid day male

ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.

ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ ಅಸ್ವಸ್ಥರಾಗಲು ಕಾರಣವಾಗಿದ್ದ ಡಿ.ಜಿ.ಹಳ್ಳಿ ಶಾಲೆಗೆ ಶನಿವಾರ ಬೆಳಗ್ಗೆ ಭೇಟಿ ನೀಡಿದ್ದ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಸ್ಥಳೀಯರ ಆಕ್ರೊಶಕ್ಕೆ ತುತ್ತಾಗಬೇಕಾಯಿತು.

ಶನಿವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಸಚಿವರು ಶಾಲೆಗೆ ಭೇಟಿ ನೀಡಿದ್ದರು. ಸಚಿವರ ಆಗಮನದ ಸುದ್ದಿ ತಿಳಿದ ತಕ್ಷಣ ಸ್ಥಳೀಯರು ಮತ್ತು ಪಾಲಕರು ಸ್ಥಳಕ್ಕೆ ಧಾವಿಸಿದರು. ಅರ್ಧಗಂಟೆಯಲ್ಲಿ ಸುಮಾರು ನೂರಾರು ಜನ ಆಗಮಿಸಿ ಕಿಮ್ಮನೆ ರತ್ನಾಕರ್‌ ಅವರನ್ನು ತರಾಟೆಗೆ ತೆಗೆದುಕೊಂಡರು. ಸುಮಾರು 15 ನಿಮಿಷಗಳ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ನಂತರ ಸಚಿವ ಕಿಮ್ಮನೆ ಶಿಕ್ಷಣಾಧಿಕಾರಿಗಳಿಂದ ಘಟನೆಯ ಸಂಪೂರ್ಣ ಮಾಹಿತಿ ಪಡೆದರು.(ಬೆಂಗಳೂರಿನಲ್ಲಿ ಬಿಸಿಯೂಟ ಸೇವಿಸಿ 150 ಮಕ್ಕಳು ಅಸ್ವಸ್ಥ)

ಶಾಲೆ ಕಾಂಪೌಂಡ್‌ ಎತ್ತರಿಸಲು ಕ್ರಮ ತೆಗೆದುಕೊಳ್ಳಲಾಗುವುದು. ಬಾಲಕ ಮತ್ತು ಬಾಲಕಿಯರಿಗೆ 15 ಪ್ರತ್ಯೇಕ ಶೌಚಾಲಯ ನಿರ್ಮಾಣ ಮಾಡಲಾಗುವುದು ಎಂದು ಭರವಸೆ ನೀಡಿದರು. ಶುಕ್ರವಾರ ಮಧ್ಯಾಹ್ನದ ಬಿಸಿಯೂಟ ಸೇವಿಸಿದ್ದ ಸುಮಾರು 150 ಮಕ್ಕಳ ಆರೋಗ್ಯದಲ್ಲಿ ಏರುಪೇರಾಗಿದ್ದು ಅಂಬೇಡ್ಕರ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬೆಂಗಳೂರು ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಈ ವೇಳೆ ಮಾತನಾಡಿದ ಪಾಲಕರು, ನಿನ್ನೆ ಅವಘಡ ಸಂಭವಿಸಿದರೂ ಸರ್ಕಾರ ಯಾವ ನೆರವು ನೀಡಲಿಲ್ಲ. ಮಕ್ಕಳನ್ನು ನಾವೇ ಆಸ್ಪತ್ರೆಗೆ ದಾಖಲಿಸಿದೆವು. ಶಾಲೆಯಲ್ಲಿ ಕುಡಿಯಲು ನೀರಿಲ್ಲ, ವಿದ್ಯಾರ್ಥಿನಿಯರಿಗೆ ಸಮರ್ಪಕ ಶೌಚಾಲಯವಿಲ್ಲ. ಸ್ವಚ್ಛತೆ ಮರೆಯಾಗಿದೆ ಎಂದು ಆರೋಪಿಸಿದರು. ಸರ್ಕಾರ ಒಂದು ತಿಂಗಳಿನಲ್ಲಿ ಎಲ್ಲ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದರು.

English summary
Eduction minister Kimmane Ratnakar visit D.G.Halli urdu school on Saturday morning. And collected all the details of students food poison.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X