ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಚ್ಡಿಕೆ ಸಿಡಿ ವಿವಾದ, ತನಿಖೆಗೆ ರಾಷ್ಟ್ರಪತಿ ಒಪ್ಪಿಗೆ

|
Google Oneindia Kannada News

ಬೆಂಗಳೂರು, ಆ.12 : ಮೇಲ್ಮನೆ ಸದಸ್ಯತ್ವಕ್ಕೆ ಕೋಟಿ-ಕೋಟಿ ಹಣ ನೀಡಬೇಕಾಗುತ್ತದೆ ಎಂಬ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆಯ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಕೇಂದ್ರ ಗೃಹ ಸಚಿವಾಲಯಕ್ಕೆ ನಿರ್ದೇಶನ ನೀಡಿದ್ದಾರೆ. ಮಂಡ್ಯ ಜಿಲ್ಲಾ ಕಾಂಗ್ರೆಸ್ ಮುಖಂಡ ಸತ್ಯಾನಂದ ಅವರು ಈ ಬಗ್ಗೆ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದರು.

ವಿಧಾನ ಪರಿಷತ್‌ ಚುನಾವಣೆಯಲ್ಲಿ ಮತ ಹಾಕಲು ಪಕ್ಷದ ಶಾಸಕರು ಕೋಟಿ ಕೋಟಿ ಹಣ ಕೇಳುತ್ತಿದ್ದಾರೆ ಎಂದು ಪಕ್ಷದ ನಾಯಕರ ಜೊತೆ ಎಚ್‌.ಡಿ.ಕುಮಾರಸ್ವಾಮಿ ಹೇಳಿಕೊಳ್ಳುತ್ತಿರುವ ಧ್ವನಿಮುದ್ರಿತ ಸಿಡಿ ಕೆಲವು ದಿನಗಳ ಹಿಂದೆ ಬಹಿರಂಗವಾಗಿತ್ತು.

ವಿಜಾಪುರ ಜಿಲ್ಲೆ ಬಬಲೇಶ್ವರ ಕ್ಷೇತ್ರದ ಪರಾಜಿತ ಜೆಡಿಎಸ್ ಅಭ್ಯರ್ಥಿ ವಿಜುಗೌಡ ಪಾಟೀಲ್ ಅವರನ್ನು ವಿಧಾನಪರಿಷತ್ತಿಗೆ ಆಯ್ಕೆ ಮಾಡಬೇಕೆಂದು ಅವರ ಬೆಂಬಲಿಗರು ಕುಮಾರಸ್ವಾಮಿಯವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಈ ಮಾತುಕತೆ ನಡೆದಿತ್ತು.

Pranab Mukherjee

ವಿಜುಗೌಡ ಪಾಟೀಲ ಅಭಿಮಾನಿ ಬಳಗ ಎಂಬ ಹೆಸರಿನಲ್ಲಿ ಮಾತುಕತೆಯ ವಿವರಗಳುಳ್ಳ ಸಿಡಿ ಮಾಧ್ಯಮ ಕಚೇರಿಗಳಿಗೆ ತಲುಪಿತ್ತು. ಪ್ರಸ್ತುತ ವಿಧಾನಸಭೆಯಲ್ಲಿ 40 ಜೆಡಿಎಸ್‌‌ ಶಾಸಕರಿದ್ದು, ಅಭ್ಯರ್ಥಿಗಳಿಂದ ಶಾಸಕರು ಒಂದು ಕೋಟಿ ನೀಡುವಂತೆ ನನ್ನಲ್ಲಿ ಬೇಡಿಕೆ ಇಟ್ಟಿದ್ದಾರೆ ಎಂದು ಎಚ್ಡಿಕೆ ಹೇಳುವ ಮಾತು ಸಿಡಿಯಲ್ಲಿತ್ತು. [ರಾಷ್ಟ್ರಪತಿ ಭವನ ತಲುಪಿದ ಎಚ್ಡಿಕೆ ಸಿಡಿ ವಿವಾದ]

ಈ ಕುರಿತು ಟಿ.ಎಸ್.ಸತ್ಯಾನಂದ ಅವರು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಪತ್ರ ಬರೆದು, ರಾಜಕೀಯ ಪಕ್ಷದೊಂದು ಶಾಸಕರನ್ನು ಖರೀದಿ ಮಾಡುವ ಮೂಲಕ ಸಂವಿಧಾನಕ್ಕೆ ಅಪಚಾರ ಮಾಡಿದೆ. ಈ ಕುರಿತು ಸೂಕ್ತ ತನಿಖೆ ನಡೆಸಿ ಪಕ್ಷದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದರು. [ಸಿಡಿಯಲ್ಲೇನಿದೆ?]

ಈ ಮನವಿಗೆ ಸ್ಪಂದಿಸಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯಕ್ಕೆ ನಿರ್ದೇಶನ ನೀಡಿದ್ದಾರೆ. ಈ ಕುರಿತ ಆದೇಶ ಪ್ರತಿ ಮಂಗಳವಾರ ರಾಷ್ಟ್ರಪತಿ ಭವನದಿಂದ ಹೊರಬಿದ್ದಿದೆ.

English summary
President Pranab Mukherjee orders for appropriate action to be taken on Cash-for-MLC Seat Scam in Karnataka. Mandya District Congress leader TS Satyananda field complaint to President over JD(S) leader HD Kumaraswamy cash for MLC seat CD.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X