ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

2002 ಗುಜರಾತ್ ಗಲಭೆ : ನರೇಂದ್ರ ಮೋದಿಗೆ ಕ್ಲೀನ್ ಚೀಟ್

By Mahesh
|
Google Oneindia Kannada News

ಅಹಮದಾಬಾದ್, ಡಿ.26: ಗುಜರಾತ್ ಮುಖ್ಯಮಂತ್ರಿ, ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ವಿರುದ್ಧದ ಬಹುನಿರೀಕ್ಷಿತ 2002ರ ಗುಜರಾತ್ ಕೋಮುಗಲಭೆ ಪ್ರಕರಣದ ಅಂತಿಮ ತೀರ್ಪು ಗುರುವಾರ ಪ್ರಕಟಗೊಂಡಿದೆ. ನರೇಂದ್ರ ಮೋದಿಗೆ ಅಹಮದಾಬಾದ್ ಕೋರ್ಟ್ ಕ್ಲೀನ್ ಚಿಟ್ ನೀಡಿದೆ.

ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಝಾಕಿಯಾ ಝಫ್ರಿ ಅವರ ಅರ್ಜಿ ವಿಚಾರಣೆ ನಡೆಸಿದ ಅಹಮದಾಬಾದ್ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಬಿ.ಜೆ.ಗನತ್ರ ಅವರು ತೀರ್ಪನ್ನು ಗುರುವಾರಕ್ಕೆ ಕಾಯ್ದಿರಿಸಿದ್ದರು, ಇಂದು ಮಧ್ಯಾಹ್ನ ತೀರ್ಪು ಪ್ರಕಟಿಸಿದ ಗನತ್ರ ಅವರು, ವಿಶೇಷ ತನಿಖಾ ತಂಡ (ಎಸ್ಐಟಿ) ದ ವರದಿಯನ್ನು ಎತ್ತಿ ಹಿಡಿದಿದ್ದಾರೆ.

ಗುಜರಾತ್ ಗಲಭೆ ಕುರಿತು ತನಿಖೆ ನಡೆಸಲು ಸುಪ್ರೀಂ ಕೋರ್ಟ್ ನೇಮಿಸಿದ್ದ ವಿಶೇಷ ತನಿಖಾ ತಂಡ (ಎಸ್ಐಟಿ) ಈಗಾಗಲೇ ಮೋದಿ ಸೇರಿದಂತೆ ಪ್ರಕರಣದ 57 ಆರೋಪಿಗಳಿಗೆ ಕ್ಲೀನ್ ಚಿಟ್ ನೀಡಿ, ವರದಿ ನೀಡಿತ್ತು.

2002 Gujarat riots: Verdict on Zakia Jafri's plea against clean chit to Narendra Modi

ಆದರೆ ಎಸ್ಐಟಿಯ ನಿರ್ಧಾರವನ್ನು ವಿರೋಧಿಸಿ ಝಾಕಿಯಾ ಝಪ್ರಿ ಅವರು ಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಧೀಶರು ಅಕ್ಟೋಬರ್ 28ಕ್ಕೆ ತೀರ್ಪು ಪ್ರಕಟಿಸುವುದಾಗಿ ಹೇಳಿದ್ದರು. ನಂತರ ಡಿಸೆಂಬರ್ 2ಕ್ಕೆ ಮುಂದೂಡಿದ್ದರು. ನಂತರ ಅಂತಿಮ ತೀರ್ಪು ಡಿಸೆಂಬರ್ 26ಕ್ಕೆ ಕಾಯ್ದಿರಿಸಲಾಗಿತ್ತು. ಇಂದು ತೀರ್ಪು ಪ್ರಕಟಗೊಂಡಿದ್ದು, ಮೋದಿ ಅವರಿಗೆ ಕ್ಲೀನ್ ಚಿಟ್ ಸಿಕ್ಕಿದೆ.

ಫೆಬ್ರುವರಿ 28, 2002ರಲ್ಲಿ ಗುಜರಾತ್ನ ಗುಲ್ಬರ್ಗದಲ್ಲಿ ನಡೆದ ಹತ್ಯಾಕಾಂಡದಲ್ಲಿ ಜಾಕಿಯಾ ಜಫ್ರಿ ಅವರ ಪತಿ ಹಾಗೂ ಮಾಜಿ ಕಾಂಗ್ರೆಸ್ ಸಂಸದ ಇಶಾನ್ ಜಫ್ರಿ ಸೇರಿದಂತೆ 35 ಮಂದಿ ಸಜೀವ ದಹನವಾಗಿದ್ದರು.

ಗುಲ್ಬರ್ಗ್ ಹೌಸಿಂಗ್ ಸೊಸೈಟಿ ಗಲಭೆ ಹಾಗೂ ಎಹ್ಸಾನ್ ಕೊಲೆ ಪ್ರಕರಣ ಕುರಿತಂತೆ ಸಿಬಿಐನ ಮಾಜಿ ನಿರ್ದೇಶಕ ಆರ್.ಕೆ.ರಾಘವನ್ ನೇತೃತ್ವದ ವಿಶೇಷ ತನಿಖಾ ತಂಡ ತನಿಖೆ ನಡೆಸಿತ್ತು. 2011ರ ಸೆಪ್ಟೆಂಬರ್ 12ರಂದು ಸುಪ್ರಿಂ ಕೋರ್ಟ್‌ನ ಮೂವರು ಸದಸ್ಯರ ವಿಸ್ತೃತ ನ್ಯಾಯಪೀಠ, ವಿಶೇಷ ತನಿಖಾ ತಂಡದ ಅಂತಿಮ ವರದಿಯನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಸ್ತಾಂತರಿಸುವಂತೆ ಆದೇಶ ನೀಡಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ಅಹಮದಾಬಾದ್ ವಿಚಾರಣಾ ನ್ಯಾಯಾಲಯ 2012ರ ಮಾರ್ಚ್ 13ರಂದು ತನಿಖಾ ತಂಡ ಸಲ್ಲಿಸಿದ್ದ ಪರಿಸಮಾಪ್ತಿ ವರದಿಯನ್ನು ಎತ್ತಿ ಹಿಡಿದಿತ್ತು.

ನ್ಯಾಯಾಲಯಕ್ಕೆ ಉತ್ತರ ನೀಡಿದ ಸಿಐಟಿ ಪರ ವಕೀಲರು, ಗೋದ್ರೋತ್ತರ ಹಿಂಸಾಚಾರ ವೇಳೆ ಯಾರನ್ನೇ ಕೊಲ್ಲುವ ಬಗ್ಗೆಯಾಗಲೀ ಅಥವಾ ಗಲಭೆ ನಿರತರ ವಿರುದ್ಧ ಕ್ರಮ ಕೈಗೊಳ್ಳಬೇಡಿ ಎಂದು ಪೊಲೀಸರಿಗೆ ಮೋದಿ ಸೂಚಿಸಿದ್ದರು ಎಂಬುದು ಕೇವಲ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾದ್‌ ಸೃಷ್ಟಿಸಿದ ಕಥೆ. ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಮೋದಿಯನ್ನು ಗುರಿಯಾಗಿಸಿ ಇಂತಹದ್ದೊಂದು ಆರೋಪವನ್ನು ಸೃಷ್ಟಿಸಿಲಾಗಿತ್ತು ಎಂದು ಹೇಳಿದ್ದರು.

ಸಂತಸ ಹಂಚಿಕೊಂಡ ಮೋದಿ

English summary
Ahmedabad Metropolitan magistrate BJ Ganatra on Thursday gave clean chit to Narendra Modi in realated communal riots of 2002. Zakia's husband, former Congress MP Ehsan Jafri, was killed in the riots along with 69 others in one of the worst massacres at Gulbarg Society in Ahmedabad on February 28, 2002.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X