ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಹಾ ಚುನಾವಣೆ, ಬೆಳಗಾವಿಯಲ್ಲಿ ಮದ್ಯ ಮಾರಾಟವಿಲ್ಲ

|
Google Oneindia Kannada News

ಬೆಳಗಾವಿ, ಅ. 14 : ಬುಧವಾರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಮತದಾನ ನಡೆಯುವ ಹಿನ್ನಲೆಯಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿ ಪ್ರದೇಶದಲ್ಲಿ ಮದ್ಯ ಮಾರಾಟವನ್ನು ಆದೇಶ ಹೊರಡಿಸಲಾಗಿದೆ. ಅ.13ರ ಸಂಜೆಯಿಂದ ಅ.15ರ ಮಧ್ಯರಾತ್ರಿ ತನಕ ಈ ನಿಷೇಧ ಜಾರಿಯಲ್ಲಿರುತ್ತದೆ.

ಮಹಾರಾಷ್ಟ್ರದ ವಿಧಾನಸಭೆಯ 288 ಸ್ಥಾನಗಳಿಗೆ ಅ.15ರ ಬುಧವಾರ ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಗಡಿ ಜಿಲ್ಲೆಗಳಾದ ಬೆಳಗಾವಿ, ಗುಲ್ಬರ್ಗ, ಬೀದರ್, ಬಿಜಾಪುರ ಜಿಲ್ಲೆಗಳ ಗಡಿ ಗ್ರಾಮಗಳಲ್ಲಿ ಅ.13ರಿಂದ ಅ.15ರ ಮಧ್ಯರಾತ್ರಿ ತನಕ ಮದ್ಯ ಮಾರಾಟ ನಿಷೇಧಿಸಲಾಗಿದೆ. ಮಹಾರಾಷ್ಟ್ರ ವಿಧಾನಸಭಾ ಕ್ಷೇತ್ರಗಳ 10 ಕಿ.ಮೀ.ವ್ಯಾಪ್ತಿಯಲ್ಲಿ ಈ ಆದೇಶ ಜಾರಿಯಲ್ಲಿರುತ್ತದೆ.

Maharashtra election : Liqour Banned in Belgaum District

ಜಿಲ್ಲಾಧಿಕಾರಿಗಳ ಆದೇಶದಂತೆ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಮರಾಟಾ ಹಾಗೂ ಮದ್ಯ ಪಾನ ಮಾಡುವುದನ್ನು ನಿಷೇಧಿಸಲಾಗಿದೆ. ಕರ್ನಾಟಕ ಮಹಾರಾಷ್ಟ್ರ ಗಡಿಭಾಗದಲ್ಲಿ ಹಲವಾರು ವಿಧಾನಸಭಾ ಕ್ಷೇತ್ರಗಳಿದ್ದು, ಅಲ್ಲಿಗೆ ಕರ್ನಾಟಕದಿಂದ ಮದ್ಯ ಸರಬರಾಜು ಆಗಬಹುದು ಎಂದು ಈ ಆದೇಶ ಹೊರಡಿಸಲಾಗಿದೆ. ['ಮಹಾ' ಚುನಾವಣೆ ಪೂರ್ವ ಸಮೀಕ್ಷೆ ಫಲಿತಾಂಶ!]

ಕುತೂಹಲ ಕೆರಳಿಸಿರುವ ಚುನಾವಣೆ : ಮಹಾರಾಷ್ಟ್ರದಲ್ಲಿ ಆಡಳಿತದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಎನ್‌ಸಿಪಿ ಜೊತೆಗಿನ ಮೈತ್ರಿಯನ್ನು ಕಡಿದುಕೊಂಡು ಚುನಾವಣೆ ಎದುರಿಸುತ್ತಿದ್ದರೆ. ಮತ್ತೊಂದು ಕಡೆ ಬಿಜೆಪಿ ಶಿವಸೇನೆಯ ಜೊತೆಗಿನ ಮೈತ್ರಿಯನ್ನು ಮುರಿದುಕೊಂಡು ಚುನಾವಣಾ ಅಖಾಡಕ್ಕಿಳಿದಿದೆ. ಎರಡೂ ಪಕ್ಷಗಳಿಗೆ ಸೋಲಿನ ರುಚಿ ತೋರಿಸಬೇಕೆಂದು ಎನ್‌ಸಿಪಿ ಮತ್ತು ಶಿವಸೇನೆ ರಣತಂತ್ರ ರೂಪಿಸಿವೆ. ಆದ್ದರಿಂದ ಈ ವಿಧಾನಸಭೆ ಚುನಾವಣೆ ಕುತೂಹಲ ಮೂಡಿಸಿದೆ. [ಮಹಾರಾಷ್ಟ್ರದಲ್ಲಿ ಬಿಜೆಪಿ-ಸೇನೆಯ ಮುಸುಕಿನ ಗುದ್ದಾಟ]

ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ರಾಷ್ಟ್ರೀಯ ನಾಯಕರು ಮಹಾರಾಷ್ಟ್ರದಲ್ಲಿ ಪ್ರಚಾರ ನಡೆಸಿದ್ದಾರೆ. ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿಭಾಗದಲ್ಲಿನ ಹಲವಾರು ವಿಧಾನಸಭಾ ಕ್ಷೇತ್ರಗಳಿದ್ದು, ಅಲ್ಲಿ ಕರ್ನಾಟಕ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಪ್ರಚಾರ ಕಾರ್ಯ ಕೈಗೊಂಡು ಪಕ್ಷದ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಿದ್ದಾರೆ.

English summary
Sale of Liqour has been banned in the border area of Karnataka-Maharashtra for three days from October 13 to 15 in the wake of October 15 Assembly polls in Maharashtra. An order to this effect was issued by the Deputy Commissioner, Belgaum.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X