ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೆಪಿಎಸ್‌ಸಿ : ಸಿಎಂ ರಾಜೀನಾಮೆಗೆ ಎಚ್ಡಿಕೆ ಒತ್ತಾಯ

|
Google Oneindia Kannada News

ಬೆಂಗಳೂರು, ಆ.11 : ಕೆಪಿಎಸ್ಸಿ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್ ಭಾಗಿಯಾಗಿದ್ದು ಇಬ್ಬರು ರಾಜೀನಾಮೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಇತ್ತ ನೇಮಕಾತಿ ರದ್ದು ವಿರೋಧಿಸಿ ಅಭ್ಯರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದೆ.

ಸೋಮವಾರ ವಿಧಾನಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕುಮಾರಸ್ವಾಮಿ, 2011ನೇ ಸಾಲಿನ ಕೆಪಿಎಸ್ಸಿ ನೇಮಕಾತಿ ರದ್ದತಿ ಪೂರ್ವನಿಯೋಜಿತವಾಗಿದ್ದು, ಇದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಜಿ ಪ್ರೊ.ರವಿವರ್ಮ ಕುಮಾರ್ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿದರು. ಹಗರಣಲ್ಲಿ ಭಾಗಿಯಾಗಿರುವ ಇಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

kumaraswamy

ಪತ್ರಿಕಾಗೋಷ್ಠಿಯಲ್ಲಿ ಕೆಪಿಎಸ್ಸಿ ಹಗರಣ ಬಯಲು ಮಾಡಿದ ಡಾ.ಮೈತ್ರಿ ಅವರ ದೂರವಾಣಿ ಕರೆ ದಾಖಲೆಗಳನ್ನು ಬಿಡುಗಡೆ ಮಾಡಿದ ಕುಮಾರಸ್ವಾಮಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಮಹತ್ವದ ದೂರವಾಣಿ ಕರೆ ದಾಖಲೆಗಳನ್ನು ಸೂಕ್ತ ಸಮಯದಲ್ಲಿ ಬಿಡುಗಡೆಗೊಳಿಸುವುದಾಗಿ ತಿಳಿಸಿದರು. [ಕೆಪಿಎಸ್ ಸಿ ನೇಮಕಾತಿ ರದ್ದು, ಸಿಡಿದೆದ್ದ ಅಭ್ಯರ್ಥಿಗಳು]

ಪರೀಕ್ಷೆಯಲ್ಲಿ ಭ್ರಷ್ಟಾಚಾರದ ಆರೋಪ ಮಾಡಿರುವ ಡಾ.ಮೈತ್ರಿಅವರ ಬಗ್ಗೆ ಮುಖ್ಯಮಂತ್ರಿ ಅವರಿಗೆ ಏಕೆ ಕನಿಕರ? ಎಂದು ಪ್ರಶ್ನಿಸಿದ ಕುಮಾರಸ್ವಾಮಿ. ಸಿಎಂ ಸಿದ್ದರಾಮಯ್ಯ ಅವರು ಸಂದರ್ಶನದ ವೇಳೆ ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯೆ ಮಂಗಳಾ ಶ್ರೀಧರ್ ಅವರಿಗೆ 70 ಬಾರಿ ಕರೆ ಮಾಡಿದ್ದು ಏಕೆ? ಎಂದು ಪ್ರಶ್ನಿಸಿದರು.

ಗೃಹ ಸಚಿವ ಕೆ.ಜೆ.ಜಾರ್ಜ್ ಸಲಹೆಗಾರರಾದ ನಿವೃತ್ತ ಪೊಲೀಸ್ ಅಧಿಕಾರಿ ಕೆಂಪಯ್ಯ ಅವರ ಸಂಬಂಧಿಯೊಬ್ಬರು ಕೆಪಿಎಸ್ಸಿ ಪರೀಕ್ಷೆ ಬರೆದಿದ್ದರು. ಆದರೆ, ಆಯ್ಕೆ ಪಟ್ಟಿಯಲ್ಲಿ ಅವರ ಹೆಸರಿಲ್ಲದ ಕಾರಣ, ನೇಮಕಾತಿ ಪ್ರಕ್ರಿಯೆಯನ್ನೇ ರದ್ದುಗೊಳಿಸಲಾಗಿದೆ. ಈ ಮೂಲಕ ಸಿದ್ದರಾಮಯ್ಯ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದರು.

ಆರೋಪ ತಳ್ಳಿಹಾಕಿದ ಸಿಎಂ : ಕುಮಾರಸ್ವಾಮಿ ಆರೋಪಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಳ್ಳಿಹಾಕಿದ್ದಾರೆ. ಸಿಐಡಿ ವರದಿ ಹಿನ್ನಲೆಯಲ್ಲಿ ನೇಮಕಾತಿ ರದ್ದುಗೊಳಿಸುವ ನಿರ್ಣಯ ಕೈಗೊಳ್ಳಲಾಗಿದೆ. ಇದರಲ್ಲಿ ಯಾವುದೇ ರಾಜಕೀಯ ನಿರ್ಧಾರವಿಲ್ಲ. ಈ ಕುರಿತು ಚರ್ಚಿಸಲು ವಿಧಾನಸಭೆ ಅಧಿವೇಶನ ಕರೆಯುವ ಅಗತ್ಯವಿಲ್ಲ ಎಂದು ಸಿಎಂ ಪ್ರತಿಕ್ರಿಯೆ ನೀಡಿದ್ದಾರೆ.

English summary
The Karnataka government's decision to cancel the 2011 KPSC notification over appointment of gazetted probationary officers (KAS) officers has received a mixed response. All the 362 affected candidates continued protest at Freedom Park Bangalore.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X