ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸರಣಿ ಅತ್ಯಾಚಾರ ಪ್ರಕರಣ : ವರದಿ ಕೇಳಿದ ಸೋನಿಯಾ

|
Google Oneindia Kannada News

ಬೆಂಗಳೂರು, ಜು. 20 : ಕರ್ನಾಟಕದಲ್ಲಿ ನಡೆಯುತ್ತಿರುವ ಸರಣಿ ಅತ್ಯಾಚಾರ ಪ್ರಕರಣಗಳ ವಿಷಯ ಕಾಂಗ್ರೆಸ್ ಹೈಕಮಾಂಡ್ ಅಂಗಳ ತಲುಪಿದೆ. ಅತ್ಯಾಚಾರ ಪ್ರಕರಣಗಳ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ವಸ್ತುಸ್ಥಿತಿಯ ವರದಿ ತರಿಸಿಕೊಳ್ಳುವಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿರುವ ಸರಣಿ ಅತ್ಯಾಚಾರ ಪ್ರಕರಣಗಳ ಬಗ್ಗೆ ರಾಷ್ಟ್ರೀಯ ಮಾಧ್ಯಮಗಳು ವರದಿ ಪ್ರಸಾರ ಮಾಡುತ್ತಿದ್ದು, ಸಾಮಾಜಿಕ ಜಾಲ ತಾಣಗಳಲ್ಲೂ ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ಸೋನಿಯಾ ಗಾಂಧಿ ಈ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

Sonia Gandhi

ರಾಜ್ಯದಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಸೋನಿಯಾ ಗಾಂಧಿ ಅವರು, ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೂಚನೆ ನೀಡಿದ್ದಾರೆ. [ಪೋಷಕರ ಕೂಗಿಗೆ ಏಳುವುದೇ ಸರ್ಕಾರ?]

ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮದ ಬಗ್ಗೆ ವರದಿ ನೀಡುವಂತೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಯಯ್ ಸಿಂಗ್ ಅವರಿಗೆ ಸೂಚನೆ ನೀಡಿದ್ದಾರೆ. ಕಾಂಗ್ರೆಸ್ ಹೈ ಕಮಾಂಡ್ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವುದರಿಂದ ಗೃಹ ಸಚಿವ ಕೆ.ಜೆ.ಜಾರ್ಜ್ ತಲೆ ದಂಡವಾಗುವುದೇ? ಎಂಬ ಪ್ರಶ್ನೆ ಎದ್ದಿದೆ. [ಅತ್ಯಾಚಾರ ಪ್ರಕರಣ : ವರದಿ ಕೇಳಿದ ಕೇಂದ್ರ]

ಖರ್ಗೆ ಭೇಟಿ : ಕರ್ನಾಟಕದಲ್ಲಿ ನಡೆಯುತ್ತಿರುವ ಸರಣಿ ಅತ್ಯಾಚಾರ ಪ್ರಕರಣವನ್ನು ಬಿಜೆಪಿ ದೆಹಲಿ ಮಟ್ಟಕ್ಕೆ ತೆಗೆದುಕೊಂಡು ಹೋಗುವ ಸಾಧ್ಯತೆ ಇದೆ. ಸಂಸತ್ತಿನಲ್ಲಿ ಈ ಬಗ್ಗೆ ಪ್ರಶ್ನಿಸುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಶನಿವಾರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

English summary
Congress president Sonia Gandhi has sought a report on several cases of rape came to light in Bangalore and other parts of the Karnataka in the past few days. AICC general secretary in charge of the Karnataka Digvijay Singh will submit the report to Sonia Gandhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X