ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿದ್ದರಾಮಯ್ಯಗೆ ತಪ್ಪದ ಅರ್ಕಾವತಿ ಬಡಾವಣೆ ಕಾಟ

|
Google Oneindia Kannada News

ಬೆಂಗಳೂರು, ಸೆ.1 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಹೋರಾಟವನ್ನು ಮುಂದುವರೆಸಲು ಕರ್ನಾಟಕ ಬಿಜೆಪಿ ಘಟಕ ತೀರ್ಮಾನ ಕೈಗೊಂಡಿದೆ. ಕೋರ್ ಕಮಿಟಿ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ.

ಸೋಮವಾರ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ ನಡೆಯಿತು. ಸಭೆಯ ನಂತರ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ, ಅರ್ಕಾವತಿ ಡಿನೋಟಿಫಿಕೇಷನ್ ವಿರುದ್ಧದ ಹೋರಾಟವನ್ನು ಮುಂದುವರೆಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಹೇಳಿದರು.

BJP

ಬಡಾವಣೆಯ ಡಿನೋಟಿಫಿಕೇಷನ್ ಪ್ರಕರಣದ ವಿರುದ್ಧ ಕಾನೂನು ಹೋರಾಟ ನಡೆಸಲು ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಿಸಲು ರಾಜ್ಯಪಾಲರ ಅನುಮತಿ ಕೋರಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಜೋಶಿ ತಿಳಿಸಿದರು. [ಅರ್ಕಾವತಿ ಬಡಾವಣೆ ವಿವಾದ ಏಕೆ? ಏನು?]

ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜಕೀಯ ಮತ್ತು ಕಾನೂನು ಹೋರಾಟವನ್ನು ಮುಂದುವರೆಸುತ್ತೇವೆ. ಅರ್ಕಾವತಿ ಡಿನೋಟಿಫಿಕೇಷನ್ ಬಗ್ಗೆ ವರದಿ ತಯಾರಿಸಲು ಶಾಸಕ ಸುರೇಶ್ ಕುಮಾರ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿತ್ತು. ಸಮಿತಿಯ ವರದಿ ನೀಡಿದ್ದು, ಕಾನೂನು ಹೋರಾಟಕ್ಕೆ ಬೇಕಾದ ಅಗತ್ಯ ದಾಖಲೆಗಳನ್ನು ಸಂಗ್ರಹಿಸಲಾಗುತ್ತದೆ ಎಂದರು. [ಅರ್ಕಾವತಿ ಹೋರಾಟ ಮುಂದುವರೆಸಲಿದೆ ಬಿಜೆಪಿ]

ಉಳಿದಂತೆ ಬಿಬಿಎಂಪಿ ಮೇಯರ್ ಅವಧಿ ಮುಕ್ತಾಯಗೊಂಡಿದ್ದು, ಹೊಸ ಮೇಯರ್ ಆಯ್ಕೆ ಪ್ರಕ್ರಿಯೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಮೇಯರ್, ಉಪಮೇಯರ್ ಹುದ್ದೆಗೆ ಅಭ್ಯರ್ಥಿಗಳಾಗಿ ಯಾರನ್ನು? ಆಯ್ಕೆ ಮಾಡಬೇಕೆಂಬ ಬಗ್ಗೆಯೂ ಚರ್ಚೆ ನಡೆಯಿತು. ಆದರೆ, ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಂಡಿಲ್ಲ.

ಕೋರ್ ಕಮಿಟಿ ಸಭೆಯಲ್ಲಿ ಕೇಂದ್ರ ಸಚಿವರಾದ ಅನಂತ್‍ ಕುಮಾರ್, ಡಿ.ವಿ.ಸದಾನಂದಗೌಡ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಮಾಜಿ ಉಪ ಮುಖ್ಯಮಂತ್ರಿಗಳಾದ ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್ ಮುಂತಾದವರು ಪಾಲ್ಗೊಂಡಿದ್ದರು.

English summary
Karnataka BJP plant t move court in the irregularities in Arkavathy Layout land De-notification. At a meeting of the Core Committee in Bangalore on Monday decided to move court.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X