ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳು ಅಂತಿಮ

|
Google Oneindia Kannada News

ಬೆಂಗಳೂರು, ಮೇ.13 : ಲೋಕಸಭೆ ಚುನಾವಣೆ ಫಲಿತಾಂಶ ಹೊರಬರುವ ಮುನ್ನವೇ ರಾಜ್ಯ ಬಿಜೆಪಿ ವಿಧಾನಪರಿಷತ್ ಚುನಾವಣೆ ಲೆಕ್ಕಾಚಾರ ಆರಂಭಿಸಿದೆ. ಸೋಮವಾರ ನಡೆದ ಕೋರ್ ಕಮಿಟಿ ಸಭೆಯಲ್ಲಿ ಪರಿಚತ್ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದ್ದು, ಹೈಕಮಾಂಡ್ ನಾಯಕರಿಗೆ ಕಳುಹಿಸಿಕೊಡಲಾಗಿದೆ.

ಸೋಮವಾರ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಿತು. ಸಭೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತ್ ಕುಮಾರ್, ಮಾಜಿ ಸಿಎಂ ಡಿವಿ ಸದಾನಂದ ಗೌಡ, ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ, ಆರ್ ಅಶೋಕ್ ಮುಂತಾದವರು ಪಾಲ್ಗೊಂಡಿದ್ದರು.

Prahlad Joshi

ಚುನಾವಣೆ ಮುಗಿದ ಬಳಿಕ ಮೊದಲ ಬಾರಿಗೆ ಒಟ್ಟಾಗಿ ಸೇರಿದ ನಾಯಕರು ಚುನಾವಣೆ ಫಲಿತಾಂಶ, ವಿಧಾನಪರಿಷತ್ ಚುನಾವಣೆ ಮುಂತಾದವ ವಿಚಾರಗಳ ಕುರಿತು ಚರ್ಚೆ ನಡೆಸಿದರು. ಜೂನ್ ನಲ್ಲಿ ನಡೆಯಲಿರುವ ಪರಿಷತ್ ಚುನಾವಣೆಗೆ ಮೂವರು ಅಭ್ಯರ್ಥಿಗಳ ಹೆಸರುಗಳನ್ನು ಸಭೆಯಲ್ಲಿ ಅಂತಿಮಗೊಳಿಸಲಾಯಿತು. [ಸರ್ಕಾರಕ್ಕೆ ಒಂದು ವರ್ಷ, ಪ್ರತಿಪಕ್ಷ ಹೇಳಿದ್ದೇನು?]

ಸಭೆಯ ಬಳಿಕ ಮಾತನಾಡಿದ ಪ್ರಹ್ಲಾದ್ ಜೋಶಿ, ಇಂದಿನ ಸಭೆಯಲ್ಲಿ ಗುಲ್ಬರ್ಗ ಕ್ಷೇತ್ರದಿಂದ ಶಶೀಲ್ ನಮೋಶಿ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದ್ದು, ದಾವಣಗೆರೆ ಆಗ್ನೇಯ ಕ್ಷೇತ್ರದಿಂದ ಶಿವಯೋಗಿ ಸ್ವಾಮಿ ಅವರನ್ನು ಅಭ್ಯರ್ಥಿ ಎಂದು ನಿರ್ಧರಿಸಲಾಗಿದೆ. ಈ ಹೆಸರುಗಳನ್ನು ಹೈಕಮಾಂಡ್ ನಾಯಕರಿಗೆ ಕಳುಹಿಸಲಾಗುವುದು ಅವರು ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಿದರು. [ಜೂನ್ ನಲ್ಲಿ ಪರಿಷತ್ ಚುನಾವಣೆ]

ಸಿದ್ದರಾಮಯ್ಯ ಸಾಧನೆ ಏನು : ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಒಂದು ವರ್ಷ ಪೂರೈಸಿದ ಬಗ್ಗೆ ಮಾತನಾಡಿದ ಪ್ರಹ್ಲಾದ್ ಜೋಶಿ, ಬೆಲೆ ಏರಿಕೆ ಹಾಗೂ ಮೇಲಿಂದ ಮೇಲೆ ತಪ್ಪು ನಿರ್ಧಾರಗಳನ್ನು ತೆಗೆದುಕೊಂಡು ಜನರಿಗೆ ತೊಂದರೆ ಕೊಟ್ಟಿದ್ದೇ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಾಧನೆ ಎಂದು ಆರೋಪಿಸಿದರು.[ಸಿದ್ದರಾಮಯ್ಯ ಸರ್ಕಾರದ 10 ವಿವಾದಗಳು]

ರಾಜ್ಯದಲ್ಲಿ ಹದಗೆಟ್ಟ ರಸ್ತೆಗಳನ್ನು ಅಭಿವೃದ್ಧಿ ಮಾಡುವ ಬದಲು ಲೋಕೋಪಯೋಗಿ ಸಚಿವರು, ತಮಗೆ ನೀಡಿದ ಬಂಗಲೆಯನ್ನು ನವೀಕರಣ ಮಾಡಿಸಿ ಸರ್ಕಾರದ ಹಣವನ್ನು ಪೋಲು ಮಾಡಿದ್ದಾರೆ. ಬಸ್ ಪ್ರಯಾಣ ದರ, ಟೋಲ್ ದರ, ವಿದ್ಯುತ್ ದರಗಳನ್ನು ಏರಿಕೆ ಮಾಡಿ ಜನರನ್ನು ಸಂಕಷ್ಟಕ್ಕೆ ದೂಡಿದ್ದೇ ಸರ್ಕಾರದ ಸಾಧನೆ ಎಂದು ದೂರಿದರು.

English summary
Karnataka BJP finalized three names for legislative council election said, BJP state president Prahlad Joshi. Council election will be held in June month.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X