ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅ.16ರಿಂದ ಹಾಸನಾಂಬೆ ದರ್ಶನ ಪಡೆಯಿರಿ

|
Google Oneindia Kannada News

ಹಾಸನ, ಸೆ. 25 : ಪುರಾಣ ಪ್ರಸಿದ್ಧ ಹಾಸನಾಂಬೆ ದೇವಾಲಯ ಅ.16ರಿಂದ ಎಂಟು ದಿನಗಳ ಕಾಲ ತೆರೆದಿರುತ್ತದೆ. ದೇವಿಯ ದರ್ಶನಕ್ಕೆ ಬರುವ ಭಕ್ತಾದಿಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಬುಧವಾರ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಹಾಸನ ಹೆಚ್ಚುವರಿ ಜಿಲ್ಲಾಧಿಕಾರಿ ಗೋಪಾಲಕೃಷ್ಣ, ಮುಜರಾಯಿ ಇಲಾಖೆ ಅಧಿಕಾರಿಗಳು, ದೇವಾಲಯದ ಆಡಳಿತ ಮಂಡಳಿ ಸದಸ್ಯರು ಬುಧವಾರ ಸಭೆ ಸೇರಿ ದೇವಾಲಯ ತೆರೆಯುವ ಬಗ್ಗೆ ತೀರ್ಮಾನ ಕೈಗೊಂಡಿದ್ದಾರೆ. ಅ.16ರ ಗುರುವಾರದಿಂದ ಎಂಟು ದಿನಗಳ ಕಾಲ ಹಾಸನಾಂಬೆ ದರ್ಶನವನ್ನು ಪಡೆಯಬಹುದಾಗಿದೆ. [ಹಾಸಬಾಂಬೆ ಸ್ಥಳ ಪುರಾಣ ಓದಿ]

Hasanamba Temple

ಈ ಬಾರಿ ದೇವಾಲಯದಲ್ಲಿ ಎಲ್‌ಸಿಡಿ ಟಿವಿಗಳನ್ನು ಅಳವಡಿಸುವ ಕುರಿತು ಚರ್ಚೆ ನಡೆಸಲಾಗಿದೆ. ಹಾಸನ ಜಿಲ್ಲೆಯ ಇತಿಹಾಸ, ಕಲೆ, ಸಂಸ್ಕೃತಿಯ ಕುರಿತು ಈ ಟಿವಿಗಳಲ್ಲಿ ಮಾಹಿತಿ ಪ್ರಸಾರ ಮಾಡಲು ಜಿಲ್ಲಾಡಳಿತ ತೀರ್ಮಾನ ಕೈಗೊಂಡಿದೆ. ದೇವಾಲಯದ ಆವರಣದಲ್ಲಿ ಸಿಸಿಟಿವಿ ಅಳವಡಿಸುವಂತೆಯೂ ಆಡಳಿತ ಮಂಡಳಿ ಜಿಲ್ಲಾಡಳಿತಕ್ಕೆ ಮನವಿ ಮಾಡಿದೆ.

ಮೂಲಸೌಕರ್ಯ ಒದಗಿಸಿ : ಅ.16ರಿಂದ ಎಂಟು ದಿನಗಳ ಕಾಲ ಲಕ್ಷಾಂತರ ಭಕ್ತರು ದೇವಿಯ ದರ್ಶನಕ್ಕೆ ಆಗಮಿಸುವುರಿಂದ ಅಗತ್ಯ ಮೂಲಭೂತ ಸೌಕರ್ಯ ಒದಗಿಸಲು ತೀರ್ಮಾನಿಸಲಾಯಿತು. ಭಕ್ತಾದಿಗಳಿಗೆ ಕುಡಿಯುವ ನೀರು, ಶೌಚಾಲಯ ಮುಂತಾದ ವ್ಯವಸ್ಥೆಗಳನ್ನು ಮಾಡುವಂತೆ ದೇವಾಲಯದ ಆಡಳಿತ ಮಂಡಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ವರ್ಷಕ್ಕೊಮ್ಮೆ ಮಾತ್ರ ಹಾಸನಾಂಬೆ ದರ್ಶನ ಪಡೆಯಬಹುದಾಗಿದೆ. ಪ್ರತಿ ಸಂವತ್ಸರದ ಅಶ್ವಯುಜ ಮಾಸದ ಹುಣ್ಣಿಮೆಯ ನಂತರದ ಗುರುವಾರ ದೇವಿಯ ಗರ್ಭಗುಡಿಯನ್ನು ತೆರೆಯಲಾಗುತ್ತದೆ. 2013ರಲ್ಲಿ 13 ದಿನಗಳ ಕಾಲ ಮತ್ತು 2012ರಲ್ಲಿ 15 ದಿನಗಳ ಕಾಲ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.

English summary
The historic Hasanamba Temple in Hassan district will be open for eight days from October 16. A decision to this effect was taken at a meeting of revenue officials and Muzarai committee members.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X