ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪರಮೇಶ್ವರ್ ಡಿಸಿಎಂ ಆಗ್ತಾರಾ? ಜೂನ್ 7ಕ್ಕೆ ನಿರ್ಧಾರ

|
Google Oneindia Kannada News

ಬೆಂಗಳೂರು, ಜೂನ್ 5 : ವಿಧಾನಪರಿಷತ್ ಮತ್ತು ರಾಜ್ಯಸಭೆ ಚುನಾವಣೆಯ ಕುರಿತು ಕಾಂಗ್ರೆಸ್ ಪಕ್ಷದಲ್ಲಿ ಉಂಟಾಗಿದ್ದ ಗೊಂದಲಗಳು ಬಗೆಹರಿದಿದ್ದು ಜೂನ್ 7ರಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಡಿಸಿಎಂ ಆಗಲಿದ್ದಾರೆಯೇ ಎಂಬ ಕುತೂಹಲಕ್ಕೂ ಅಂದು ತೆರೆ ಬೀಳಲಿದೆ.

ನವದೆಹಲಿಯಲ್ಲಿ ಗುರುವಾರ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯಸಭೆ ಮತ್ತು ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಜೂನ್ 7ರಂದು ಸೋನಿಯಾ ಗಾಂಧಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದಾರೆ.

Digvijay Singh

ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್, ರಾಜ್ಯಸಭೆ ಮತ್ತು ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದ್ದು, ರಾಜ್ಯಸಭೆಗೆ ಕರ್ನಾಕಟದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುತ್ತದೆ ಎಂದು ಹೇಳಿದರು. [ದೆಹಲಿಯಲ್ಲಿ ಪರಿಷತ್ ಫೈಟ್]

ಜೂನ್ 7ರಂದು ವಿಧಾನಪರಿಷತ್ ಮತ್ತು ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ದಿಗ್ವಿಜಯ್ ಸಿಂಗ್ ತಿಳಿಸಿದರು. ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರಿಗೆ ಡಿಸಿಎಂ ಹುದ್ದೆ ನೀಡುವ ಕುರಿತು ಶನಿವಾರ ನಿರ್ಧಾರ ಪ್ರಕಟಗೊಳ್ಳಲಿದೆ ಎಂದು ಹೇಳಿ ಕುತೂಹಲ ಮೂಡಿಸಿದರು.

ಚಿದಂಬರಂಗೆ ತಪ್ಪಿದ ಅವಕಾಶ : ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರನ್ನು ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆ ಮಾಡಬೇಕು ಎಂಬ ಮಾತುಗಳು ಕೇಳಿಬಂದಿತ್ತು. ಆದರೆ, ಇಂದಿನ ಸಭೆಯಲ್ಲಿ ಕರ್ನಾಟಕದವರನ್ನು ಆಯ್ಕೆ ಮಾಡಬೇಕು ಎಂದು ತೀರ್ಮಾನ ಕೈಗೊಳ್ಳಲಾಗಿದೆ. ಆದ್ದರಿಂದ ಪಿ.ಚಿದಂಬರಂ ಆಯ್ಕೆ ಆಗುವುದಿಲ್ಲ ಎಂಬುದು ಖಾತ್ರಿಯಾಗಿದೆ.

ಚುನಾವಣೆ ಎಂದು : ರಾಜ್ಯಸಭೆಯ ನಾಲ್ಕು ಮತ್ತು ವಿಧಾನಪರಿಷತ್ತಿನ ಏಳು ಸ್ಥಾನಗಳಿಗೆ ನಾಮಪತ್ರ ಸಲ್ಲಿಸಲು ಜೂನ್ 9 ಕೊನೆಯ ದಿನವಾಗಿದೆ. ನಾಮಪತ್ರ ವಾಪಸ್ ಪಡೆಯಲು ಜೂ.12 ಕೊನೆ ದಿನವಾಗಿದ್ದು, ಜೂ. 19ರಂದು ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು, ಅಂದು ಸಂಜೆ 5 ಫಲಿತಾಂಶ ಘೋಷಣೆಯಾಗಲಿದೆ. [ಯಾವ ಸ್ಥಾನಗಳು ತೆರವಾಗಲಿವೆ?]

English summary
Karnataka Congress will release its candidate list for Legislative Council and Rajya Sabha election on June 7 said, AICC general secretary and in charge of Karnataka Congress Digvijay Singh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X