ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನಲ್ಲಿ ಐರಿಷ್ ಯುವತಿ ಮೇಲೆ ಲೈಂಗಿಕ ದೌರ್ಜನ್ಯ

|
Google Oneindia Kannada News

ಬೆಂಗಳೂರು, ಏ. 18 : ಐರಿಷ್ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ಬೆಂಗಳೂರಿನ ಕೇಂದ್ರ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ದೌರ್ಜನ್ಯ ನಡೆಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ರೈಲ್ವೆ ಪೊಲೀಸ್ ಸೂಪರ್ ಡೆಟೆಂಟ್ ಸಿದ್ರಾಮಪ್ಪ ಹೇಳಿದ್ದಾರೆ.

ಗುರುವಾರ ರಾತ್ರಿ ಹಂಪಿ ಎಕ್ಸ್ ಪ್ರೆಸ್ ರೈಲಿನಲ್ಲಿ ಆಗಮಿಸಿದ್ದ ಐರಿಷ್ ಯುವತಿ ಕೇರಳಕ್ಕೆ ತೆರಳಬೇಕಾಗಿತ್ತು. ರೈಲು ಬರಲು ಸಮಯವಿದ್ದಿದ್ದರಂದ ಆಕೆ ಎಸಿ ವಿಶ್ರಾಂತಿ ಕೊಠಡಿಯಲ್ಲಿದ್ದರು. ಈ ಸಂದರ್ಭದಲ್ಲಿ ಅಲ್ಲಿದ್ದ ಕಾಶೀನಾಥ್ ಯುವತಿ ಮೇಲೆ ದೌರ್ಜನ್ಯ ನಡೆಸಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

Bangalore railway station

ಯುವತಿಗೆ ಜೊತೆ ಮಾತುಕತೆ ನಡೆಸುತ್ತಿದ್ದ ದಾವಣಗೆರೆ ಮೂಲದ ಕಾಶೀನಾಥ್ (61) ಆಕೆಯ ಮೇಲೆ ದೌರ್ಜನ್ಯ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಯುವತಿ ಕೂಗಿದಾಗ ಸ್ಥಳಕ್ಕೆ ಪೊಲೀಸರು ಆಗಮಿಸಿ, ಆಕೆಯನ್ನು ರಕ್ಷಿಸಿ, ಆರೋಪಿಯನ್ನು ಬಂಧಿಸಿದ್ದಾರೆ. ಕಾಶೀನಾಥ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

33 ವರ್ಷದ ಐರಿಷ್ ಮಹಿಳೆ ನೀಡಿದ ದೂರಿನ ಅನ್ವಯ ಕಾಶೀನಾಥ್ ವಿರುದ್ಧ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 354 (ಎ) ಪ್ರಕಾರ ಲೈಂಗಿಕ ದೌರ್ಜನ್ಯದ ಪ್ರಕರಣ ದಾಖಲಿಸಲಾಗಿದೆ ಎಂದು ಸಿದ್ರಾಮಪ್ಪ ಹೇಳಿದ್ದಾರೆ.

English summary
An Irish tourist was allegedly molested by a man in the waiting room at the railway station in Bangalore. Accused Kashinath was arrested police said. "We arrested the person yesterday for molesting the Irish tourist in the A/C paid waiting room at Bangalore Railway Station said, Railways Superintendent of Police S N Siddaramappa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X