ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹರ್ಯಾಣದಲ್ಲಿ ಚುನಾವಣಾ ಪ್ರಚಾರ ಆರಂಭಿಸಿದ ಮೋದಿ

|
Google Oneindia Kannada News

ಹರ್ಯಾಣ, ಅ.4 : 'ಹರ್ಯಾಣ ರಾಜ್ಯದ ಬದಲಾವಣೆಯ ಸಮಯ ಬಂದಿದೆ. ರಾಜ್ಯವನ್ನು ಅಭಿವೃದ್ಧಿಯ ದಿಕ್ಕಿನಲ್ಲಿ ತೆಗೆದುಕೊಂಡು ಹೋಗಲು ಈ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಿ' ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಅ.15ರಂದು ಹರ್ಯಾಣದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ಕರ್ನಾಲ್‌ನಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದರು. ಹರ್ಯಾಣ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸುವಂತೆ ಮನವಿ ಮಾಡಿದರು.

Narendra Modi

ಕರ್ನಾಲ್ ನಗರವನ್ನು ಸ್ಮಾರ್ಟ್ ಸಿಟಿಯಾಗಿ ಅಭಿವೃದ್ಧಿಪಡಿಸುವ ಹಾಗೂ ರಾಜ್ಯಾದ್ಯಂತ 24 ಗಂಟೆಗಳ ವಿದ್ಯುತ್ ಪೂರೈಕೆ ಮಾಡುವ ಭರವಸೆಯನ್ನು ತಮ್ಮ ಪ್ರಚಾರ ಭಾಷಣದಲ್ಲಿ ನೀಡಿದ ಮೋದಿ, ಹರ್ಯಾಣದಲ್ಲಿ ನಿರಂತರ ವಿದ್ಯುತ್ ಪೂರೈಕೆಯಾಗದೆ ರೈತರು ಕಂಗಾಲಾಗಿದ್ದಾರೆ ಇದಕ್ಕೆ ರಾಜ್ಯ ಸರ್ಕಾರ ಕಾರಣ ಎಂದು ಆರೋಪಿಸಿದರು.

ಹರ್ಯಾಣದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಯಾವುದೇ ಅಭಿವೃದ್ಧಿಯ ಕೆಲಸಗಳನ್ನು ಮಾಡಲು ಸಾಧ್ಯವಾಗಿಲ್ಲ. ಪ್ರಸ್ತುತ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಿ ಕಾಂಗ್ರೆಸ್ ಮುಕ್ತ ಸರ್ಕಾರ ರಚನೆಗೆ ಅವಕಾಶ ನೀಡಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಕೇಂದ್ರದಲ್ಲಿ ಸಂಪೂರ್ಣ ಬಹುಮತದ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ಸಹಾಯ ಮಾಡಿದ್ದೀರಿ. ಇದರಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಬಗ್ಗೆ ಗೌರವ ಹೆಚ್ಚಿದೆ. ಇದು ದೇಶದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಲು ಪ್ರೇರಣೆ ನೀಡಿದೆ ಎಂದು ಹೇಳಿದರು. ಸದ್ಯ ಹರ್ಯಾಣ ರಾಜ್ಯದ ಅಭಿವೃದ್ಧಿ ಮಾಡಲು ಅವಕಾಶ ಒದಗಿಬಂದಿದೆ. ರಾಜ್ಯದ ಅಭಿವೃದ್ಧಿ ಮಾಡುತ್ತೇವೆ ಮತ ನೀಡಿ ಎಂದರು.

ಪ್ರಧಾನಿ ನರೇಂದ್ರ ಮೋದಿ ಶನಿವಾರದಿಂದ ವಿಧಾನಸಭೆ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಹರ್ಯಾಣ ಮತ್ತು ಮಹಾರಾಷ್ಟ್ರದಲ್ಲಿ ಮೋದಿ ಸಮಾವೇಶಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅ.15ರಂದು ಎರಡೂ ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ.

English summary
Kick-starting the election campaign here in Haryana, Prime Minister Narendra Modi addressed a rally and sought a change from the people of Haryana. Addressing his first election rally after the recent Lok Sabha elections, Modi said that the Oct 15 elections for Haryana's 90 assembly seats would decide the future of Haryana.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X