ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಪಿಸಿಸಿ ಕಚೇರಿಯಲ್ಲಿ ಇಂದು ಸಮನ್ವಯ ಸಮಿತಿ ಸಭೆ

|
Google Oneindia Kannada News

ಬೆಂಗಳೂರು, ಆ.26 : ಉಪ ಚುನಾವಣೆಯಲ್ಲಿ ಎರಡು ಸ್ಥಾನಗಳನ್ನು ಗೆದ್ದು ಬೀಗುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಸಚಿವ ಸಂಪುಟ ವಿಸ್ತರಣೆ ಸಂಕಟ ಆರಂಭವಾಗಿದೆ. ಮಂಗಳವಾರ ಕಾಂಗ್ರೆಸ್ ಸಮನ್ವಯ ಸಮಿತಿ ಸಭೆ ನಡೆಯಲಿದ್ದು, ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅಧ್ಯಕ್ಷತೆಯಲ್ಲಿ, ಸಮನ್ವಯ ಸಮಿತಿ ಸಭೆ ಕೆಪಿಸಿಸಿ ಕಚೇರಿಯಲ್ಲಿ ಮಧ್ಯಾಹ್ನ 12.30ಕ್ಕೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಇಂಧನ ಸಚಿವ ಡಿ.ಕೆ.ಶಿವಕುಮಾರ್, ಗೃಹ ಸಚಿವ ಕೆ.ಜೆ.ಜಾರ್ಜ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

Digvijay Singh

ಸಚಿವ ಸಂಪುಟ ವಿಸ್ತರಣೆ, ನಿಗಮ ಮಂಡಳಿಗಳ ನೇಮಕ, ಡಿನೋಟಿಫಿಕೇಶನ್ ಪ್ರಕರಣಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ. ಸೋಮವಾರ ಪ್ರಕಟಗೊಂಡ ಮೂರು ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ. [ಉಪ ಚುನಾವಣೆ ಫಲಿತಾಂಶ ಇಲ್ಲಿದೆ]

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಪ್ರಸ್ತುತ ಐದು ಸ್ಥಾನಗಳು ಖಾಲಿ ಇವೆ. ಈ ಪೈಕಿ ಒಂದನ್ನು ಖಾಲಿ ಇಟ್ಟುಕೊಂಡು ನಾಲ್ಕನ್ನು ಮಾತ್ರ ಭರ್ತಿ ಮಾಡಲು ಸಿಎಂ ಚಿಂತನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಸಿಎಂ ಸೋಮವಾರ ಘೋಷಣೆ ಮಾಡಿದ್ದು, ಯಾರು ಸಂಪುಟ ಸೇರಬೇಕು ಎಂಬ ಬಗ್ಗೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ. [ಸಂಪುಟ ಸೇರುತ್ತಾರಾ ಪರಮೇಶ್ವರ್]

ಹೈಕಮಾಂಡ್ ನಾಯಕರು ಒಪ್ಪಿಗೆ ನೀಡಿದರೆ ಪರಮೇಶ್ವರ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ, ಪರಮೇಶ್ವರ್ ಅವರಿಗೆ ಯಾವ ಹುದ್ದೆ ನೀಡಲಾಗುತ್ತದೆ ಎಂಬುದು ಕುತೂಹಲ ಮೂಡಿಸಿದೆ. ಕೇವಲ ಸಚಿವರಾಗಿ ಸಂಪುಟ ಸೇರುವುದಕ್ಕೆ ಪರಮೇಶ್ವರ್ ಒಪ್ಪುತ್ತಿಲ್ಲ. ಉಪಮುಖ್ಯಮಂತ್ರಿ ಹುದ್ದೆ ನೀಡಲು ಸಿದ್ದರಾಮಯ್ಯ ಸೇರಿದಂತೆ ಕೆಲವು ನಾಯಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

English summary
AICC general secretary and in-charge of Karnataka Digvijay Singh, is scheduled to chair the State Congress coordination committee meeting on Tuesday at KPCC office Bangalore.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X