ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಪ ಚುನಾವಣೆ : ಗುರುವಾರ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

|
Google Oneindia Kannada News

ಬೆಂಗಳೂರು, ಜು. 30 : ಮೂರು ಕ್ಷೇತ್ರಗಳ ಉಪ ಚುನಾವಣೆಗಾಗಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶಿಕಾರಿಪುರದಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಶಾಂತವೀರಪ್ಪ ಗೌಡ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮೂರು ಕ್ಷೇತ್ರಗಳ ಉಪ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ಹೈಕಮಾಂಡ್ ನಾಯಕರಿಗೆ ಪಟ್ಟಿಯನ್ನು ಕಳುಹಿಸಿಕೊಟ್ಟಿದ್ದೇವೆ ಎಂದು ಹೇಳಿದರು.

Siddaramaiah

ಗುರುವಾರ ಹೈಕಮಾಂಡ್ ನಾಯಕರು ಪಟ್ಟಿಯನ್ನು ಅಂತಿಮಗೊಳಿಸಲಿದ್ದು, ಸಂಜೆ ಅಭ್ಯರ್ಥಿಗಳನ್ನು ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು. ಕೆಪಿಸಿಸಿ ಮೂರು ಕ್ಷೇತ್ರಗಳಿಗೂ ವೀಕ್ಷಕರನ್ನು ಕಳುಹಿಸಿ, ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದು, ಅದನ್ನು ವರಿಷ್ಠರಿಗೆ ರವಾನಿಸಲಾಗಿದೆ ಎಂದರು. [ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳು ಅಂತಿಮ]

ನಾಮಪತ್ರ ಸಲ್ಲಿಕೆ : ಶಿಕಾರಿಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಗಾಗಿ ಬಿ.ಸಿ.ಪಾಟೀಲ್ ಮತ್ತು ಕಳೆದ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಅನುಭವಿಸಿದ್ದ ಎಚ್.ಎಸ್.ಶಾಂತವೀರಪ್ಪ ಗೌಡ ನಡುವೆ ಪೈಪೋಟಿ ನಡೆದಿತ್ತು. ಬುಧವಾರ ಶಾಂತ ವೀರಪ್ಪ ಗೌಡ ಅವರು ಬಿ ಫಾರಂ ಇಲ್ಲದೆ ನಾಮಪತ್ರ ಸಲ್ಲಿಸಿದ್ದಾರೆ. [ಚುನಾವಣೆಗೆ ಜೆಡಿಎಸ್ ಸ್ಪರ್ಧೆ ಇಲ್ಲ]

ಈಗಾಗಲೇ ಬಿಜೆಪಿ ಮೂರು ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಜೆಡಿಎಸ್ ಅಭ್ಯರ್ಥಿಗಳ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ. ಈಗಾಗಲೇ ಚುನಾವಣೆ ಅಧಿಸೂಚನೆ ಹೊರಬಿದ್ದಿದ್ದು ಆ.2ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ. ಆ.6ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದು, ಆ.21ರಂದು ಚುನಾವಣೆ ನಡೆಯಲಿದೆ.

English summary
Karnataka Chief Minister Siddaramaiah said, Congress will release candidate list for three constituencies by election on Thursday, July 31. August 2 is last date for nomination. By-election scheduled on August 21.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X