ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಿಕ್ಷಕರಾಗಲು ಇಂಗ್ಲಿಷ್, ಕಂಪ್ಯೂಟರ್ ಜ್ಞಾನ ಕಡ್ಡಾಯ

|
Google Oneindia Kannada News

ಬೆಂಗಳೂರು, ಸೆ. 26 : ಶಿಕ್ಷಕರಾಗಬಯಸುವವರಿಗೆ ಇಂಗ್ಲಿಷ್ ಹಾಗೂ ಕಂಪ್ಯೂಟರ್ ಜ್ಞಾನ ಕಡ್ಡಾಯಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಶಿಕ್ಷಕರ ನೇಮಕಾತಿಗೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ ತಲಾ 25 ಅಂಕಗಳ ಇಂಗ್ಲಿಷ್‌ ಹಾಗೂ ಕಂಪ್ಯೂಟರ್‌ ಜ್ಞಾನ ಪ್ರಶ್ನೆ ಪತ್ರಿಕೆಗಳು ಹೊಸದಾಗಿ ಸೇರ್ಪಡೆ ಮಾಡಲು ಚಿಂತನೆ ನಡೆದಿದೆ.

ಗುರುವಾರ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಈ ಕುರಿತು ಮಾಹಿತಿ ನೀಡಿದ್ದಾರೆ. ಪ್ರಸ್ತುತ ಸಾಮಾನ್ಯ ಹಾಗೂ ನಿರ್ದಿಷ್ಟ ವಿಷಯಗಳ ಪ್ರಶ್ನೆ ಪತ್ರಿಕೆಗಳನ್ನು ಶಿಕ್ಷಕರ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ನೀಡಲಾಗುತ್ತಿದೆ. ಇದಕ್ಕೆ ಇಂಗ್ಲಿಷ್ ಹಾಗೂ ಕಂಪ್ಯೂಟರ್‌ ಜ್ಞಾನದ ಪ್ರಶ್ನೆ ಪತ್ರಿಕೆಗಳನ್ನು ಸೇರ್ಪಡೆಗೊಳಿಸಲಾಗುತ್ತದೆ ಎಂದು ಸಚಿವರು ಹೇಳಿದರು.

Kimmane Rathnakar

ಒಂದರಿಂದ ಹತ್ತನೇ ತರಗತಿವರೆಗೆ ಇಂಗ್ಲಿಷ್ ಹಾಗೂ ಕಂಪ್ಯೂಟರ್‌ ಶಿಕ್ಷಣವನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಕರಾಗಬಯಸುವವರಿಗೆ ಈ ಎರಡು ವಿಷಯಗಳ ಬಗ್ಗೆ ಸಾಮಾನ್ಯ ಜ್ಞಾನ ಅತ್ಯಗತ್ಯವಾಗಿದ್ದು, ಆದ್ದರಿಂದ ಶಿಕ್ಷಕರ ನೇಮಕಾತಿಗೆ ನಡೆಯುವ ಸಂರ್ಭದಲ್ಲೇ ಈ ಕುರಿತು ಪರೀಕ್ಷೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದರು. [5,8ನೇ ತರಗತಿಗೆ ಮಕ್ಕಳಿಗಿನ್ನು ಪಬ್ಲಿಕ್ ಪರೀಕ್ಷೆ?]

10 ವರ್ಷ ಸೇವೆ ಕಡ್ಡಾಯ : ಮುಂದೆ ಶಿಕ್ಷಕರಾಗಿ ನೇಮಕವಾಗುವವರು ಯಾವ ಜಿಲ್ಲೆಯಲ್ಲಿ ನೇಮಕಗೊಂಡಿರುತ್ತಾರೋ ಮೊದಲ 10 ವರ್ಷ ಅಲ್ಲೇ ಕಾರ್ಯ ನಿರ್ವಹಿಸುವುದನ್ನು ಕಡ್ಡಾಯಗೊಳಿಸಲಾಗುವುದು ಎಂದು ಕಿಮ್ಮನೆ ರತ್ನಾಕರ್ ಹೇಳಿದ್ದಾರೆ. ಮೊದಲು ನೇಮಕಗೊಂಡ ಶಾಲೆಯಲ್ಲಿ ಮೂರು ಕಡ್ಡಾಯವಾಗಿ ಕೆಲಸ ಮಾಡಬೇಕು ಎಂಬ ನಿಯಮ ಜಾರಿಗೆ ತರಲಾಗುತ್ತದೆ ಎಂದರು. [ಶಿಕ್ಷಕರಿಗೆ ಸಚಿವ ಕಿಮ್ಮನೆ ಪಾಠ]

ಪಬ್ಲಿಕ್ ಪರೀಕ್ಷೆ ಬಗ್ಗೆ ಅಂತಿಮ ನಿರ್ಧಾರವಿಲ್ಲ : ಐದನೇ ಹಾಗೂ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್‌ ಪರೀಕ್ಷೆ ನಡೆಸುವ ಸರ್ಕಾರ ಆತುರದ ನಿರ್ಧಾರ ಕೈಗೊಳ್ಳುವುದಿಲ್ಲ ಎಂದು ಸಚಿವರು ಹೇಳಿದರು. ಈ ಬಗ್ಗೆ ಚಿಂತನೆ ಇರುವುದು ನಿಜ, ಈ ಬಗ್ಗೆ ಸಾರ್ವಜನಿಕ ಚರ್ಚೆ ನಡೆಯಲಿ ಎಂಬುದು ಸರ್ಕಾರ ಉದ್ದೇಶ. ಚರ್ಚೆ ನಡೆದು ಅಭಿಪ್ರಾಯ ಮಂಡನೆಯಾದ ಬಳಿಕ ಈ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

English summary
Karnataka Primary and Secondary Education Minister Kimmane Ratnakar said, basic computer and English language test of 25 marks each will soon be made mandatory for teachers recruitment.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X