ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅ.9: ದೇಶ, ವಿದೇಶ ಸುದ್ದಿಗಳ ಹೆಡ್ ಲೈನ್ಸ್

By Mahesh
|
Google Oneindia Kannada News

ಬೆಂಗಳೂರು, ಅ.9: ದೇಶ, ವಿದೇಶಗಳಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಅಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ದೇಶದ ಒಟ್ಟಾರೆ ಸುದ್ದಿಗಳ ಅಸಮಗ್ರ ಸಂಗ್ರಹ ನಿಮ್ಮ ಪರದೆ ಮೇಲೆ ಚೆಲ್ಲುವ ಪ್ರಯತ್ನ ಇದಾಗಿದೆ.

12.45: ಸಲ್ಮಾನ್ ಖಾನ್ ಅವರು ಆರೋಪಿಯಾಗಿರುವ ಹಿಟ್ ಅಂಡ್ ರನ್ ಕೇಸ್ ವಿಚಾರಣೆ ಬುಧವಾರ ಕೋರ್ಟಿನಲ್ಲಿ ನಡೆದಿದೆ. ವಿಚಾರಣೆ ವೇಳೆ ಸಾಕ್ಷಿದಾರನೊಬ್ಬ ಘಟನೆ ನಡೆದ ದಿನ ಖುದ್ದು ಸಲ್ಮಾನ್ ಖಾನ್ ಅವರೇ ವಾಹನ ಚಲಾಯಿಸುತ್ತಿದ್ದರು ಎಂದು ಹೇಳಿಕೆ ನೀಡಿದ್ದಾನೆ.

Salman Khan

12.20: ಮಧ್ಯಪ್ರದೇಶದಲ್ಲಿ ಮುಂಬರುವ ಐದು ವರ್ಷಗಳಲ್ಲಿ 20,000ಕೋಟಿ ರು ಹೂಡಿಕೆ ಮಾಡುವುದಾಗಿ ಅದಾನಿ ಸಮೂಹದ ಅಧ್ಯಕ್ಷ ಗೌತಮ್ ಅದಾನಿ ಘೋಷಿಸಿದ್ದಾರೆ.
12.00: ಇಂದೋರ್ ನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶವನ್ನು ಪ್ರಧಾನಿ ನರೇಂದ ಮೋದಿ ಅವರು ಬುಧವಾರ ಉದ್ಘಾಟಿಸಿದರು.

11.50: ಫೇಸ್ ಬುಕ್ ಸಹ ಸ್ಥಾಪಕ ಸಿಇಒ ಮಾರ್ಕ್ ಝುಕರ್ ಬರ್ಗ್ ಅವರ ಎರಡು ದಿನಗಳ ಭಾರತ ಪ್ರವಾಸ ಗುರುವಾರದಿಂದ ಆರಂಭಗೊಳ್ಳಲಿದೆ.
ಇಂಟರ್ನೆಟ್. ಅರ್ಗ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಪ್ರಧಾನಿ ಮೋದಿ ಅವರು ಭೇಟಿ ಮಾಡುವ ಸಾಧ್ಯತೆಯಿದೆ[ವಿವರ ಇಲ್ಲಿದೆ]

11.45: ಅ.12ರಂದು ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿಗೆ ಹುಡ್ ಹುಡ್ ಚಂಡಮಾರುತ ಅಪ್ಪಳಿಸಲಿದೆ. ಸದ್ಯಕ್ಕೆ ಉತ್ತರ ಅಂಡಮಾನ್ ಕಡಲಿನಲ್ಲಿ ವಾಯುಭಾರ ಕುಸಿತ ಹೆಚ್ಚಾಗುತ್ತಿದೆ.

Updates India, International News in Brief Oct

11.30: ಅಮೆರಿಕದ ಬೇಡಿಕೆಯಂತೆ, ಇರಾಕ್‌ನಲ್ಲಿರುವ ಇಸ್ಲಾಮಿಕ್ ಸ್ಟೇಟ್ (ಐಸಿಸ್) ಬಂಡುಕೋರ ಗುಂಪಿನ ಮೇಲೆ ವಾಯು ದಾಳಿ ನಡೆಸಲು ಕೆನಡದ ಸಂಸತ್ತು ಅಂಗೀಕಾರ ನೀಡಿದೆ. ಈ ನಡುವೆ ಆಸ್ಟ್ರೇಲಿಯಾ ಕೂಡಾ ಐಎಸ್ ಉಗ್ರರ ಮೇಲೆ ವೈಮಾನಿಕ ದಾಳಿ ನಡೆಸಿದೆ.

11.15: ಹಿರಿಯ ಪತ್ರಕರ್ತ ಎಂ.ವಿ ಕಾಮತ್ ಅವರು ಗುರುವಾರ ಬೆಳಗ್ಗೆ ವಿಧಿವಶರಾಗಿದ್ದಾರೆ.[ವಿವರ ಇಲ್ಲಿ ಓದಿ]

10.50: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಹೀನಾಯ ಸೋಲು ಕಂಡಿದೆ. [ಸ್ಕೋರ್ ಕಾರ್ಡ್ ನೋಡಿ]

English summary
Top News of the today :Salman Khan hit-and-run case: Witness testifies against actor, says Salman was driving the car and many more news from across the globe.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X