ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗಡಿಯಲ್ಲಿ ಪಾಕ್ ಗುಂಡಿನ ದಾಳಿ, 9 ಸಾವು

|
Google Oneindia Kannada News

ನವದೆಹಲಿ, ಅ.6 : ಪಾಕಿಸ್ತಾನ ಸೇನೆ ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಸತತವಾಗಿ ಗುಂಡಿನ ದಾಳಿ ನಡೆಸುತ್ತಿದೆ. ಅಪ್ರಚೋದಿತ ಗುಂಡಿನ ದಾಳಿಯಿಂದಾಗಿ 9 ಜನರು ಸಾವನ್ನಪ್ಪಿದ್ದು, 26 ಜನರು ಗಾಯಗೊಂಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಅರ್ನಿಯಾ ಸೆಕ್ಟರ್‌ನಲ್ಲಿ ಭಾನುವಾರ ರಾತ್ರಿಯಿಂದ ಪಾಕ್ ಪಡೆಗಳು ಗುಂಡಿನ ದಾಳಿ ನಡೆಸುತ್ತಿದ್ದು, ಕದನ ವಿರಾಮವನ್ನು ಉಲ್ಲಂಘಿಸಿವೆ. ಬಿಎಸ್‌ಎಫ್‌ ಕಾವಲು ಠಾಣೆಗಳು ಮತ್ತು ನಾಗರಿಕ ಪ್ರದೇಶಗಳ ಮೇಲೆ ಗುಂಡಿನ ದಾಳಿ ನಡೆದಿದ್ದು, ಸೋಮವಾರ ಮುಂಜಾನೆಯೂ ದಾಳಿ ಮುಂದುವರೆದಿದೆ.

Jammu Kashmir

ಸೋಮವಾರ ಬೆಳಗ್ಗೆ 8 ಗಂಟೆಗೆ ಮೆಂಧಾರ್‌ ವಲಯದಲ್ಲಿ ಸುಮಾರು 30 ನಿಮಿಷಗಳ ಕಾಲ ಅಪ್ರಚೋದಿತ ಗುಂಡಿನ ದಾಳಿ ನಡೆಸಲಾಗಿದೆ. ಭಾರತೀಯ ಯೋಧರು ಪ್ರತಿದಾಳಿ ನಡೆಸಿದಾಗ ನಾಲ್ವರು ಪಾಕ್ ಪ್ರಜೆಗಳು ಮೃತಪಟ್ಟಿದ್ದಾರೆ. ಈ ಗುಂಡಿನ ದಾಳಿಯಿಂದಾಗಿ 9 ಜನರು ಸಾವನ್ನಪ್ಪಿದ್ದರೆ, 26 ಜನರು ಗಾಯಗೊಂಡಿದ್ದಾರೆ.

ಮೂವರು ಉಗ್ರರ ಹತ್ಯೆ : ಇದೇ ವೇಳೆ ಜಮ್ಮು-ಕಾಶ್ಮೀರದ ತಂಗ್‌ಧರ್‌ ಬಳಿ ನಿಯಂತ್ರಣ ರೇಖೆಯಲ್ಲಿ ಭಾರತದ ಗಡಿಯೊಳಕ್ಕೆ ನುಸುಳಲು ಯತ್ನಿಸಿದ ಮೂವರು ಉಗ್ರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ. ಅಕ್ಟೋಬರ್ 1ರ ನಂತರ ಪಾಕ್ ಪಡೆಗಳು 10 ಬಾರಿ ಕದನ ವಿರಾಮ ಒಪ್ಪಂದವನ್ನು ಉಲ್ಲಂಘನೆ ಮಾಡಿದೆ.

ಸಿಂಗ್ ಎಚ್ಚರಿಕೆ : ಪಾಕಿಸ್ತಾನ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿರುವುದನ್ನು ತಕ್ಷಣ ನಿಲ್ಲಿಸಬೇಕು. ಅದು ತನ್ನ ತಪ್ಪನ್ನು ತಿದ್ದಿಕೊಳ್ಳಬೇಕು. ಇಲ್ಲದಿದ್ದರೆ ನಮ್ಮ ಸೈನಿಕರು ಕೂಡ ತಕ್ಕ ಪಾಠ ಕಲಿಸಲು ಹಿಂಜರಿಯುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.

ಸೋಮವಾರ ದೆಹಲಿಯಲ್ಲಿ ಮಾತನಾಡಿದ ಅವರು, ಭಾರತದಲ್ಲಿ ಉಂಟಾಗುತ್ತಿರುವ ಬದಲಾವಣೆ ಮತ್ತು ಇಲ್ಲಿನ ಪರಿಸ್ಥಿತಿಯನ್ನು ನೆರೆಯ ರಾಷ್ಟ್ರ ಅರ್ಥ ಮಾಡಿಕೊಳ್ಳಬೇಕು. ಕದನ ವಿರಾಮ ಉಲ್ಲಂಘನೆ ಮಾಡಿ ಮುಗ್ಧ ನಾಗರಿಕರು ಹಾಗೂ ಸೈನಿಕರ ಮೇಲೆ ಹಲ್ಲೆ ನಡೆಸುವುದು ಸರಿಯಲ್ಲ ಎಂದು ಅವರು ಅಭಿಪ್ರಾಯ ಪಟ್ಟರು.

English summary
Nine civilians were killed and 26 injured in shelling from the Pakistani side of the India-Pakistan border in Jammu district Monday, October 6. Monday's major ceasefire violations by Pakistani rangers came on a day when Muslims in both India and Pakistan are celebrating the holy Eid-ul-Azha festival.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X