ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಂಪಾದಕರು ಆಸ್ತಿ ಘೋಷಿಸಲಿ: ರೋಷನ್‌ ಬೇಗ್‌

By Ashwath
|
Google Oneindia Kannada News

ಬೆಂಗಳೂರು,ಜೂ.7: ಮುಕ್ತ ಹಾಗೂ ಪಾರದರ್ಶ‌ಕ ಪತ್ರಿಕೋದ್ಯಮದ ದೃಷ್ಟಿಯಿಂದ ಪತ್ರಿಕೆ ಮತ್ತು ದೃಶ್ಯ ಮಾಧ್ಯಮಗಳ ಸಂಪಾದಕರೂ ಮುಂದಿನ ದಿನಗಳಲ್ಲಿ ತಮ್ಮ ಆಸ್ತಿ ವಿವರ ಸಲ್ಲಿಸಬೇಕಾಗಬಹುದು ಎಂದು ವಾರ್ತಾ ಸಚಿವ ಆರ್‌. ರೋಷನ್‌ ಬೇಗ್‌ ಹೇಳಿದ್ದಾರೆ.

ವಿಕಾಸಸೌಧದಲ್ಲಿ ಜೂ.6 ಶುಕ್ರವಾರದಂದು ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸೇರಿದಂತೆ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಹಮ್ಮಿಕೊಂಡಿದ್ದ 'ಭಾಷಾ ಪತ್ರಿಕೋದ್ಯಮ ಕಾರ್ಯಾಗಾರ'ದಲ್ಲಿ ಅವರು ಮಾತನಾಡಿದರು.

 Roshan Baig
ವಿಧಾನಸಭೆ ಮತ್ತು ವಿಧಾನ ಪರಿಷತ್‌ ಸದಸ್ಯರು ಲೋಕಾಯುಕ್ತರಿಗೆ ತಮ್ಮ ಆಸ್ತಿ ವಿವರ ಸಲ್ಲಿಸಿಲ್ಲ ಎಂದು ಮಾಧ್ಯಮಗಳು ಸುದ್ದಿ ಪ್ರಕಟಿಸುತ್ತವೆ. ಅದೇ ರೀತಿಯಾಗಿ ಮಾಧ್ಯಮಗಳ ಸಂಪಾದಕರು ಆಸ್ತಿ ಘೋಷಣೆ ಯಾಕೆ ಮಾಡಬಾರದು ಎಂದು ಸಚಿವರು ಪ್ರಶ್ನಿಸಿದ್ದಾರೆ.[ಸದ್ಯದಲ್ಲೇ ಅತ್ಯಾಧುನಿಕ ಮಾಧ್ಯಮ ಕೇಂದ್ರ ಸ್ಥಾಪನೆ]

ಮುಕ್ತ ಮತ್ತು ನ್ಯಾಯಸಮ್ಮತ ಪತ್ರಿಕೋದ್ಯಮದ ದೃಷ್ಟಿಯಿಂದ ಹಿರಿಯ ಪತ್ರಕರ್ತ ಕುಲದೀಪ್‌ ನಯ್ಯರ್‌ ಅವರ ಅಭಿಪ್ರಾಯವನ್ನು ನಾನು ಸ್ವಾಗತಿಸುತ್ತೇನೆ. ಸಂಪಾದಕರುಗಳು ತಮ್ಮ ಆಸ್ತಿ ವಿವರ ಸಲ್ಲಿಸುವಂತಾದರೆ ಉತ್ತಮ ಬೆಳವಣಿಗೆಯಾಗಲಿದೆ ಎಂದು ಸಚಿವ ಆರ್‌. ರೋಷನ್‌ ಬೇಗ್‌ ಅಭಿಪ್ರಾಯ ಪಟ್ಟಿದ್ದಾರೆ.

English summary
Karnataka information minister R Roshan Baig on Friday said print and electronic media editors should declare their assets and liabilities to the public. Participating in a seminar on vernacular journalism, Baig said this would be in the interests of fair and free journalism.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X