ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಚಿವ ಮಹದೇವ ಪ್ರಸಾದ್ ವಿರುದ್ಧ ಚಾರ್ಚ್‌ಶೀಟ್

|
Google Oneindia Kannada News

ಚಾಮರಾಜನಗರ, ಸೆ. 30 : ಕರ್ನಾಟಕ ಗೃಹ ಮಂಡಳಿಗೆ ಸುಳ್ಳು ಪ್ರಮಾಣ ಪತ್ರ ನೀಡಿ ನಿವೇಶನ ಪಡೆದಿದ್ದಾರೆ ಎಂಬ ಆರೋಪಗಳಿಗೆ ಸಂಬಂಧಿಸಿದಂತೆ ಸಹಕಾರ ಸಚಿವ ಎಚ್.ಎಸ್.ಮಹದೇವ ಪ್ರಸಾದ್ ವಿರುದ್ಧ ಲೋಕಾಯುಕ್ತ ಪೊಲೀಸರು ಚಾರ್ಚ್‌ಶೀಟ್ ಸಲ್ಲಿಸಿದ್ದಾರೆ. ಮಂಗಳವಾರ ಚಾಮರಾಜನಗರ ಕೋರ್ಟ್‌ಗೆ ಚಾರ್ಚ್‌ಶೀಟ್ ಸಲ್ಲಿಕೆಯಾಗಿದೆ.

ಸುಳ್ಳು ಪ್ರಮಾಣ ಪತ್ರ ನೀಡಿ ನಿವೇಶನ ಪಡೆದಿದ್ದಾರೆ ಎಂಬ ಆರೋಪಗಳಿಗೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಿ, ತನಿಖೆ ನಡೆಸಲು ಚಾಮರಾಜನಗರ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ ಲೋಕಾಯುಕ್ತ ಪೊಲೀಸರಿಗೆ ಆದೇಶ ನೀಡಿತ್ತು, ಇದರ ಅನ್ವಯ ತನಿಖೆ ನಡೆಸಿರುವ ಪೊಲೀಸರು ಮಂಗಳವಾ ಚಾರ್ಚ್‌ಶೀಟ್ ಅನ್ನು ಕೋರ್ಟ್‌ಗೆ ಸಲ್ಲಿಸಿದ್ದಾರೆ. [ಭೂ ಹಗರಣದ ಸುಳಿಯಲ್ಲಿ ಸಚಿವ ಮಹದೇವ ಪ್ರಸಾದ್]

H.S.Mahadev Prasad

ಹಿರೇಬೇಗೂರು ನಿವಾಸಿಯಾದ ನಂದೀಶ್ ಎಂಬುವವರು ಸಚಿವ ಮಹದೇವ ಪ್ರಸಾದ್ ಅವರು ಕರ್ನಾಟಕ ಗೃಹ ಮಂಡಳಿಗೆ ಸುಳ್ಳು ಪ್ರಮಾಣ ಪತ್ರ ನೀಡಿ ನಿವೇಶನ ಪಡೆದಿದ್ದಾರೆ ಎಂದು ಲೋಕಾಯುಕ್ತರಿಗೆ ದೂರು ನೀಡಿದ್ದರು. ಈ ಪ್ರರಕರಣ ಹೈಕೋರ್ಟ್‌ ಮೆಟ್ಟಿಲೇರಿ ನಂತರ ಚಾಮರಾಜನಗರ ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾವಣೆಗೊಂಡಿತ್ತು. [ಮಹದೇವ ಪ್ರಸಾದ್ ವಿರುದ್ಧ ಲೋಕಾಯುಕ್ತ ತನಿಖೆ]

ಆರೋಪವೇನು : ಕರ್ನಾಟಕ ಗೃಹ ಮಂಡಳಿ ಬಡವರಿಗೆಂದು ಮೀಸಲಾಗಿಟ್ಟಿದ್ದ ನಿವೇಶವನ್ನು ಮಹದೇವ ಪ್ರಸಾದ್ ಅಕ್ರಮವಾಗಿ ಖರೀದಿಸಿದ್ದಾರೆ ಎಂಬುದು ಆರೋಪವಾಗಿದೆ. ನಿಯಮದಂತೆ ಗೃಹ ಮಂಡಳಿ ನಿವೇಶನ ಖರೀದಿ ಮಾಡಬೇಕಾದರೆ ಅರ್ಜಿದಾರರು ಬೇರೆಲ್ಲೂ ನಿವೇಶನ ಹೊಂದಿರಬಾರದು. ಆದರೆ, ಮಹದೇವ ಪ್ರಸಾದ್ ಮೈಸೂರು, ಗುಡ್ಲುಪೇಟೆ, ಹಾಲಹಳ್ಳಿ ಪ್ರದೇಶಗಳಲ್ಲಿ ನಿವೇಶನ ಹೊಂದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

English summary
Lokayukta police filed charge sheet to Chamarajanagar court against Cooperation Minister H.S.Mahadev Prasad in the allegation of site purchasing by Karnataka Housing Board with fake records.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X