ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಿಮಗೆ ರೇಪ್ ಬಿಟ್ರೆ ಬೇರೆ ವಿಷಯ ಇಲ್ವಾ?

|
Google Oneindia Kannada News

ಬೆಂಗಳೂರು, ಜು. 22 : ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮಗಳ ವಿರುದ್ಧ ಅಸಮಾಧಾನಗೊಂಡಿದ್ದಾರೆ. "ನಿಮಗೆ ರೇಪ್ ಬಿಟ್ಟು ಬೇರೆ ವಿಚಾರದ ಬಗ್ಗೆ ಪ್ರಶ್ನೆ ಕೇಳಲು ಬರುವುದಿಲ್ಲವೇ? ಎಂದು ಮಾಧ್ಯಮಗಳ ವಿರುದ್ಧ ತಮ್ಮ ಕೋಪವನ್ನು ಹೊರಹಾಕಿದ್ದಾರೆ."

ಮಂಗಳವಾರ ಮಧ್ಯಾಹ್ನ ವಿಧಾನಸೌಧದ ಮೊಗಸಾಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮಗಳ ಕೈಗೆ ಸಿಕ್ಕರು. ತಕ್ಷಣ ಮಾಧ್ಯಮದವರು ಸಿಎಂ ತವರು ಜಿಲ್ಲೆ ಮೈಸೂರಿನಲ್ಲಿ ನಡೆದ ಅತ್ಯಾಚಾರ ಪ್ರಕರಣದ ಬಗ್ಗೆ ಪ್ರಶ್ನಿಸಿದರು. ಇದರಿಂದ ಅಸಮಾಧಾನಗೊಂಡ ಅವರು, "ನಿಮಗೆ ಬೇರೆ ವಿಚಾರದ ಬಗ್ಗೆ ಪ್ರಶ್ನೆ ಕೇಳಲು ಬರುವುದಿಲ್ಲವೇ?". ಎಂದರು.

ಕಳೆದ ಒಂದು ವಾರದಿಂದ ಅತ್ಯಾಚಾರ ಪ್ರಕರಣಗಳ ಬಗ್ಗೆ ಉತ್ತರ ನೀಡಿ ತಾಳ್ಮೆ ಕಳೆದುಕೊಂಡಿರುವ ಸಿದ್ದರಾಮಯ್ಯ ಇಂದು ಮಾಧ್ಯಮಗಳ ಹರಿಹಾಯ್ದರು. ಸದಾ ಅತ್ಯಾಚಾರದ ಬಗ್ಗೆಯೇ ಪ್ರಶ್ನಿಸಬೇಡಿ. ಮೈಸೂರಿನಲ್ಲಿ ನಡೆದ ಅತ್ಯಾಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಕಡ್ಡಿ ತುಂಡುಮಾಡಿದಂತೆ ಹೇಳಿದರು. [ರಾಜ್ಯದಲ್ಲಿನ ಅತ್ಯಾಚಾರ ಪ್ರಕರಣಗಳು]

ವಿಪಕ್ಷಗಳು ಗರಂ : ಅತ್ಯಾಚಾರ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿರುವ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿದೆ. ವಿವಿಧ ಸಂಘಟನೆಗಳ ಪ್ರಮುಖರು, ರಾಜಕೀಯ ಪಕ್ಷಗಳ ಮುಖಂಡರು ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಖಂಡಿಸಿದ್ದಾರೆ. ಯಾರು, ಏನು ಹೇಳಿದರು?

ಮೈ ಪರಚಿಕೊಂಡ ಸಿಎಂ

ಮೈ ಪರಚಿಕೊಂಡ ಸಿಎಂ

ಮಾಧ್ಯಮಗಳ ವಿರುದ್ಧ ಸಿಡಿಮಿಡಿಗೊಂಡ ಮುಖ್ಯಮಂತ್ರಿಗಳ ಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಅವರ ಸ್ಥಿತಿ ಕೈಲಾಗದವರು ಮೈ ಪರಚಿಕೊಂಡರು ಎಂಬಂತಾಗಿದೆ ಎಂದು ಲೇವಡಿ ಮಾಡಿರುವ ಅವರು, ಅತ್ಯಾಚಾರ ನಡೆಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಅವರಿಗೆ ಕಳವಳ ಇಲ್ಲ. ಆದರೆ ಈ ಪ್ರಕರಣಗಳು ಪ್ರಚಾರವಾಗುತ್ತಿರುವುದರ ಬಗ್ಗೆ ಆತಂಕಗೊಂಡಿದ್ದಾರೆ ಎಂದು ದೂರಿದ್ದಾರೆ.

ಸಿಎಂ ಮನೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳಲಿ

ಸಿಎಂ ಮನೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳಲಿ

ಮುಖ್ಯಮಂತ್ರಿಗಳ ಹೇಳಿಕೆಯನ್ನು ಖಂಡಿಸಿರುವ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷ ಮಂಜುಳಾ ಅವರು, ಅತ್ಯಾಚಾರ ಪ್ರಕರಣ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ. ಈ ಬಗ್ಗೆ ಮಾಧ್ಯಮಗಳು ಬೆಳಕು ಚೆಲ್ಲುತ್ತಿವೆ, ಅತ್ಯಾಚಾರ ಪ್ರಕರಣಗಳ ಬಗ್ಗೆ ಚರ್ಚೆ ನಡೆಸುವ ಸಂದರ್ಭದಲ್ಲಿ ನಿದ್ದೆ ಮಾಡುತ್ತಾರೆ, ಕೇಳಿದರೆ ರೇಗುತ್ತಾರೆ, ಸಿಎಂಗೆ ಆರೋಗ್ಯ ಸರಿ ಇಲ್ಲದಿದ್ದರೆ ಮನೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳಲಿ ಎಂದು ಸಲಹೆ ನೀಡಿದ್ದಾರೆ.

ಸಿಎಂ ನಡವಳಿಕೆ ಸರಿಯಲ್ಲ

ಸಿಎಂ ನಡವಳಿಕೆ ಸರಿಯಲ್ಲ

ಮುಖ್ಯಮಂತ್ರಿಗಳ ಹೇಳಿಕೆಯನ್ನು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಖಂಡಿಸಿದ್ದಾರೆ. ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿದಿರುವ ಮುಖ್ಯಮಂತ್ರಿಗಳು ಜನರಿಗೆ ಸಮಾಧಾನ ನೀಡುವ ಹೇಳಿಕೆ ನೀಡಬೇಕು. ಅದನ್ನು ಬಿಟ್ಟು ಮಾಧ್ಯಮಗಳ ಮೇಲೆ ಕೋಪಗೊಂಡರೆ ಏನು ಪ್ರಯೋಜನ? ಎಂದು ಅವರು ಪ್ರಶ್ನಿಸಿದ್ದಾರೆ.

ಪೊಲೀಸರನ್ನು ಅಮಾನತು ಮಾಡಿದರೆ ಸಾಲದು

ಪೊಲೀಸರನ್ನು ಅಮಾನತು ಮಾಡಿದರೆ ಸಾಲದು

ಮುಖ್ಯಮಂತ್ರಿಗಳ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣ ಗೌಡ, ಕೇವಲ ಪೊಲೀಸರನ್ನು ಅಮಾನತು ಮಾಡಿದರೆ ಸಮಸ್ಯೆ ಪರಿಹಾರವಾಗುವುದಿಲ್ಲ. ಹೆಣ್ಣು ಮಕ್ಕಳ ರಕ್ಷಣೆಗೆ ಸರ್ಕಾರ ಯಾವ ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿಗಳು ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

English summary
Karnataka Chief Minister Siddaramaiah unhappy with media, on Tuesday in vidhana soudha he asked media people why you are only asking question s about rape case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X