ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜೂ.2: ದೇಶ, ವಿದೇಶಗಳ ಹೆಡ್ ಲೈನ್ ನ್ಯೂಸ್

By Mahesh
|
Google Oneindia Kannada News

ಬೆಂಗಳೂರು, ಜೂ.2: ದೇಶ, ವಿದೇಶಗಳಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಆಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ದೇಶದ ಒಟ್ಟಾರೆ ಸುದ್ದಿಗಳ ಅಸಮಗ್ರ ಸಂಗ್ರಹ ನಿಮ್ಮ ಪರದೆ ಮೇಲೆ ಚೆಲ್ಲುವ ಪ್ರಯತ್ನ ಇದಾಗಿದೆ.

10.55: ತೆಲಂಗಾಣದ ನೂತನ ಮುಖ್ಯಮಂತ್ರಿ ಕೆ ಚಂದ್ರಶೇಖರರಾವ್ ಅವರಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ ಅವರು ಅಭಿವೃದ್ಧಿಯ ಪಯಣ ನಿಮ್ಮದಾಗಲಿ ಎಂದು ಟ್ವೀಟ್ ಮಾಡಿದ್ದಾರೆ.
10.45 : ಗೃಹಸಚಿವ ರಾಜನಾಥ್ ಸಿಂಗ್ ಅವರು ಕೂಡಾ ಕೆ. ಚಂದ್ರಶೇಖರರಾವ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

News in brief on June 2

10.30 : ಇಎಸ್ಎಲ್ ನರಸಿಂಹನ್ ಅವರು ತೆಲಂಗಾಣದ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಚಂದ್ರಶೇಖರ್ ಅವರು ತೆಲಂಗಾಣದ ಪ್ರಮುಖ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

10.15: ಕೆಸಿಆರ್ ಪುತ್ರ ಕೆಟಿ ರಾಮರಾವ್ ಅವರು ಕೆಸಿಆರ್ ಸಂಪುಟ ಸೇರ್ಪಡೆಗೊಂಡಿದ್ದಾರೆ.
10.00 : ಬಿಜೆಪಿ ನಾಯಕ ಮಾಜಿ ಸಚಿವ ತಪನ್ ಸಿಕ್ದರ್ ಅವರು ನಿಧನರಾಗಿದ್ದಾರೆ.

9.45 : ಉತ್ತರಪ್ರದೇಶದಲ್ಲಿ ಹದಗೆಟ್ಟ ಕಾನೂನು ಮತ್ತು ಸುವ್ಯವಸ್ಥೆ ಸರಿಪಡಿಸುವಂತೆ ಸಿಎಂ ಅಖಿಲೇಶ್ ಯಾದವ್ ಅವರ ಕಚೇರಿಗೆ ಬಿಜೆಪಿ ಮುತ್ತಿಗೆ ಹಾಕಲಿದೆ.
9.30 : ಒಡಿಶಾ ಸಿಎಂ ನವೀನ್ ಪಟ್ನಾಯಕ್ ಅವರು ಪ್ರಧಾನಿ ಮೋದಿ ಅವರನ್ನು ಸೋಮವಾರ ಭೇಟಿ ಮಾಡಲಿದ್ದಾರೆ.
9.15: ಬುಡಕಟ್ಟು ಜನಾಂಗದ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ.
English summary
Top news in brief for the day: Prime Minister Narendra Modi, Home Minister Rajnath Singh congratulated K Chandrasekhar Rao. Here are the news in brief for the day from across the globe.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X