ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡಾ. ಜಿಎಸ್ಎಸ್ ಅಂತಿಮ ದರ್ಶನದ ವಿವರಗಳು

By Prasad
|
Google Oneindia Kannada News

ಬೆಂಗಳೂರು, ಡಿ. 25 : ರಾಷ್ಟ್ರಕವಿ ಡಾ ಜಿ. ಎಸ್. ಶಿವರುದ್ರಪ್ಪ ಅವರ ಅಂತಿಮ ದರ್ಶನಕ್ಕೆ ಡಿಸೆಂಬರ್ 26ರಂದು ಬೆಂಗಳೂರಿನ ವಿವಿಧೆಡೆ ಅನುವುಮಾಡಿಕೊಡಲಾಗಿದೆ. ಅದೇ ದಿನ ಸಂಜೆ ಅವರ ಅಂತ್ಯ ಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಬೆಂಗಳೂರು ವಿಶ್ವವಿದ್ಯಾಲಯದ ಬಳಿಯ ಕರ್ನಾಟಕ ಕಲಾಗ್ರಾಮದಲ್ಲಿ ನಡೆಯಲಿದೆ.

ಅಂತಿಮ ದರ್ಶನ ಎಲ್ಲೆಲ್ಲಿ?

ಡಾ ಜಿ. ಎಸ್. ಶಿವರುದ್ರಪ್ಪ ಅವರ ಪಾರ್ಥಿವ ಶರೀರವನ್ನು ಡಿಸೆಂಬರ್ 26ರಂದು ಬೆಳಿಗ್ಗೆ 7 ಗಂಟೆಗೆ ಆಸ್ಪತ್ರೆಯಿಂದ ಬನಶಂಕರಿ ಎರಡನೇ ಹಂತದಲ್ಲಿರುವ ರಾಷ್ಟ್ರಕವಿಯ ಮನೆಗೆ ತರಲಾಗುವುದು. ಅಂದು ಬೆಳಿಗ್ಗೆ 8 ಗಂಟೆಯಿಂದ 8.30 ಗಂಟೆಯವರೆಗೆ ಮನೆಯಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. [ಭಾವ ಜೀವಿಯ ಕೈ ಹಿಡಿದ ಪ್ರೀತಿಯ ಸೆಲೆ]

Rashtrakavi Dr. G.S. Shivarudrappa funeral details

ನಂತರ, ಬೆಳಿಗ್ಗೆ 9.30 ಗಂಟೆಯಿಂದ 10 ಗಂಟೆಯವರೆಗೆ ನಗರದ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್‌ನ ಪ್ರಾಂಗಣದಲ್ಲಿ ಡಾ ಜಿ. ಎಸ್. ಶಿವರುದ್ರಪ್ಪ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುವುದು. ತದನಂತರ, ನಗರದ ಜಯಚಾಮರಾಜೇಂದ್ರ ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿಎಸ್ಸೆಸ್ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುವುದು. [ಜಿಎಸ್ಎಸ್ ಬರೆದ ಉಯಿಲಿನಲ್ಲೇನಿದೆ]

ಇದಾದ ಬಳಿಕ ಮೈಸೂರು ರಸ್ತೆ ಮಾರ್ಗವಾಗಿ ಜ್ಞಾನಭಾರತಿಯಲ್ಲಿರುವ ಕನ್ನಡ ಅಧ್ಯಯನ ಸಂಸ್ಥೆಯತ್ತ ರಾಷ್ಟ್ರಕವಿಯ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಗುವುದು. ಜಿ ಎಸ್ ಎಸ್ ಅವರ ಪಾರ್ಥಿವ ಶರೀರಕ್ಕೆ ಅಲ್ಲಿ ಗೌರವ ಸಲ್ಲಿಸಿದ ನಂತರ ಪಾರ್ಥಿವ ಶರೀರವನ್ನು ಕರ್ನಾಟಕ ಕಲಾಗ್ರಾಮಕ್ಕೆ ಕೊಂಡೊಯ್ಯಲಾಗುವುದು. ಡಾ ಜಿ ಎಸ್ ಶಿವರುದ್ರಪ್ಪ ಅವರ ಅಂತ್ಯ ಸಂಸ್ಕಾರ ಕಲಾಗ್ರಾಮದಲ್ಲಿ ಸಂಜೆ 4.30 ಗಂಟೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

English summary
Rashtrakavi Dr. G.S. Shivarudrappa will be cremated on December 26th in the evening at Kalagrama premises in Jnanabharati in Bangalore with state honour. Before that public will be allowed to pay last respect the legendary poet in various parts in Bangalore.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X