ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರವಾಹ ಪೀಡಿತ ಕಾಶ್ಮೀರದಲ್ಲಿ ಮೋದಿ ಸಮೀಕ್ಷೆ

|
Google Oneindia Kannada News

ಶ್ರೀನಗರ, ಸೆ.7 : ಭಾರೀ ಮಳೆಯಿಂದಾಗಿ ಪ್ರವಾಹಕ್ಕೆ ತುತ್ತಾಗಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾನುವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ವೈಮಾನಿಕ ಸಮೀಕ್ಷೆ ನಡೆಸಿದರು. ಇದು ಪ್ರವಾಹವಲ್ಲ ರಾಷ್ಟ್ರೀಯ ವಿಪತ್ತು. ಕಣಿವೆ ರಾಜ್ಯದ ಜನತೆ ಆತಂಕ ಪಡುವ ಅಗತ್ಯವಿಲ್ಲ. ಕೇಂದ್ರ ಸರ್ಕಾರ ನಿಮ್ಮ ನೆರವಿಗಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಮೋದಿ ಜನರಿಗೆ ಭರವಸೆ ನೀಡಿದ್ದಾರೆ.

ಕಳೆದ ನಾಲ್ಕು ದಿನಗಳಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಸುರಿಯುತ್ತಿದ್ದ ಮಳೆ ಭಾನುವಾರ ಕೊಂಚ ಬಿಡುವು ನೀಡಿತ್ತು. ಆದ್ದರಿಂದ ಪ್ರಧಾನಿ ಮೋದಿ, ವೈಮಾನಿಕ ಸಮೀಕ್ಷೆ ನಡೆಸಲು ಸಹಕಾರಿಯಾಯಿತು. ಮೊದಲಿಗೆ ಪ್ರವಾಹ ಪೀಡಿತ ಪ್ರದೇಶಗಳ ಸಮೀಕ್ಷೆ ನಡೆಸಿದ ಮೋದಿ, ನಂತರ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪರಿಹಾರ ಕಾರ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡರು. [ಕಾಶ್ಮೀರ ಪ್ರವಾಹದಲ್ಲಿ ಸಿಲುಕಿದ್ದಾರೆ 11 ಕನ್ನಡಿಗರು]

ಜಮ್ಮು ಕಾಶ್ಮೀರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮೋದಿ, ಪ್ರವಾಹದ ಕುರಿತು ಅಧಿಕಾರಿಗಳು ಮತ್ತು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರಿಂದ ಮಾಹಿತಿ ಪಡೆದಿದ್ದೇವೆ. ಇದು ಪ್ರವಾಹವಲ್ಲ ರಾಷ್ಟ್ರೀಯ ವಿಪತ್ತು. ಕಣಿವೆ ರಾಜ್ಯದ ಜನತೆ ಆತಂಕ ಪಡುವ ಅಗತ್ಯವಿಲ್ಲ. ಕೇಂದ್ರ ಸರ್ಕಾರ ನಿಮ್ಮ ನೆರವಿಗಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಹೇಳಿದರು. ಜಮ್ಮು ಕಾಶ್ಮೀರದ ಪ್ರವಾಹದ ಚಿತ್ರಗಳು [ಪಿಟಿಐ ಚಿತ್ರಗಳು]

ನರೇಂದ್ರ ಮೋದಿ ವೈಮಾನಿಕ ಸಮೀಕ್ಷೆ

ನರೇಂದ್ರ ಮೋದಿ ವೈಮಾನಿಕ ಸಮೀಕ್ಷೆ

ಭಾರೀ ಮಳೆಯಿಂದಾಗಿ ಪ್ರವಾಹಕ್ಕೆ ತುತ್ತಾಗಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾನುವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ವೈಮಾನಿಕ ಸಮೀಕ್ಷೆ ನಡೆಸಿದರು. ಇದು ಪ್ರವಾಹವಲ್ಲ ರಾಷ್ಟ್ರೀಯ ವಿಪತ್ತು. ಕಣಿವೆ ರಾಜ್ಯದ ಜನತೆ ಆತಂಕ ಪಡುವ ಅಗತ್ಯವಿಲ್ಲ. ಕೇಂದ್ರ ಸರ್ಕಾರ ನಿಮ್ಮ ನೆರವಿಗಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಮೋದಿ ಜನರಿಗೆ ಭರವಸೆ ನೀಡಿದ್ದಾರೆ.

ನರೇಂದ್ರ ಮೋದಿ ವೈಮಾನಿಕ ಸಮೀಕ್ಷೆ

ನರೇಂದ್ರ ಮೋದಿ ವೈಮಾನಿಕ ಸಮೀಕ್ಷೆ

ಕಳೆದ ನಾಲ್ಕು ದಿನಗಳಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಸುರಿಯುತ್ತಿದ್ದ ಮಳೆ ಭಾನುವಾರ ಕೊಂಚ ಬಿಡುವು ನೀಡಿತ್ತು. ಆದ್ದರಿಂದ ಪ್ರಧಾನಿ ಮೋದಿ, ವೈಮಾನಿಕ ಸಮೀಕ್ಷೆ ನಡೆಸಲು ಸಹಕಾರಿಯಾಯಿತು. ಮೊದಲಿಗೆ ಪ್ರವಾಹ ಪೀಡಿತ ಪ್ರದೇಶಗಳ ಸಮೀಕ್ಷೆ ನಡೆಸಿದ ಮೋದಿ, ನಂತರ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪರಿಹಾರ ಕಾರ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

1 ಸಾವಿರ ಕೋಟಿ ಅನುದಾನ ಬಿಡುಗಡೆ

1 ಸಾವಿರ ಕೋಟಿ ಅನುದಾನ ಬಿಡುಗಡೆ

ಪ್ರವಾಹ ಪೀಡಿತ ಕಣಿವೆ ರಾಜ್ಯಕ್ಕೆ ಕೇಂದ್ರ ಸರ್ಕಾರ 1 ಸಾವಿರ ಕೋಟಿ ಪರಿಹಾರ ಧನವನ್ನು ಬಿಡುಗಡೆ ಮಾಡಲಿದ್ದು, ಮೃತರ ಕುಟುಂಬಕ್ಕೆ ತಲಾ 1 ಲಕ್ಷ ಪರಿಹಾರ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ಹಣವನ್ನು ಪರಿಹಾರವಾಗಿ ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಯಾಂತ್ರಿಕ ಬೋಟ್ ತರಿಸಲಾಗುತ್ತದೆ

ಯಾಂತ್ರಿಕ ಬೋಟ್ ತರಿಸಲಾಗುತ್ತದೆ

ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯಗಳಿಂದ ಯಾಂತ್ರಿಕ ಬೋಟ್‌ಗಳನ್ನು ತರಿಸಿಕೊಳ್ಳಲಾಗುತ್ತಿದ್ದು, ವಿಶೇಷ ವಿಮಾನದಲ್ಲಿ ಈ ಬೋಟ್‌ಗಳು ಶ್ರೀನಗರಕ್ಕೆ ಬಂದು ತಲುಪಲಿವೆ. ಈ ಬೋಟ್‌ಗಳ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತದೆ ಎಂದು ಮೋದಿ ತಿಳಿಸಿದರು.

5 ಸಾವಿರ ಟೆಂಟ್ ನಿರ್ಮಿಸಲಾಗಿದೆ

5 ಸಾವಿರ ಟೆಂಟ್ ನಿರ್ಮಿಸಲಾಗಿದೆ

ಪ್ರವಾಹದಿಂದಾಗಿ ನಿರಾಶ್ರಿತರಾಗಿರುವ ಜನರಿಗಾಗಿ ತುರ್ತಾಗಿ 5 ಸಾವಿರ ಟೆಂಟ್‌ಗಳನ್ನು ನಿರ್ಮಿಸಲಾಗಿದ್ದು, 1 ಲಕ್ಷ ಹೊದಿಕೆಗಳನ್ನು ರವಾನಿಸಲಾಗುತ್ತದೆ. ಕಾಶ್ಮೀರದ ಜನತೆಯ ಬೆನ್ನಿಗೆ ತಾವಿದ್ದು, ಪರಿಸ್ಥಿತಿ ನಿಭಾಯಿಸಲು ತಾವು ಬದ್ಧ. ಕಣಿವೆ ರಾಜ್ಯ ಮತ್ತೆ ಮೊದಲಿನ ಸ್ಥಿತಿಗೆ ಬರಲು ತೆಗೆದುಕೊಳ್ಳಬೇಕಾದ ಎಲ್ಲ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಮೋದಿ ಹೇಳಿದರು.

ನೆರವು ನೀಡಲು ಭಾರತ ಸರ್ಕಾರ ಸಿದ್ಧವಿದೆ

ನೆರವು ನೀಡಲು ಭಾರತ ಸರ್ಕಾರ ಸಿದ್ಧವಿದೆ

ಕೇಂದ್ರ ಸರ್ಕಾರ ಪ್ರವಾಹ ಸಂತ್ರಸ್ತರ ವಿಚಾರದಲ್ಲಿ ಸರ್ವ ರೀತಿಯಲ್ಲೂ ರಾಜ್ಯ ಸರ್ಕಾರಕ್ಕೆ ನೆರವು ನೀಡಲಿದೆ ಎಂದು ಮೋದಿ ಹೇಳಿದರು. ವಿಶೇಷವಾಗಿ ಪ್ರವಾಹದಿಂದ ತತ್ತರಿಸಿರುವ ಪಾಕ್‌ ಆಕ್ರಮಿತ ಕಾಶ್ಮೀರಕ್ಕೂ ನೆರವು ನೀಡಲು ಭಾರತ ಸರ್ಕಾರ ಸಿದ್ಧವಿದೆ ಎಂದು ಮೋದಿ ತಿಳಿಸಿದರು.

ಶ್ರೀನಗರದಲ್ಲಿ ಅಪಾಯಕಾರಿ ಪರಿಸ್ಥಿತಿ

ಶ್ರೀನಗರದಲ್ಲಿ ಅಪಾಯಕಾರಿ ಪರಿಸ್ಥಿತಿ

ನಾನು ಪ್ರವಾಹ ಪೀಡಿದ ಪ್ರದೇಶಗಳ ವೈಮಾನಿಕಸಮೀಕ್ಷೆ ನಡೆಸಿ ಪರಿಸ್ಥಿತಿ ಅವಲೋಕನ ನಡೆಸಿದ್ದೇನೆ. ಶ್ರೀನಗರದಲ್ಲಿ ಅಪಾಯಕಾರಿ ಪರಿಸ್ಥಿತಿ ನಿರ್ಮಾಣವಾಗಿದೆ. ಸೇನಾ ಪಡೆಗಳು , ವಾಯುಪಡೆ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗಳು ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಮೋದಿ ಹೇಳಿದರು. ಚಿತ್ರ : ಭಾನುವಾರ ಕಂಡ ಬಂದ ಶ್ರೀನಗರದ ರಸ್ತೆ.

English summary
Prime Minister Narendra Modi today reviewed the flood situation in Jammu region at a high-level meeting attended by Chief Minister Omar Abdullah and top officials.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X