ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅತ್ಯಾಚಾರ ಖಂಡಿಸಿ ಜು.31ರಂದು ಬೆಂಗಳೂರು ಬಂದ್

|
Google Oneindia Kannada News

ಬೆಂಗಳೂರು, ಜು. 25 : ಬೆಂಗಳೂರು ಮತ್ತು ಕರ್ನಾಟಕದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ಕನ್ನಡ ಸಂಘಟನೆಗಳ ಒಕ್ಕೂಟ ಜು.31ರಂದು ಬೆಂಗಳೂರು ಬಂದ್ ಗೆ ಕರೆ ನೀಡಿವೆ. ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಬಂದ್ ನಡೆಯಲಿದೆ.

ಬೆಂಗಳೂರಿನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ ಕನ್ನಡ ಒಕ್ಕೂಟಗಳ ಸದಸ್ಯರು, ಜು.31ರ ಗುರುವಾರ ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದ್ದು ಬೆಳಗ್ಗೆ 6ರಿಂದ ಸಂಜೆ 6 ಗಂಟೆಯ ಬಂದ್ ನಡೆಯಲಿದೆ ಎಂದು ಹೇಳಿದರು. ಅಂದು ಬೆಳಗ್ಗೆ ಪುರಭವನದಿಂದ ಮುಖ್ಯಮಂತ್ರಿಗಳ ಮನೆಯ ತನಕ ಬೃಹತ್ ಜಾಥಾ ನಡೆಸಿ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ವಾಟಾಳ್ ನಾಗರಾಜ್ ತಿಳಿಸಿದರು.

bandh

ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಅಖಿಲ ಕರ್ನಾಟಕ ರಾಜ್‌ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಸುಬ್ಬಾರೆಡ್ಡಿ, ಕೆಎಸ್ಆರ್ ಟಿಸಿ ಮತ್ತು ಬಿಎಂಟಿಸಿ ನೌಕರರ ಸಂಘದ ಅಧ್ಯಕ್ಷ ಅನಂತ ಸುಬ್ಬುರಾವ್, ಕರ್ನಾಟಕ ರಕ್ಷಣಾ ವೇದಿಕೆಯ ಶಿವರಾಮೇಗೌಡ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. [ಅತ್ಯಾಚಾರ ಪ್ರಕರಣಗಳು]

ತುರ್ತುಸೇವೆಗಳನ್ನು ಹೊರತುಪಡಿಸಿ ಎಲ್ಲ ಶಾಲಾ-ಕಾಲೇಜುಗಳು, ಸರ್ಕಾರಿ ಕಚೇರಿ, ಸಾರಿಗೆ, ಸಿನಿಮಾ, ಆಟೋರಿಕ್ಷಾ, ಅಂಗಡಿ-ಮುಂಗಟ್ಟುಗಳು, ಐಟಿ-ಬಿಟಿ ಕಚೇರಿ, ಮಾಲ್ ಗಳನ್ನು ಜು.31ರಂದು ಬೆಳಗ್ಗೆ 6ರಿಂದ ಸಂಜೆ 6 ಗಂಟೆಯ ತನಕ ಬಂದ್ ಮಾಡಲಾಗುತ್ತದೆ ಎಂದು ವಾಟಾಳ್ ನಾಗರಾಜ್ ತಿಳಿಸಿದರು. ರಾಜಕೀಯ ಪಕ್ಷಗಳು ಬಂದ್ ಗೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.

ಅತ್ಯಾಚಾರಿಗಳನ್ನು ಗೂಂಡಾ ಕಾಯ್ದೆ ಸೇರಿಸದೆ ಗಲ್ಲು ಶಿಕ್ಷೆ ವಿಧಿಸಬೇಕು. ಅತ್ಯಾಚಾರ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪಿಸುವ ಮೂಲಕ ಒಂದು ತಿಂಗಳ ಅವಧಿಯಲ್ಲಿ ಪ್ರಕರಣದ ವಿಚಾರಣೆ ಪೂರ್ಣಗೊಂಡು ತೀರ್ಪು ಪ್ರಕಟಿಸುವ ರೀತಿಯಲ್ಲಿ ನೂತನ ಕಾಯ್ದೆ ಜಾರಿಗೊಳಿಸಬೇಕು ಮುಂತಾದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬಂದ್ ನಡೆಸಲಾಗುತ್ತಿದೆ ಎಂದು ವಾಟಾಳ್ ನಾಗರಾಜ್ ಹೇಳಿದರು.

English summary
Kannada Okkuta, comprising several Kannada organizations, on Friday, July 25 said it has called for a Bangalore bandh on July 31 Thursday over protesting against several cases of rape came to light in Bangalore and other parts of the Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X