ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನನ್ನ ಹುಟ್ಟು ಹಬ್ಬ ಆಚರಿಸಬೇಡಿ ಮೋದಿ ಕರೆ

|
Google Oneindia Kannada News

ನವದೆಹಲಿ, ಸೆ. 15 : ಸೆ.17ರ ಬುಧವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬ. ಆದರೆ, "ನನ್ನ ಹುಟ್ಟುಹಬ್ಬವನ್ನು ಆಚರಿಸಬೇಡಿ ಅದರ ಬದಲು ಕಾಶ್ಮೀರದ ಪ್ರವಾಹದಲ್ಲಿ ಸಿಲುಕಿರುವ ಜನರಿಗೆ ಸಹಾಯ ಮಾಡಿ" ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ಜನರಿಗೆ ಮನವಿ ಮಾಡಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಈ ಕುರಿತು ಟ್ವಿಟ್ ಮಾಡಿದ್ದು, ಸೆ.17ರಂದು ನನ್ನ ಹುಟ್ಟುಹಬ್ಬವನ್ನು ಆಚರಿಸಬೇಡಿ ಎಂದು ಪಕ್ಷದ ಕಾರ್ಯಕರ್ತರಿಗೆ ಮತ್ತು ದೇಶದ ಜನರಿಗೆ ಮನವಿ ಮಾಡಿದ್ದಾರೆ. ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಪ್ರಧಾನಿ ಟ್ವಿಟ್ ಮಾಡಿದ್ದು, ಕಾಶ್ಮೀರದ ಭೀಕರ ಪ್ರವಾಹದಲ್ಲಿ ಸಿಲುಕಿರುವ ಜನರ ರಕ್ಷಣೆಗೆ ಸಹಕಾರ ನೀಡುವಂತೆ ಕೋರಿದ್ದಾರೆ.

Narendra Modi

ಸೆ.17ರಂದು ಚೀನಾ ಅಧ್ಯಕ್ಷ ಜಿನ್‌ಪಿಂಗ್ ಗುಜರಾತ್ ರಾಜ್ಯಕ್ಕೆ ಆಗಮಿಸುತ್ತಿದ್ದು ಅವರನ್ನು ಸಾವು ಸ್ವಾಗತಿಸೋಣ. ಆದರೆ, ಹುಟ್ಟುಬ್ಬಕ್ಕಾಗಿ ಜನರು ಮತ್ತು ಕಾರ್ಯಕರ್ತರು ಕಾರ್ಯಕ್ರಮ ಹಮ್ಮಿಕೊಂಡಿದ್ದರೆ ಅದನ್ನು ಆಚರಣೆ ಮಾಡಬೇಡಿ. ಅದರ ಹಣವನ್ನು ಕಾಶ್ಮೀರ ಪ್ರವಾಹದಲ್ಲಿ ಸಿಲುಕಿರುವ ಜನರ ರಕ್ಷಣೆಗಾಗಿ ಕೊಡಿ ಎಂದು ಮೋದಿ ಮನವಿ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಸೆ.17ರಂದು 64ನೇ ವರ್ಷಕ್ಕೆ ಪಾದಾರ್ಪಣೆ ಮಾಡಲಿದ್ದಾರೆ. ಅಂದು ಬೆಳಗ್ಗೆ ಅವರು ಗುಜರಾತ್‌ಗೆ ತೆರಳಿ ತಾಯಿಯ ಆಶೀರ್ವಾದ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ. ಕಾಶ್ಮೀರದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಜನರ ನೆರವಿಗೆ ನನ್ನ ಜನ್ಮದಿನಾಚರಣೆಗೆ ವ್ಯಯಿಸುವ ಸಮಯ ಮತ್ತು ಸಂಪನ್ಮೂಲವನ್ನು ವ್ಯಯಿಸಿ ಎಂದು ಮೋದಿ ಕರೆ ನೀಡಿದ್ದಾರೆ.

English summary
Tweeting in both Hindi and English, prime minister Narendra Modi who turns 64 on Wednesday, asked people to not indulge in his birthday celebrations but instead focus on relief work in Kashmir.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X