ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ-ಜೆಡಿಎಸ್ ದೋಸ್ತಿ, ಸಭಾಪತಿ ಸ್ಥಾನ ಭದ್ರ

|
Google Oneindia Kannada News

ಬೆಂಗಳೂರು, ಜು. 9 : ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ವಿಧಾನಪರಿಷತ್ತಿನಲ್ಲಿ ಹೊಂದಾಣಿಕೆ ಮಾಡಿಕೊಂಡಿದ್ದು ಪರಿಷತ್ ಸಭಾಪತಿ ಸ್ಥಾನ ಬಿಜೆಪಿ ಪಾಲಿಗೆ ಭದ್ರವಾಗಿದೆ. ಉಪಸಭಾಪತಿಯಾಗಿ ಜೆಡಿಎಸ್ ಪಕ್ಷದ ಪುಟ್ಟಣ್ಣ ಅವರು ನೇಮಕಗೊಳ್ಳವುದು ಖಚಿತವಾಗಿದೆ. ಇದರಿಂದಾಗಿ ಸಭಾಪತಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಕಾಂಗ್ರೆಸ್ ಪಕ್ಷಕ್ಕೆ ನಿರಾಸೆಯಾಗಿದೆ.

ಕಾಂಗ್ರೆಸ್ ಪಕ್ಷ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು, ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾಗಿತ್ತು. ಈ ಕುರಿತು ಜೆಡಿಎಸ್ ಬೆಂಬಲವನ್ನು ಕೇಳಿತ್ತು. ಕಾಂಗ್ರೆಸ್‌ ಜತೆ ನಿಲ್ಲಬೇಕೋ ಅಥವಾ ಬಿಜೆಪಿ ಜತೆ ನಿಲ್ಲಬೇಕೋ ಎಂಬ ಬಗ್ಗೆ ಎಚ್.ಡಿ.ದೇವೇಗೌಡರು ಅಂತಿಮ ನಿರ್ಧಾರ ತೆಗೆದುಕೊಂಡಿದ್ದು, ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರ ಸ್ಥಾನ ಭದ್ರವಾಗಿದೆ.

D.H.Shankaramurthy

ಬುಧವಾರ ವಿಧಾನಸೌಧದಲ್ಲಿ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಜೊತೆ ಮಾತುಕತೆ ನಡೆಸಿದ್ದು, ವಿಧಾನಪರಿಷತ್ತಿನಲ್ಲಿ ಬಿಜೆಪಿ ಬೆಂಬಲಿಸಲು ಜೆಡಿಎಸ್ ಒಪ್ಪಿಗೆ ನೀಡಿದೆ. [ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಮೇಲುಗೈ]

ಆದ್ದರಿಂದ ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಮಂಡಿಸಿದರೆ ಜೆಡಿಎಸ್ ಬಿಜೆಪಿಗೆ ಬೆಂಬಲ ನೀಡಿಲಿದ್ದು, ನಿರ್ಣಯ ಅಂಗೀಕಾರವಾಗುವುದಿಲ್ಲ. ಬಿಜೆಪಿಗೆ ಜೆಡಿಎಸ್ ಬೆಂಬಲ ನೀಡುವುದರಿಂದ ಅವರಿಗೆ ಉಪ ಸಭಾಪತಿ ಸ್ಥಾನವನ್ನು ಬಿಟ್ಟುಕೊಡಲು ಬಿಜೆಪಿ ಮುಂದಾಗಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಪುಟ್ಟಣ್ಣ ಅವರು ವಿಧಾನಪರಿಷತ್ ಉಪ ಸಭಾಪತಿಯಾಗಲಿದ್ದಾರೆ. [ರಾಷ್ಟ್ರಪತಿ ಭವನ ತಲುಪಿದ ಎಚ್ಡಿಕೆ ಸಿಡಿ ವಿವಾದ]

ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಜೆಡಿಎಸ್ ಪಕ್ಷದ ಬೆಂಬಲ ಕೇಳಿದ್ದರು ಎಂದು ತಿಳಿದುಬಂದಿದೆ. ಅವಿಶ್ವಾಸ ನಿರ್ಣಯ ಮಂಡಿಸಿದಾಗ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದರೆ, ಉಪಸಭಾಪತಿ ಸ್ಥಾನ ಬಿಟ್ಟುಕೊಡುವುದಾಗಿ ಭರವಸೆ ನೀಡಿದ್ದರು. ಆದರೆ, ವಿಧಾನಪರಿಷತ್‌ ಸಭಾಪತಿ ಬದಲಾವಣೆ ವಿಚಾರದಲ್ಲಿ ಯಾರಿಗೆ ಬೆಂಬಲಿಸಬೇಕು ಎಂಬ ಬಗ್ಗೆ ನಿರ್ಧಾರ ಕೈಗೊಳ್ಳುವ ಅಧಿಕಾರವನ್ನು ಜೆಡಿಎಸ್‌ ಶಾಸಕರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡರಿಗೆ ನೀಡಿದ್ದರು.

ಸದ್ಯ ಜೆಡಿಎಸ್ ಮತ್ತು ಬಿಜೆಪಿ ಹೊಂದಾಣಿಕೆ ಮಾಡಿಕೊಳ್ಳುವುದರಿಂದ ಡಿ.ಎಚ್.ಶಂಕರಮೂರ್ತಿ ಅವರು ಸಭಾಪತಿಯಾಗಿ ಮುಂದುವರೆಯಲಿದ್ದು, ಉಪ ಸಭಾಪತಿ ಸ್ಥಾನ ಜೆಡಿಎಸ್ ಪಾಲಾಗಲಿದೆ. ಆದ್ದರಿಂದ ಹಾಲಿ ಉಪಸಭಾಪತಿಯಾಗಿರುವ ವಿಮಲಾಗೌಡ ಅವರು ರಾಜೀನಾಮೆ ನೀಡಲಿದ್ದಾರೆ.

ವಿಧಾನಪರಿಷತ್ತಿನಲ್ಲಿ ಬಿಜೆಪಿ 31, ಕಾಂಗ್ರೆಸ್​ 28, ಜೆಡಿಎಸ್​ 12 ಮತ್ತು ಇತರ 4 ಸದಸ್ಯರಿದ್ದಾರೆ. ಆದ್ದರಿಂದ ಕಾಂಗ್ರೆಸ್ ಪಕ್ಷ ಜೆಡಿಎಸ್ ಜೊತೆ ಸೇರಿ ಸಭಾಪತಿ ಸ್ಥಾನಗಳಿಸಲು ಕಸರತ್ತು ನಡೆಸಿತ್ತು.

English summary
The BJP and JD(S) have decided to continue their alliance in Legislative Council. So JDS will not supporting Congress move to unseat Legislative Council Chairman D.H.Shankaramurthy. By this alliance JDS MLC Puttanna likely to be elected as Vice Chairman.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X