ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿದ್ದರಾಮಯ್ಯಗೆ ಶೆಟ್ಟರ್ ಕೊಟ್ಟ ಸಲಹೆ ಏನು?

|
Google Oneindia Kannada News

ಬೆಂಗಳೂರು, ಜೂ. 17 : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪ್ರತಿಪಕ್ಷದ ನಾಯಕರ ನಡುವೆ ಮಾತಿನ ಸಮರ ಆರಂಭವಾಗಿದೆ. ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಸಿಎಂ ಆಡಳಿತ ನಡೆಸುವುದು ಹೇಗೆ? ಎಂದು ಮೋದಿ ಅವರಿಂದ ಎರಡು ದಿನ ತರಬೇತಿ ಪಡೆಯಲಿ ಎಂದು ಹೇಳಿದ್ದು, ಸಿದ್ದರಾಮಯ್ಯ ಸಹ ಇದಕ್ಕೆ ಸರಿಯಾದ ತಿರುಗೇಟು ನೀಡಿದ್ದಾರೆ.

ಕೊಪ್ಪಳದಲ್ಲಿ ಸೋಮವಾರ ಈಶಾನ್ಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಶೀಲ್‌ ನಮೋಶಿ ಪರವಾಗಿ ಪ್ರಚಾರ ನಡೆಸಿ ಮಾತನಾಡಿದ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದಿದೆ. ರಾಜ್ಯದ ಸರ್ವಪಕ್ಷ ನಿಯೋಗ ಪ್ರಧಾನಿ ಬಳಿ ತೆರಳಿದ್ದಾಗ ಎಲ್ಲರೂ ಕಾವೇರಿ ವಿಷಯವನ್ನು ಗಂಭೀರವಾಗಿ ಚರ್ಚೆ ನಡೆಸುತ್ತಿದ್ದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆ ಮಾಡುತ್ತಿದ್ದರು ಎಂದು ವ್ಯಂಗ್ಯವಾಡಿದರು.

ಹಣಕಾಸು ಇಲಾಖೆಯನ್ನು ತಮ್ಮ ಬಳಿ ಇಟ್ಟುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತ ನಿರ್ವಹಣೆಯಲ್ಲಿ ವಿಫಲರಾಗಿದ್ದಾರೆ. ಆಡಳಿತ ಹೇಗೆ ನಡೆಸಬೇಕು? ಎಂಬುದನ್ನು ಅರಿಯಲು ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಎರಡು ದಿನ ತರಬೇತಿ ಪಡೆಯಲಿ ಎಂದು ಶೆಟ್ಟರ್ ಸಲಹೆ ನೀಡಿದರು.

ಇದಕ್ಕೆ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ "ಮಾಡಬಾರದ್ದನ್ನು ಮಾಡಿ ಜೈಲಿಗೆ ಹೋದವರು, ಈಗ ಪ್ರತಿಪಕ್ಷ ಸ್ಥಾನದಲ್ಲಿ ಕುಳಿತಿದ್ದಾರೆ. ಅಂತಹವರು ನಮಗೇನು ಪಾಠ ಹೇಳ್ತಾರ್ರೀ?" ಎಂದು ಶೆಟ್ಟರ್ ಅವರನ್ನು ಪ್ರಶ್ನಿಸಿದ್ದಾರೆ. ಚಿತ್ರಗಳಲ್ಲಿ ಆರೋಪ ಪ್ರತ್ಯಾರೋಪ

ಕನ್ನಹಾಕಲು ಅನ್ನಭಾಗ್ಯ ಯೋಜನೆ ತಂದಿದ್ದಾರೆ

ಕನ್ನಹಾಕಲು ಅನ್ನಭಾಗ್ಯ ಯೋಜನೆ ತಂದಿದ್ದಾರೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತವನ್ನು ಟೀಕಿಸಿರುವ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಕಾಂಗ್ರೆಸ್‌ ಸರ್ಕಾರ ನಿದ್ರಾವಸ್ಥೆಯಲ್ಲಿದೆ. ಕಾಂಗ್ರೆಸ್‌ ಪಕ್ಷದಲ್ಲಿ ಒಳಜಗಳ ಭುಗಿಲೆದ್ದಿದೆ. ಕಾಂಗ್ರೆಸ್‌ ಶಾಸಕರು, ಮಂತ್ರಿಗಳು ಮುಖ್ಯಮಂತ್ರಿ ಅವರ ಮಾತು ಕೇಳುತ್ತಿಲ್ಲ. ಬಿಜೆಪಿ ಸರ್ಕಾರದ ಎಲ್ಲ ಯೋಜನೆಗಳನ್ನು ಸ್ಥಗಿತಗೊಳಿಸಿದ ಸಿದ್ದರಾಮಯ್ಯ, ಕನ್ನ ಹಾಕಲು ಅನುಕೂಲವಾಗಿರುವ ಅನ್ನಭಾಗ್ಯದಂಥ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಎಂದು ಟೀಕಿಸಿದರು.

ತರಬೇತಿ ಪಡೆದು ಬರಲು ಸಲಹೆ

ತರಬೇತಿ ಪಡೆದು ಬರಲು ಸಲಹೆ

ಹಣಕಾಸು ಇಲಾಖೆಯನ್ನು ತಮ್ಮ ಬಳಿ ಇಟ್ಟುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತ ನಿರ್ವಹಣೆಯಲ್ಲಿ ವಿಫಲರಾಗಿದ್ದಾರೆ. ಆಡಳಿತ ಹೇಗೆ ನಡೆಸಬೇಕು? ಎಂಬುದನ್ನು ಅರಿಯಲು ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಎರಡು ದಿನ ತರಬೇತಿ ಪಡೆಯಲಿ ಎಂದು ಶೆಟ್ಟರ್ ಸಲಹೆ ನೀಡಿದರು.

ಆರ್ಥಿಕ ಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಿ

ಆರ್ಥಿಕ ಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಿ

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಹ ಸಿದ್ದರಾಮಯ್ಯ ಅವರ ಆಡಳಿತ ವೈಖರಿಯನ್ನು ಟೀಕಿಸಿದ್ದು, ರಾಜ್ಯದ ಹಣಕಾಸು ಸ್ಥಿತಿ ಸಂಪೂರ್ಣ ಹದಗೆಟ್ಟಿದ್ದು, ಈ ಕುರಿತಂತೆ ಶ್ವೇತ ಪತ್ರವನ್ನು ಹೊರಡಿಸಬೇಕೆಂದು ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ. ರಾಜ್ಯದಲ್ಲಿ ಮಳೆ ಕೊರತೆ ಕಂಡು ಬಂದಿದ್ದು, ರಾಜ್ಯ ಸರ್ಕಾರ ಪರಿಸ್ಥಿತಿ ಎದುರಿಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ತಿರುಗೇಟು ಕೊಟ್ಟ ಸಿಎಂ ಸಿದ್ದರಾಮಯ್ಯ

ತಿರುಗೇಟು ಕೊಟ್ಟ ಸಿಎಂ ಸಿದ್ದರಾಮಯ್ಯ

ಬಿಜೆಪಿ ಆರೋಪಗಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ. "ಮಾಡಬಾರದ್ದನ್ನು ಮಾಡಿ ಜೈಲಿಗೆ ಹೋದವರು, ಈಗ ಪ್ರತಿಪಕ್ಷ ಸ್ಥಾನದಲ್ಲಿ ಕುಳಿತಿದ್ದಾರೆ. ಅಂತಹವರು ನಮಗೇನು ಪಾಠ ಹೇಳ್ತಾರ್ರೀ?" ಎಂದು ಹೇಳಿರುವ ಸಿಎಂ, ಬಿಜೆಪಿ ಅವರಿಂದ ನಾವು ಪಾಠ ಕಲಿಯಬೇಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

English summary
Former chief minister Jagadish Shettar said, Congress government in the Karnataka, led by Siddaramaiah, was yet to take off, even a year after assuming office. Shettar said the government was in a slumber and the Congress leaders themselves were criticizing it.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X