ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪರಿಷತ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ದೋಸ್ತಿ

|
Google Oneindia Kannada News

ಬೆಂಗಳೂರು, ಜೂ. 4 : ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿವೆ. ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಡಿ.ಯು.ಮಲ್ಲಿಕಾರ್ಜುನ್ ಅವರಿಗೆ ಜೆಡಿಎಸ್ ಬೆಂಬಲ ನೀಡುತ್ತಿದೆ. ಇದರಿಂದಾಗಿ ಬಿಜೆಪಿ ಪರಿಷತ್ ಚುನಾವಣೆಯಲ್ಲಿ ಎರಡು ಸ್ಥಾನದಲ್ಲಿ ಜಯಗಳಿಸುವ ಸಾಧ್ಯತೆ ಇದೆ.

ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ಆಯ್ಕೆಯಾಗಿದ್ದ ಬಿಜೆಪಿಯ ಡಿ.ವಿ.ಸದಾನಂದಗೌಡ, ಭಾರತಿಶೆಟ್ಟಿ, ಸಿದ್ದರಾಜು, ಮೋನಪ್ಪ ಭಂಡಾರಿ, ಜೆಡಿಎಸ್‌ ನ ಎಂ.ಸಿ.ನಾಣಯ್ಯ, ಕೆ.ವಿ.ನಾರಾಯಣಸ್ವಾಮಿ ಹಾಗೂ ಕಾಂಗ್ರೆಸ್‌ ನ ಎಂ.ವಿ.ರಾಜಶೇಖರನ್‌ ಅವರ ಅವಧಿ ಜೂ. 30ಕ್ಕೆ ಕೊನೆಗೊಳ್ಳಲಿದೆ ಇವರಿಂದ ತೆರವಾಗುವ ಸ್ಥಾನಗಳಿಗೆ ಜೂನ್ 19ರಂದು ಚುನಾವಣೆ ನಡೆಯಲಿದೆ.

BJP, JDS

ವಿಧಾನಸಭೆ ಬಲಾಬಲದ ಪ್ರಕಾರ ಕಾಂಗ್ರೆಸ್ ನಾಲ್ಕು ಸ್ಥಾನಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ 1 ಸ್ಥಾನಗಳಲ್ಲಿ ಗೆಲುವು ಸಾಧಿಸಬಹುದಾಗಿದೆ. ಬಾಕಿ ಉಳಿದಿರುವ ಒಂದು ಸ್ಥಾನಕ್ಕಾಗಿ ಜೆಡಿಎಸ್ ಮತ್ತು ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿವೆ. ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಈ ಹೊಂದಾಣಿಕೆಗೆ ಒಪ್ಪಿಗೆ ನೀಡಿದ್ದಾರೆ. [ಈಶ್ವರಪ್ಪ ಪರಿಷತ್ ಗೆ]

ಪರಿಷತ್ತಿನ ಒಂದು ಸ್ಥಾನಕ್ಕೆ ಬಿಜೆಪಿಯಿಂದ ಕೆ.ಎಸ್.ಈಶ್ವರಪ್ಪ ಸ್ಪರ್ಧಿಸುತ್ತಿದ್ದು, ಜೆಡಿಎಸ್ ಮತ್ತು ಬಿಜೆಪಿ ಅಭ್ಯರ್ಥಿಯಾಗಿ ಡಿ.ಯು.ಮಲ್ಲಿಕಾರ್ಜುನ್ ಕಣಕ್ಕಿಳಿಯುತ್ತಿದ್ದಾರೆ. ಮೊದಲು ಮುರುಗೇಶ್ ನಿರಾಣಿ ಸ್ಪರ್ಧೆ ಮಾಡುವುದಾದರೆ ಬೆಂಬಲ ನೀಡುತ್ತೇವೆ ಎಂದು ಜೆಡಿಎಸ್ ಹೇಳಿತ್ತು. ಆದರೆ, ಬಿಜೆಪಿ ನಾಯಕರು ಇದಕ್ಕೆ ಸಹಮತ ಸೂಚಿಸಿರಲಿಲ್ಲ. [ಜೂನ್ 19ರಂದು ಪರಿಷತ್ ಚುನಾವಣೆ]

ಆದ್ದರಿಂದ ಎಚ್.ಡಿ.ಕುಮಾರಸ್ವಾಮಿ ಮತ್ತು ಆರ್.ಅಶೋಕ್ ಅವರಿಗೆ ಆಪ್ತರಾಗಿರುವ ಉದ್ಯಮಿ ಮಲ್ಲಿಕಾರ್ಜುನ್ ಅವರನ್ನು ಬಿಜೆಪಿಯ 2ನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗುತ್ತಿದೆ. ಶಾಂತಿನಗರ ಕ್ಷೇತ್ರದಿಂದ 2008 ಚುನಾವಣೆಯಲ್ಲಿ ಮಲ್ಲಿಕಾರ್ಜುನ್ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಜೆಡಿಎಸ್ ಮತ್ತು ಬಿಪಿಗೆ ಆಪ್ತರಾಗಿರುವ ಇವರನ್ನು ಸದ್ಯ ಪರಿಷತ್ ಚುನಾವಣೆ ಕಣಕ್ಕೆ ಇಳಿಸಲಾಗುತ್ತಿದೆ.

English summary
The Bharatiya Janata Party and the Janata Dal (Secular) joins hands together for Legislative council polls. JDS will support BJP candidate D.U.Mallikarjun in polls.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X