ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬ್ರಾಹ್ಮಣ, ವೈಶ್ಯರಿಗೂ ಮೀಸಲಾತಿ: ಆಂಜನೇಯ

By Mahesh
|
Google Oneindia Kannada News

ಬೆಂಗಳೂರು, ಸೆ.22: ಯಾವುದೇ ಜಾತಿ, ಮತ, ಪಂಥವಿರಲಿ ಆರ್ಥಿಕವಾಗಿ ಹಿಂದುಳಿದ ಎಲ್ಲಾ ವರ್ಗದ ಜನತೆಯನ್ನು ಮುಖ್ಯವಾಹಿನಿಗೆ ಕರೆತರಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಬ್ರಾಹ್ಮಣ ಹಾಗೂ ಆರ್ಯ ವೈಶ್ಯ ಪಂಗಡಗಳಿಗೂ ಮೀಸಲಾತಿ ಕಲ್ಪಿಸುವ ಬಗ್ಗೆ ಗಂಭೀರ ಚಿಂತನೆ ನಡೆದಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ವಿಧಾನಸೌಧದಲ್ಲಿ ಸೋಮವಾರ ಘೋಷಿಸಿದ್ದಾರೆ.

ಹಿಂದುಳಿದ ವರ್ಗಗಳಿಗೆ ಪ್ರಸ್ತುತ ಒದಗಿಸಲಾಗುತ್ತಿರುವ ಎಲ್ಲ ರೀತಿಯ ಶೈಕ್ಷಣಿಕ ಹಾಗೂ ಆರ್ಥಿಕ ಸೌಲಭ್ಯಗಳನ್ನು ಸಾಮಾಜಿಕ ನ್ಯಾಯ ಒದಗಿಸಲು ಸರ್ಕಾರ ಬದ್ಧವಾಗಿದೆ.ಬ್ರಾಹ್ಮಣರು ಮತ್ತು ಆರ್ಯ ವೈಶ್ಯ ಸಮುದಾಯಗಳಲ್ಲಿನ ಆರ್ಥಿಕವಾಗಿ ಹಿಂದುಳಿದವರಿಗೂ ದೊರಕಿಸಲು ಶೀಘ್ರ ಆದೇಶ ಹೊರಡಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಎಚ್‌. ಆಂಜನೇಯ ತಿಳಿಸಿದರು.

ಕರ್ನಾಟಕದಲ್ಲಿ 1931ರಲ್ಲಿ ಜಾತಿವಾರು ಸಮೀಕ್ಷೆ ನಡೆದಿತ್ತು. ಈಗ ಮತ್ತೊಮ್ಮೆ ಜಾತಿವಾರು ಸಮೀಕ್ಷೆ ನಡೆಸಲಾಗುವುದು. ಇದಕ್ಕಾಗಿ 1.25 ಕೋಟಿಗೂ ಮನೆಗಳಿಗೆ ಲಕ್ಷಕ್ಕೂ ಅಧಿಕ ಸಿಬ್ಬಂದಿ ಭೇಟಿ ನೀಡಿ ಗಣತಿ ಕಾರ್ಯ ನಡೆಸಲಿದ್ದಾರೆ. ಸುಮಾರು 117ಕೋಟಿ ರು ವೆಚ್ಚದಲ್ಲಿ ಈ ಸಮೀಕ್ಷೆ ಕಾರ್ಯ ನಡೆಸಲಾಗುವುದು ಎಂದು ಆಂಜನೇಯ ಹೇಳಿದರು. [ಬ್ರಾಹ್ಮಣರೆಂಬ ರೋಮನ್ ಕ್ಯಾಥೋಲಿಕ್ಕರು!]

ಈ ಸಂಬಂಧ ಹಿಂದುಳಿದ ವರ್ಗಗಳ ಆಯೋಗದ ಅಭಿಪ್ರಾಯ ಕೇಳಲಾಗಿದೆ. ಅಭಿಪ್ರಾಯ ಬಂದ ಮೇಲೆ ಆರ್ಥಿಕ ಇಲಾಖೆಯ ಅನುಮೋದನೆ ಪಡೆದು ಇನ್ನೊಂದು ತಿಂಗಳಲ್ಲಿಆದೇಶ ಹೊರಡಿಸಲಾಗು ವುದು ಎಂದೂ ಹೇಳಿದ್ದಾರೆ.

Reservation for Brahmins and Vysyas Soon: H Anjaneya

ಇತ್ತೀಚೆಗೆ ಚಿಕ್ಕಬಳ್ಳಾಪುರದಲ್ಲಿ ಕರ್ನಾಟಕ ಆರ್ಯವೈಶ್ಯ ಮಹಾಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸಚಿವ ಆಂಜನೇಯ ಅವರು ಇದೇ ಮಾತುಗಳನ್ನು ಹೇಳಿದ್ದರು. ಎಲ್ಲ ಮುಂದುವರಿದ ಜನಾಂಗಗಳಲ್ಲಿ ಪ್ರವರ್ಗ ಅಥವಾ ಆರ್ಥಿಕ ಮಿತಿಗೆ ಒಳಪಡುವ ಅನೇಕ ವರ್ಗಗಳು ಹಿಂದುಳಿದ ವರ್ಗಗಳ ಇಲಾಖೆಯಿಂದ ಸಿಗುವ ಆರ್ಥಿಕ ಮತ್ತು ಶೈಕ್ಷಣಿಕ ಸೌಲಭ್ಯಗಳನ್ನು ಪಡೆದುಕೊಳ್ಳುತ್ತಿವೆ.[ಬ್ರಾಹ್ಮಣರನ್ನು ಕಂಡರೆ ನಗಬೇಕೋ ಅಳಬೇಕೋ!]

ಆದರೆ, ಬ್ರಾಹ್ಮಣ ಮತ್ತು ಆರ್ಯವೈಶ್ಯ ಜನಾಂಗದಲ್ಲಿ ಆರ್ಥಿಕವಾಗಿ ಹಿಂದುಳಿದವರು ಆ ಎಲ್ಲ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಸಾಮಾಜಿಕ ನ್ಯಾಯ ಪಾಲಿಸುವ ದೃಷ್ಟಿಯಿಂದ ಆ ಜನಾಂಗದವರಿಗೂ ಸೌಲಭ್ಯ ವಿಸ್ತರಿಸುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದೇನೆ ಎಂದಿದ್ದರು.

ಮೀಸಲಾತಿ ಸಿಕ್ಕರೆ ವಿದ್ಯಾಸಿರಿ, ಗಂಗಾ ಕಲ್ಯಾಣ, ಸಾಲ ಸೌಲಭ್ಯಗಳು ಸೇರಿದಂತೆ ಎಲ್ಲ ರೀತಿಯ ಆರ್ಥಿಕ ಮತ್ತು ಶೈಕ್ಷಣಿಕ ಸೌಲಭ್ಯಗಳನ್ನು ಆರ್ಥಿಕವಾಗಿ ಹಿಂದುಳಿದ ಮತ್ತು ಹಿಂದುಳಿದ ವರ್ಗಗಳ ಆದಾಯ ಮಿತಿ ವ್ಯಾಪ್ತಿಗೆ ಬರುವ ಬ್ರಾಹ್ಮಣರು ಮತ್ತು ಆರ್ಯ ವೈಶ್ಯರಿಗೆ ದೊರಕಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಪರಿಶಿಷ್ಟ ಜಾತಿ ಪಂಗಡ ಉಪ ಯೋಜನೆ ಕಾಯ್ದೆಯನ್ನು ಜಾರಿಗೊಳಿಸಿದ್ದರು. ಇದರಿಂದಾಗಿ ಈ ಸಮುದಾಯಗಳಿಗೆ ಕೇವಲ 2614 ಕೋಟಿ ರೂ ಇದ್ದ ಅನುದಾನ ಈಗ 15834 ಕೋಟಿ ರೂ. ವಿನಿಯೋಗಿಸುವಂತಾಗಿದೆ ಎಂದು ಆಂಜನೇಯ ಹೇಳಿದರು.

English summary
Minister of Social Welfare H Anjaneya on Monday announced that the government will make arrangements to provide reservation for both Brahmin and Vysya communities and bring them to the mainstream.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X