ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಖಾಡಕ್ಕಿಳಿದ ಘಟಾನುಘಟಿ ನಾಯಕರು

|
Google Oneindia Kannada News

ಬೆಂಗಳೂರು, ಏ.5 : ದೇಶದಲ್ಲಿ ಚುನಾವಣೆ ಕಾವು ಏರ ತೊಡಗಿದೆ. ಶನಿವಾರ ವಿವಿಧ ಕ್ಷೇತ್ರಗಳಿಂದ ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿ ಚುನಾವಣಾ ಕಣಕ್ಕೆ ಧುಮುಕಿದ್ದಾರೆ. ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಪಕ್ಷದ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರರೊಂದಿಗೆ ಬಂದು ನಾಮಪತ್ರ ಸಲ್ಲಿಸಿದರು.

ಶನಿವಾರ ವಿವಿಧ ಪಕ್ಷಗಳ ಹಿರಿಯ ನಾಯಕರು ನಾಮಪತ್ರ ಸಲ್ಲಿಸಿದ್ದಾರೆ. ಎಲ್.ಕೆ.ಅಡ್ವಾಣಿ, ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂದನ್ ಮಿಸ್ತ್ರಿ, ದಯಾನಿಧಿ ಮಾರನ್ ಶನಿವಾರ ತಮ್ಮ ಉಮೇದುವಾರಿಕೆ ಸಲ್ಲಿಸಿ, ಅಧಿಕೃತವಾಗಿ ಚುನಾವಣಾ ಅಖಾಡಕ್ಕೆ ಇಳಿಸಿದ್ದಾರೆ. ಚಿತ್ರಗಳಲ್ಲಿ ನಾಯಕರ ನಾಮಪತ್ರ [ಮೋದಿ ಮಾತನ್ನು ಕನ್ನಡದಲ್ಲಿ ಕೇಳಿರಿ]

ಒಟ್ಟಿಗೆ ಬಂದ ಅಡ್ವಾಣಿ, ಮೋದಿ

ಒಟ್ಟಿಗೆ ಬಂದ ಅಡ್ವಾಣಿ, ಮೋದಿ

ಶನಿವಾರ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಗುಜರಾತ್ ನ ಗಾಂಧಿನಗರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು. ಈ ಸಮಯದಲ್ಲಿ ಪಕ್ಷದ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ಅಡ್ವಾಣಿ ಜೊತೆ ಉಪಸ್ಥಿತರಿದ್ದರು.

ದಯಾನಿಧಿ ಮಾರನ್ ನಾಮಪತ್ರ

ದಯಾನಿಧಿ ಮಾರನ್ ನಾಮಪತ್ರ

ದೂರಸಂಪರ್ಕ ಖಾತೆ ಮಾಜಿ ಸಚಿವ ದಯಾನಿಧಿ ಮಾರನ್ ಶನಿವಾರ ಚೆನ್ನೈ ಸೆಂಟ್ರಲ್ ಲೋಕಸಭಾ ಕ್ಷೇತ್ರದಿಂದ ಡಿಎಂಕೆ ಅಭ್ಯರ್ಥಿಯಾಗಿ ತಮ್ಮ ನಾಮಪತ್ರವನ್ನು ಸಲ್ಲಿಸಿದರು.

ಮಿಸ್ತ್ರಿ ನಾಮಪತ್ರ

ಮಿಸ್ತ್ರಿ ನಾಮಪತ್ರ

ವಡೋಧರಾ ಕ್ಷೇತ್ರದಲ್ಲಿ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಎದುರು ಸ್ಪರ್ಧೆಗಿಳಿದಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂದನ್ ಮಿಸ್ತ್ರಿ ಶನಿವಾರ ತಮ್ಮ ಉಮೇದುವಾರಿಕೆ ಸಲ್ಲಿಸಿದರು.

ಅಖಾಡಕ್ಕಿಳಿದ ಬಿಜೆಪಿ ಅಧ್ಯಕ್ಷರು

ಅಖಾಡಕ್ಕಿಳಿದ ಬಿಜೆಪಿ ಅಧ್ಯಕ್ಷರು

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಶನಿವಾರ ಲಕ್ನೋ ಲೋಕಸಭಾ ಕ್ಷೇತ್ರದಿಂದ ತಮ್ಮ ನಾಮಪತ್ರ ಸಲ್ಲಿಸುವ ಮೂಲಕ ಅಧಿಕೃತವಾಗಿ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ.

ರೀತಾ ಬಹುಗುಣ ನಾಮಪತ್ರ

ರೀತಾ ಬಹುಗುಣ ನಾಮಪತ್ರ

ಲಕ್ನೋ ಕ್ಷೇತ್ರದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ರೀತಾ ಬಹುಗುಣ ಜೋಶಿ ಶನಿವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.

English summary
Elections 2014 : Dayanidhi Maran, Rajnath Singh, LK Advani, Madhusudan Mistry and other leaders field their nomination papers on Saturday, April 5.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X