ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

300 ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು

|
Google Oneindia Kannada News

ಬೆಂಗಳೂರು, ಏ. 23 : ರಾಜ್ಯದಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ರಾಜ್ಯದ 300 ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಹೆಚ್. ಕೆ. ಪಾಟೀಲ್ ಹೇಳಿದ್ದಾರೆ. ಕುಡಿಯುವ ನೀರು ಪೂರೈಕೆ ಮಾಡಲು ಯಾವುದೇ ಅನುದಾನದ ಕೊರತೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಬೆಂಗಳೂರಿನಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿದ ಸಚಿವ ಎಚ್.ಕೆ.ಪಾಟೀಲ್, ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆಯ ಅನ್ವಯ ರಾಜ್ಯದ ಎಲ್ಲಾ ಜಿಲ್ಲಾ ಆಡಳಿತಗಳ ಬಳಿ 240 ಕೋಟಿ ರೂ ಅನುದಾನ ಲಭ್ಯವಿದೆ. ಸ್ಥಳೀಯ ಅವಶ್ಯಕತೆಗಳ ಆಧರಿಸಿ ಮುಖ್ಯವಾಗಿ ಕೊಳವೆ ಬಾವಿಗಳ ಪುನಶ್ಚೇತನವೂ ಸೇರಿದಂತೆ ಅಗತ್ಯ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಅವುಗಳಿಗೆ ಸೂಚನೆ ನೀಡಲಾಗಿದೆ ಎಂದರು.

HK Patil

ಎಲ್ಲಾ ಗ್ರಾಮ ಪಂಚಾಯಿತಿಗಳು ಕುಡಿಯುವ ನೀರಿನ ಪೂರೈಕೆಗೆ ಸಂಬಂಧಿಸಿದಂತೆ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿವೆ. ಅವುಗಳನ್ನು ಅನುಷ್ಟಾನಗೊಳಿಸಿ ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು. ಪ್ರಕೃತಿ ವಿಕೋಪ ಪರಿಹಾರ ನಿಧಿಯಲ್ಲಿ ಅನುಷ್ಠಾನಗೊಳಿಸಲಾಗದ ವಿದ್ಯುತ್ ಸಂಪರ್ಕ ಕಲ್ಪಿಸುವಂತಹ ಕಾಮಗಾರಿಗಳನ್ನು ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಯೋಜನೆಯ ಅಡಿಯಲ್ಲಿ ಅನುಷ್ಠಾನಗೊಳಿಸುವಂತೆ ಜಿಲ್ಲಾಡಳಿತಗಳಿಗೆ ತಿಳಿಸಲಾಗಿದೆ ಎಂದು ಹೇಳಿದರು.

ಸದ್ಯ ಜಿಲ್ಲಾಡಳಿತದ ಬಳಿ 240 ಕೋಟಿ ರೂ ಅನುದಾನವಿದೆ. ಜೊತೆಗೆ ಹೆಚ್ಚುವರಿಯಾಗಿ 100 ಕೋಟಿ ರೂ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅರ್ಥಿಕ ಇಲಾಖೆಗೆ ಆದೇಶ ನೀಡಿದ್ದಾರೆ. ಈ ಮೊತ್ತವೂ ಒಂದೆರಡು ದಿನಗಳಲ್ಲಿ ಜಿಲ್ಲಾಡಳಿತಗಳಿಗೆ ಸಂದಾಯವಾಗಲಿದೆ. ಎಂದರು. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಜಲ್ಲೆಗಳಲ್ಲಿ ಒಟ್ಟಾರೆ 490 ಕೋಟಿ ರೂ ಅನುದಾನವಿದೆ ಎಂದು ವಿವರಣೆ ನೀಡಿದರು.

ಕುಡಿಯುವ ನೀರಿನ ಸಮಸ್ಯೆ ಇಲ್ಲ : 2013ರಲ್ಲಿ ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆಯ ಅಡಿಯಲ್ಲಿ 1744 ಕೋಟಿ ರೂ ವೆಚ್ಚ ಮಾಡಲಾಗಿದೆ. ಈ ಬಾರಿಯೂ ಅದೇ ಪ್ರಮಾಣದಲ್ಲಿ ಅನುದಾನ ಲಭ್ಯವಿರುವುದರಿಂದ ಬೇಸಿಗೆಯಲ್ಲಿ ಕುಡಿಯುವ ನೀರು ಸಮಸ್ಯೆ ಎದುರಾಗುವುದಿಲ್ಲ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.

ತಪ್ಪು ಮಾಹಿತಿ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಆರ್ಥಿಕ ವರ್ಷದ ಕೊನೆಯ ತಿಂಗಳಲ್ಲೇ ಹೆಚ್ಚು ವೆಚ್ಚ ಮಾಡಲಾಗಿದೆ ಎಂದು ಕೆಲವು ಮಾಧ್ಯಮಗಳಲ್ಲಿ ತಪ್ಪು ಮಾಹಿತಿ ಪ್ರಕಟವಾಗಿದೆ. ಈ ಆರೋಪವು ಸತ್ಯಕ್ಕೆ ದೂರವಾಗಿದ್ದು ಎಂದು ತಿಳಿಸಿದ ಎಚ್.ಕೆ.ಪಾಟೀಲ್, ಆರ್ಥಿಕ ಶಿಸ್ತು ಪಾಲಿಸುತ್ತಿರುವ ಇಲಾಖೆಗಳಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಮುಖವಾಗಿದೆ. ಇಲಾಖೆಯಲ್ಲಿ ಅನುದಾನ ದುರ್ಬಳಕೆ ಮಾಹಿತಿ ಇದ್ದರೆ, ದೂರು ದಾಖಲಿಸಲು ಮುಕ್ತ ಅವಕಾಶ ಕಲ್ಪಿಸಲಾಗಿದೆ ಎಂದರು.

English summary
Rural Development and Panchayat Raj Minister H.K. Patil addressing press persons in Bangalore and said, district administration will providing drinking water to 300 villages through Water tanker and there is no shortage of funds for drinking water supply.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X