ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜು.6 : ದೇಶ, ವಿದೇಶಗಳ ಹೆಡ್ ಲೈನ್ ನ್ಯೂಸ್

By Mahesh
|
Google Oneindia Kannada News

ಬೆಂಗಳೂರು, ಜು.6: ದೇಶ, ವಿದೇಶಗಳಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಅಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ದೇಶದ ಒಟ್ಟಾರೆ ಸುದ್ದಿಗಳ ಅಸಮಗ್ರ ಸಂಗ್ರಹ ನಿಮ್ಮ ಪರದೆ ಮೇಲೆ ಚೆಲ್ಲುವ ಪ್ರಯತ್ನ ಇದಾಗಿದೆ.

15.30: ಮುಂದಿನ ಎರಡು ದಿನಗಳಲ್ಲಿ ಇರಾಕ್‌ನಿಂದ 600 ಭಾರತೀಯರು ದೇಶಕ್ಕೆ ವಾಪಸ್ ಆಗಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.
2.45: ಸೋಮವಾರದ ಹೊತ್ತಿಗೆ ಸುಮಾರು 1,200 ಭಾರತೀಯರು ಸರ್ಕಾರದ ವೆಚ್ಚದಲ್ಲಿ ದೇಶಕ್ಕೆ ವಾಪಸ್ ಆಗುತ್ತಾರೆ ಎನ್ನಲಾಗಿದೆ.

Updates India, International News in Brief on July 6

10.20: ಪ್ರಾಕೃತಿಕ ವಿಕೋಪಕ್ಕೆ ತುತ್ತಾಗಿ ತತ್ತರಿಸಿರುವ ಮಧ್ಯಪ್ರದೇಶದ ಗುಣ ಜಿಲ್ಲೆಯ ರೈತರಿಗೆ ಸೂಕ್ತ ಪರಿಹಾರ ದೊರಕದ ಹಿನ್ನೆಲೆಯಲ್ಲಿ ಜು.7ರಿಂದ ಒಂದು ವಾರಗಳ ಕಾಲ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಘೋಷಿಸಿದ್ದಾರೆ.
10.15: ಲೋಕಸಭೆಯಲ್ಲಿ ಪ್ರತಿಪಕ್ಷ ಸ್ಥಾನಕ್ಕಾಗಿ ತಿಕ್ಕಾಟ ಮುಂದುವರೆದಿದ್ದು, ಒಂದು ವೇಳೆ ಪ್ರತಿಪಕ್ಷ ಸ್ಥಾನ ಕೈ ತಪ್ಪಿದರೆ ನ್ಯಾಯಾಲಯದ ಮೆಟ್ಟಿಲೇರಲು ಕಾಂಗ್ರೆಸ್ ಚಿಂತನೆ ನಡೆಸಿದೆ.

Digvijay Singh

10.00 : ಫೀಫಾ ವಿಶ್ವಕಪ್ ಈಗ ಸೆಮಿಫೈನಲ್ ಹಂತ ಮುಟ್ಟಿದೆ. ಬ್ರೆಜಿಲ್ vs ಜರ್ಮನಿ ಹಾಗೂ ಅರ್ಜೆಂಟಿನಾ vs ಹಾಲೆಂಡ್ ಉಪಾಂತ್ಯ ಸೇರಿದ ತಂಡಗಳಾಗಿವೆ.
9.45 : ಕರ್ನಾಟಕ ಸೇರಿದಂತೆ ಏಳು ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು ಮೋದಿ ಸರ್ಕಾರ ಭಾನುವಾರ ಘೋಷಿಸುವ ಸಾಧ್ಯತೆಯಿದೆ.
9.30 : ಸೋಮವಾರ(ಜು.7)ದಿಂದ ಸಂಸತ್ತಿನಲ್ಲಿ ಬಜೆಟ್ ಅಧಿವೇಶನ ಆರಂಭಗೊಳ್ಳಲಿದೆ. ಜು.8 ರಂದು ಕನ್ನಡಿಗ ಸದಾನಂದ ಗೌಡ ಅವರು ರೈಲ್ವೆ ಬಜೆಟ್ ಮಂಡಿಸಲಿದ್ದಾರೆ. ಜು.10 ರಂದು ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಕೇಂದ್ರ ಹಣಕಾಸು ಆಯವ್ಯಯ ಮಂಡನೆ ಮಾಡಲಿದ್ದಾರೆ.
English summary
Top news in brief for the day: 200 more Indians returned to the country from violence-hit Iraq. More than 1,000 Indians likely to return to India by Monday(July 7) and many more news from the around the globe on July 6.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X