ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆ.14: ದೇಶ, ವಿದೇಶಗಳ ಹೆಡ್ ಲೈನ್ ನ್ಯೂಸ್

By Mahesh
|
Google Oneindia Kannada News

ಬೆಂಗಳೂರು, ಆ.14: ದೇಶ, ವಿದೇಶಗಳಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಅಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ದೇಶದ ಒಟ್ಟಾರೆ ಸುದ್ದಿಗಳ ಅಸಮಗ್ರ ಸಂಗ್ರಹ ನಿಮ್ಮ ಪರದೆ ಮೇಲೆ ಚೆಲ್ಲುವ ಪ್ರಯತ್ನ ಇದಾಗಿದೆ.

4.05: ಅಯೋಧ್ಯಾಧಿಪತಿ ಶ್ರೀರಾಮಚಂದ್ರ ನಿರ್ಮಿಸಿದ್ದಾನೆ ಎನ್ನಲಾಗಿರುವ ರಾಮಸೇತುವನ್ನು ಮೋದಿ ಸರ್ಕಾರ ಧ್ವಂಸಗೊಳಿಸುವುದಿಲ್ಲ. ಸಮಸ್ಯೆ ಪರಿಹಾರಕ್ಕೆ ಇತರೆ ಮಾರ್ಗಗಳನ್ನು ಕಂಡುಕೊಳ್ಳಲಾಗುವುದು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.

9.15: ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಪ್ರಥಮ ಬಾರಿಗೆ ಭಾಷಣ ಮಾಡುವಾಗ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಗೈರು ಹಾಜರಾಗುವುದು ದೃಢಪಟ್ಟಿದೆ.
9.10: ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ಸೇರಿಸಲಾಗಿದೆ. ಕಿಬ್ಬೊಟ್ಟೆ ನೋವಿನಿಂದ ಬಳಲುತ್ತಿರುವ 63 ವರ್ಷದ ಸಿಂಗ್ ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.
8.55 : ದೆಹಲಿ ಭೋಪಾಲ್ ಜೆಟ್ ಏರ್ ವೇಸ್ ವಿಮಾನದ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

Updates India, International News in Brief Aug 14

8.45: ಬ್ರೆಜಿಲ್ಲಿನ ಅಧ್ಯಕ್ಷ ಪದವಿಗೆ ಸ್ಪರ್ಧಿಸಿದ್ದ ಎಡುರ್ಡೋ ಕಾಂಪೋಸ್ ಅವರು ವಿಮಾನ ದುರಂತದಲ್ಲಿ ಸಾವನ್ನಪ್ಪಿದ್ದಾರೆ.
8.15: ಪಾಕಿಸ್ತಾನ ಮತ್ತೊಮ್ಮೆ ಕದನ ವಿರಾಮ ಉಲ್ಲಂಘಿಸಿದ್ದು, ಪೂಂಚ್ ನಲ್ಲಿ ದಾಳಿ ನಡೆಸಿದೆ. ಕಳೆದ ನಾಲ್ಕು ದಿನಗಳಲ್ಲಿ ಪಾಕಿಸ್ತಾನ 77ನೇ ಬಾರಿ ನಿಯಮ ಉಲ್ಲಂಘಿಸಿದೆ.
8.10: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಹರ್ಯಾಣದಲ್ಲಿ ಚುನಾವಣೆ ಪ್ರಚಾರ ಆರಂಭಿಸಿದ್ದಾರೆ.
8.00: ಪಾಕಿಸ್ತಾನ ಆ.14ರಂದು ಸ್ವಾತಂತ್ರೋತ್ಸವ ದಿನಾಚರಣೆ ಸಂಭ್ರಮದಲ್ಲಿದೆ.
English summary
Top news in brief for the day: Union Home Minister Rajnath Singh was admitted in the All India Institute of Medical Sciences (AIIMS) on Wednesday night with complaints of pain in his lower abdomen, sources close to him said, get all the news updates here and many more news from across the globe.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X